TSK

TSK · ನೆಹೆಮಿಯ 13:10

مراجع Treasury of Scripture Knowledge في ಕನ್ನಡ IRV.

العودة إلى المقطع

ನೀವು ನಿಮ್ಮ ದೇಶದಲ್ಲಿ ಇರುವ ತನಕ ಲೇವಿಯರನ್ನು ಕೈಬಿಡಬಾರದು, ಜ್ಞಾಪಕವಿರಲಿ.

ನಾವು ದೇವರಿಗಾಗಿ ಪ್ರತ್ಯೇಕಿಸಿ ಇಡತಕ್ಕ ಪ್ರಥಮಫಲದ ಹಿಟ್ಟು, ಹಣ್ಣುಹಂಪಲು, ದ್ರಾಕ್ಷಾರಸ, ಎಣ್ಣೆ ಮೊದಲಾದವುಗಳನ್ನು ಯಾಜಕ ಸೇವೆಗೋಸ್ಕರ ನಮ್ಮ ದೇವರ ಆಲಯದ ಕೊಠಡಿಗಳಲ್ಲಿ ತಂದು ಇಡುವೆವು. ನಮ್ಮ ಭೂಮಿಯ ಹುಟ್ಟುವಳಿಯ ದಶಮಾಂಶವು ಲೇವಿಯರದಾಗಿರುತ್ತದೆ. ಲೇವಿಯರು ತಾವೇ ಬಂದು, ನಮ್ಮ ಸಾಗುವಳಿಯ ಊರುಗಳಲ್ಲಿ ಅದನ್ನು ಶೇಖರಿಸಿಕೊಳ್ಳಬೇಕು.

ಬೆತ್ ಗಿಲ್ಗಾಲ್, ಗೆಬ ಮತ್ತು ಅಜ್ಮಾವೇತ್, ಊರುಗಳಿಗೆ ಸೇರಿರುವ ಹಳ್ಳಿಗಳು ಇವುಗಳಿಂದ ಸೇರಿ ಬಂದರು.

ನೀನು ನನಗೆ ಹೋಮಕ್ಕಾಗಿ ಕುರಿ ಮೇಕೆಗಳನ್ನು ತಂದು ಯಜ್ಞಗಳಿಂದ ನನ್ನನ್ನು ಘನಪಡಿಸಲಿಲ್ಲ. ಕಾಣಿಕೆಗಳನ್ನು ಕೇಳಿ ನಿನ್ನನ್ನು ನಾನು ತೊಂದರೆಪಡಿಸಲಿಲ್ಲ, ಧೂಪಕ್ಕಾಗಿ ನಿನ್ನನ್ನು ಬೇಸರಗೊಳಿಸಲಿಲ್ಲ.

“ನರಮನುಷ್ಯನು ದೇವರಿಂದ ಕದ್ದುಕೊಳ್ಳಬಹುದೇ? ನೀವೋ ನನ್ನಿಂದ ಕದ್ದುಕೊಳ್ಳುತ್ತಿದ್ದೀರಿ. ‘ನಿನ್ನಿಂದ ಏನು ಕದ್ದುಕೊಂಡಿದ್ದೇವೆ?’ ಎಂದು ಕೇಳುತ್ತೀರೋ. ದಶಮಾಂಶವನ್ನು, ನನಗೋಸ್ಕರ ಪ್ರತ್ಯೇಕಿಸಬೇಕಾದ ಪದಾರ್ಥ, ಇವುಗಳನ್ನೇ.