TSK

TSK · ನಹೂಮ 3:18

مراجع Treasury of Scripture Knowledge في ಕನ್ನಡ IRV.

العودة إلى المقطع

ಆಗ ಮೀಕಾಯೆಹುವು, “ಇಸ್ರಾಯೇಲರೆಲ್ಲರು ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದುರಿಹೋದದ್ದನ್ನು ಕಂಡೆನು. ಆಗ ಯೆಹೋವನು, ‘ಇವರು ಒಡೆಯನಿಲ್ಲದವರಾಗಿರುತ್ತಾರೆ, ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ’ ಎಂದನು” ಎಂಬುದಾಗಿ ಉತ್ತರಕೊಟ್ಟನು.

ಬೇಟೆಗಾರನಿಂದ ತಪ್ಪಿಸಿಕೊಂಡು ಓಡುವ ಜಿಂಕೆಯಂತೆಯೂ, ಒಟ್ಟುಗೂಡಿಸಲು ಯಾರೂ ಇಲ್ಲದಂಥ ಕುರಿಗಳಂತೆಯೂ ಪ್ರತಿಯೊಬ್ಬನೂ ಸ್ವಜನರ ಕಡೆಗೆ ತಿರುಗಿಕೊಂಡು ಸ್ವದೇಶಕ್ಕೆ ಓಡಿಹೋಗುವನು.

ಅರಣ್ಯದ ಸಕಲ ಮೃಗಗಳೇ, ಕಾಡಿನ ಎಲ್ಲಾ ಜಂತುಗಳೇ, ನುಂಗಿಬಿಡುವುದಕ್ಕೆ ಬನ್ನಿರಿ!

ಅವರು ಹೊಟ್ಟೆಬಾಕರು, ನಾನು ಅವರಿಗೆ ಔತಣವನ್ನು ಸಿದ್ಧಪಡಿಸುವೇನು, ಅವರು ಅದರಿಂದ ಸಂಭ್ರಮಪಟ್ಟು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವಂತೆ ತಲೆಗೇರುವ ಮಟ್ಟಿಗೆ ಕುಡಿಸುವೆನು. ಇದು ಯೆಹೋವನ ನುಡಿ” ಎಂಬುದೇ.

ಆಹಾ, ಅಸ್ಸೀರಿಯವು ಲೆಬನೋನಿನ ಸುಂದರವಾದ ಕೊಂಬೆಗಳುಳ್ಳ ದೇವದಾರು ಆಗಿದೆ; ಅದರ ನೆರಳು ದಟ್ಟವಾಗಿದೆ, ಅದರ ಎತ್ತರವು ಬಹಳ, ಅದರ ತುದಿಯು ದಟ್ಟವಾದ ಕೊಂಬೆಗಳ ಮಧ್ಯದಲ್ಲಿತ್ತು.

ಅಶ್ಶೂರವೂ ಮತ್ತು ಅದರ ಎಲ್ಲಾ ಗುಂಪು ಅಲ್ಲಿರುತ್ತವೆ. ಆ ಜನರ ಗೋರಿಗಳು ಅದನ್ನು ಸುತ್ತಿಕೊಂಡಿವೆ; ಅವರೆಲ್ಲರೂ ಸಂಹೃತರು, ಖಡ್ಗದಿಂದ ಹತರಾದವರು.

ಆಗ ಭೂರಾಜರುಗಳೂ, ಮಹಾಪುರುಷರೂ, ಸಹಸ್ರಾಧಿಪತಿಗಳೂ, ಐಶ್ವರ್ಯವಂತರೂ, ಪರಾಕ್ರಮಶಾಲಿಗಳೂ, ಎಲ್ಲಾ ದಾಸರೂ ಮತ್ತು ಸ್ವತಂತ್ರರೂ ಬೆಟ್ಟಗಳ ಗವಿಗಳಿಗೂ ಮತ್ತು ಬಂಡೆಗಳ ಸಂದುಗಳಿಗೂ ಓಡಿಹೋಗಿ ತಮ್ಮನ್ನು ಮರೆಮಾಡಿಕೊಂಡರು.