ರಾಜವನಪಾಲಕನಾದ ಆಸಾಫನು ದೇವಾಲಯದ ಕೋಟೆಯ ಬಾಗಿಲುಗಳು, ಪಟ್ಟಣದ ಪೌಳಿಗೋಡೆ, ನಾನು ಸೇರುವ ಮನೆ ಇವುಗಳಿಗೆ ಬೇಕಾಗುವ ತೊಲೆಗಳಿಗಾಗಿ ಮರಗಳನ್ನು ಕೊಡುವ ಹಾಗೆ ಅರಸನು ನನಗೆ ಪತ್ರಗಳನ್ನು ಕೊಡಬೇಕು” ಎಂದು ಬಿನ್ನವಿಸಲು, ನನ್ನ ದೇವರ ಕೃಪಾಹಸ್ತಪಾಲನೆ ನನಗಿದ್ದುದರಿಂದ ಅರಸನು ಅವುಗಳನ್ನು ನನಗೆ ಕೊಟ್ಟನು.
TSK
TSK · ಮಿಕ 7:11
مراجع Treasury of Scripture Knowledge في ಕನ್ನಡ IRV.
¶ ಹೀಗೆ ಮಹಾಯಾಜಕನಾದ ಎಲ್ಯಾಷೀಬನೂ ಅವನ ಕುಟುಂಬದ ಯಾಜಕರೂ ಕುರಿಬಾಗಿಲನ್ನು ಕಟ್ಟಿ ಅದನ್ನು ಪ್ರತಿಷ್ಠಿಸಿ ಅದಕ್ಕೆ ಬಾಗಿಲುಗಳನ್ನು ಇಟ್ಟರು. ಅಲ್ಲಿಂದ ಹಮ್ಮೆಯಾ ಗೋಪುರದವರೆಗೆ ಗೋಡೆಕಟ್ಟಿ ಅದನ್ನು ಪ್ರತಿಷ್ಠಿಸಿದರು. ಅಲ್ಲಿಂದ ಹನನೇಲ್ ಗೋಪುರದವರೆಗೂ ಕಟ್ಟಿದರು.
¶ ಆದರೂ ನಾವು ಕಟ್ಟುವ ಕೆಲಸವನ್ನು ಮುಂದುವರಿಸಿದೆವು. ಜನರು ಅದಕ್ಕೆ ಮನಸ್ಸು ಕೊಟ್ಟಿದ್ದರಿಂದ ಗೋಡೆಯೆಲ್ಲಾ ಅರ್ಧ ಎತ್ತರದವರೆಗೂ ಸಮನಾಗಿ ಕಟ್ಟಲಾಯಿತು.
ಕುಗ್ಗಿದವಳೇ, ಗಾಳಿಯ ಬಡಿತಕ್ಕೆ ಗುರಿಯಾದವಳೇ, ಯಾರೂ ಸಂತೈಸದವಳೇ, ಇಗೋ, ಇಂದ್ರನೀಲಮಣಿಗಳಿಂದ ನಿನಗೆ ಅಸ್ತಿವಾರವನ್ನು ಹಾಕಿ, ನಿನ್ನ ಕಲ್ಲುಗಳನ್ನು ನೀಲಾಂಜನದ ಗಾರೆಯಿಂದ ಕಟ್ಟುವೆನು.
ಪುರಾತನಕಾಲದಲ್ಲಿ ಹಾಳಾದ ನಿವೇಶನಗಳನ್ನು ತಿರುಗಿ ಕಟ್ಟುವರು, ಪೂರ್ವದಲ್ಲಿ ಹಾಳುಬಿದ್ದದ್ದನ್ನು ಪುನಃ ಎಬ್ಬಿಸುವರು, ತಲತಲಾಂತರಗಳಿಂದ ಹಾಳಾದ ಪಟ್ಟಣಗಳನ್ನು ಜೀರ್ಣೋದ್ಧಾರ ಮಾಡುವರು.
¶ “ಆ ದಿನದಲ್ಲಿ ನಾನು ದಾವೀದನ ಬಿದ್ದುಹೋಗಿರುವ ಗುಡಾರವನ್ನು ಎತ್ತಿ, ಅದರ ಬಿರುಕುಗಳನ್ನು ಮುಚ್ಚುವೆನು, ಹಾಳಾದದ್ದನ್ನು ಎಬ್ಬಿಸಿ, ಹಿಂದಿನ ದಿನಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.