TSK

TSK · ಮಿಕ 7:6

مراجع Treasury of Scripture Knowledge في ಕನ್ನಡ IRV.

العودة إلى المقطع

ಕಾನಾನನ ತಂದೆಯಾದ ಹಾಮನು ತಂದೆಯು ಬೆತ್ತಲೆಯಾಗಿರುವುದನ್ನು ಕಂಡು, ಹೊರಗಿದ್ದ ತನ್ನ ಸಹೋದರರಾದ ಶೇಮ್ ಮತ್ತು ಯೆಫೆತರಿಗೆ ತಿಳಿಸಿದನು.

ಆದರೆ ಅವನು ಗೂಢಚಾರರನ್ನು ಕಳುಹಿಸಿ ಇಸ್ರಾಯೇಲರ ಎಲ್ಲಾ ಕುಲದವರಿಗೆ, “ನೀವು ತುತ್ತೂರಿಯ ಧ್ವನಿಯನ್ನು ಕೇಳುತ್ತಲೇ ‘ಅಬ್ಷಾಲೋಮನು ಹೆಬ್ರೋನಿನಲ್ಲಿ ಅರಸನಾದನೆಂದು ಅರ್ಭಟಿಸಿರಿ’” ಎಂದು ಹೇಳಿಸಿದ್ದನು.

ಆಗ ಅಹೀತೋಫೆಲನು, “ಹೋಗಿ ನಿನ್ನ ತಂದೆಯು ಮನೆಕಾಯುವುದಕ್ಕೆ ಬಿಟ್ಟಿರುವ ಅವನ ಉಪಪತ್ನಿಯರೊಡನೆ ಸಂಗಮಿಸು. ಹೀಗೆ ಮಾಡುವುದಾದರೆ ನೀನು ನಿನ್ನ ತಂದೆಗೆ ವೈರಿಯಾಗುವೆ ಎಂದು ಎಲ್ಲಾ ಇಸ್ರಾಯೇಲ್ಯರಿಗೆ ತಿಳಿಯುವುದರಿಂದ ನಿನ್ನ ಪಕ್ಷದವರು ಬಲಗೊಳ್ಳುವರು” ಎಂದು ಉತ್ತರ ಕೊಟ್ಟನು.

ನನ್ನನ್ನು ದೂಷಿಸುವವನು ವೈರಿಯಾಗಿದ್ದರೆ ತಾಳಿಕೊಂಡೇನು; ನನ್ನನ್ನು ತಿರಸ್ಕರಿಸಿ ಉಬ್ಬಿಕೊಳ್ಳುವವನು ದ್ವೇಷಿಯಾಗಿದ್ದರೆ ಅಡಗಿಕೊಂಡೆನು.

ತಂದೆಯನ್ನು ಹಾಸ್ಯಮಾಡಿ ತಾಯಿಯ ಅಪ್ಪಣೆಯನ್ನು, ಧಿಕ್ಕರಿಸುವವನ ಕಣ್ಣನ್ನು, ಹಳ್ಳಕೊಳ್ಳದ ಕಾಗೆಗಳು ಕುಕ್ಕುವವು, ರಣಹದ್ದುಗಳು ತಿಂದುಬಿಡುವವು.

ನಿನ್ನ ಸಹೋದರರೂ, ನಿನ್ನ ತಂದೆಯ ಮನೆಯವರೂ ನಿನಗೆ ದ್ರೋಹಮಾಡಿದ್ದಾರೆ. ಇವರೇ ನಿನ್ನ ಬೆನ್ನಟ್ಟುತ್ತಾ ಕೂಗುತ್ತಾರೆ; ಒಳ್ಳೆಯ ಮಾತನಾಡಿದರೂ ಇವರನ್ನು ನಂಬಬೇಡ” ಎಂದು ಹೇಳಿದ್ದಾನೆ.

ನಿನ್ನವರು ತಾಯಿ ತಂದೆಗಳನ್ನು ತುಚ್ಛೀಕರಿಸಿದ್ದಾರೆ, ನಿನ್ನವರು ವಿದೇಶಿಗಳನ್ನು ಬಾಧಿಸಿದ್ದಾರೆ, ನಿನ್ನವರು ಅನಾಥರನ್ನೂ, ವಿಧವೆಯರನ್ನೂ ಹಿಂಸಿಸಿದ್ದಾರೆ.

‹ಇದಲ್ಲದೆ ಸಹೋದರನು ಸಹೋದರನನ್ನು, ತಂದೆಯು ಮಗನನ್ನು, ಮರಣಕ್ಕೆ ಒಪ್ಪಿಸುವರು; ಮಕ್ಕಳು ತಂದೆತಾಯಿಗಳ ಮೇಲೆ ತಿರುಗಿಬಿದ್ದು ಅವರನ್ನು ಕೊಲ್ಲಿಸುವರು.›

ಅದಕ್ಕೆ ಪ್ರತ್ಯುತ್ತರವಾಗಿ ಯೇಸು, ‹“ಬಟ್ಟಲಲ್ಲಿ ನನ್ನ ಸಂಗಡ ಕೈ ಅದ್ದಿದವನೇ ನನ್ನನ್ನು ಹಿಡಿದುಕೊಡುವವನು.›

‹ಮಗನಿಗೆ ವಿರೋಧವಾಗಿ ತಂದೆಯು, ತಂದೆಗೆ ವಿರೋಧವಾಗಿ ಮಗನು, ಮಗಳಿಗೆ ವಿರೋಧವಾಗಿ ತಾಯಿಯು, ತಾಯಿಗೆ ವಿರೋಧವಾಗಿ ಮಗಳು, ಸೊಸೆಗೆ ವಿರೋಧವಾಗಿ ಅತ್ತೆಯು. ಅತ್ತೆಗೆ ವಿರೋಧವಾಗಿ ಸೊಸೆಯು ಪರಸ್ಪರ ಭಿನ್ನಭೇದವುಳ್ಳವರಾಗಿ ವಿಂಗಡಿಸಿ ಹೋಗುವರು”› ಅಂದನು.

‹ನಾನು ನಿಮ್ಮೆಲ್ಲರನ್ನು ಕುರಿತು ಈ ಮಾತನ್ನು ಹೇಳಲಿಲ್ಲ. ನಾನು ಆರಿಸಿಕೊಂಡವರೆಲ್ಲರನ್ನು ನಾನು ಬಲ್ಲೆನು. ಆದರೆ›‹ನನ್ನ ಜೊತೆಯಲ್ಲಿ ಊಟಮಾಡುವವನೇ, ನನಗೆ ದ್ರೋಹ ಬಗೆದನು, ಎಂಬ ಶಾಸ್ತ್ರದ ಮಾತು ನೆರವೇರಬೇಕಾಗಿದೆ.›