TSK

TSK · ನಹೂಮ 2:9

مراجع Treasury of Scripture Knowledge في ಕನ್ನಡ IRV.

العودة إلى المقطع

ನೆಬೂಕದ್ನೆಚ್ಚರನು ವರ್ಷ ಆರಂಭದಲ್ಲಿ ಅವನನ್ನೂ, ಯೆಹೋವನ ದೇವಾಲಯದ ಬೆಲೆಯುಳ್ಳ ಸಾಮಾನುಗಳನ್ನು ಬಾಬಿಲೋನಿಗೆ ತರಿಸಿಕೊಂಡು, ಅವನ ಚಿಕ್ಕಪ್ಪನಾದ ಚಿದ್ಕೀಯನನ್ನು ಯೆಹೂದ ಮತ್ತು ಯೆರೂಸಲೇಮಿನ ಅರಸನನ್ನಾಗಿ ಮಾಡಿದನು.

ನಿಮ್ಮ ಕೊಳ್ಳೆಯು ಮಿಡತೆಗಳು ಕೂಡಿಸುವ ಹಾಗೆ ಕೂಡಿಸಲ್ಪಡುವುದು, ಮಿಡತೆಗಳು ಓಡಾಡುವ ಹಾಗೆ ಮನುಷ್ಯರು ಅದರ ಮೇಲೆ ಓಡಾಡುವರು.

ಆಹಾ, ನನ್ನ ಕಣ್ಣಿಗೆ ಬಿದ್ದದ್ದೇನು? ಅವರು ಧೈರ್ಯಗೆಟ್ಟು ಬೆನ್ನುಕೊಟ್ಟಿದ್ದಾರೆ. ಅವರ ಶೂರರು ಪೆಟ್ಟುತಿಂದು ಹಿಂದಿರುಗದೆ ಓಡಿಹೋಗುತ್ತಾರೆ; ಸುತ್ತಮುತ್ತಲು ದಿಗಿಲು ಎಂದು ಯೆಹೋವನು ಅನ್ನುತ್ತಾನೆ.

ಅವನ ಸೈನಿಕರು ನಿನ್ನ ಆಸ್ತಿಯನ್ನು ಸುಲಿದುಕೊಂಡು, ನಿನ್ನ ಸರಕುಗಳನ್ನು ಕೊಳ್ಳೆಹೊಡೆದು, ನಿನ್ನ ಗೋಡೆಗಳನ್ನು ಉರುಳಿಸಿ, ನಿನ್ನ ರಮ್ಯವಾದ ಮನೆಗಳನ್ನು ಕೆಡವಿ, ನಿನ್ನ ಕಲ್ಲುಗಳನ್ನೂ, ಮರಗಳನ್ನೂ, ಮಣ್ಣುಗಳನ್ನೂ ಸಮುದ್ರದಲ್ಲಿ ಹಾಕುವರು.

ಅಲ್ಲಿ ಸಿಂಹವು ತನ್ನ ಮರಿಗಳಿಗಾಗಿ ಬೇಕಾದಷ್ಟು ಬೇಟೆಯನ್ನು ಸೀಳುತ್ತಿತ್ತು, ತನ್ನ ಸಿಂಹಿಣಿಗಳಿಗಾಗಿ ಮೃಗಗಳ ಕುತ್ತಿಗೆಯನ್ನು ಸೀಳುತಿತ್ತು; ತನ್ನ ಗವಿಗಳನ್ನು ಬೇಟೆಯಿಂದಲೂ ತನ್ನ ಗುಹೆಯನ್ನು ಕೊಂದ ಮೃಗಗಳಿಂದಲೂ ತುಂಬಿಸಿತು.