TSK

TSK · ನೆಹೆಮಿಯ 13:18

مراجع Treasury of Scripture Knowledge في ಕನ್ನಡ IRV.

العودة إلى المقطع

ನಾನು ನಿಮ್ಮ ಮೇಲೆ ಕೋಪಗೊಂಡವನಾಗಿ ನಿಮ್ಮ ಪಾಪಗಳ ನಿಮಿತ್ತ ಏಳರಷ್ಟಾಗಿ ಶಿಕ್ಷಿಸುವೆನು.

ನಾವು ಪೆಗೋರದಲ್ಲಿ ಅಪರಾಧಿಗಳಾದದ್ದು ಸಾಕಾಗಲಿಲ್ಲವೋ? ಅದರ ದೆಸೆಯಿಂದ ಯೆಹೋವನ ಸಭೆಗೆ ವ್ಯಾಧಿ ಬಂದರೂ ನಾವು ಇನ್ನೂ ಅದರಿಂದ ಪೂರ್ಣ ಶುದ್ಧರಾಗಲಿಲ್ಲ.

ಹೀಗಿರುವಲ್ಲಿ ನಾವು ತಿರುಗಿ ನಿನ್ನ ಆಜ್ಞೆಗಳನ್ನು ಮೀರಿ ವಿಗ್ರಹಾರಾಧಕರಾದ ಈ ಜನರ ಸಂಗಡ ಬೀಗತನ ಮಾಡುವುದು ಯೋಗ್ಯವೋ? ಹಾಗೆ ಮಾಡಿದರೆ ನೀನು ನಮ್ಮ ಮೇಲೆ ರೌದ್ರಾವೇಶವುಳ್ಳವನಾಗಿ ಯಾರೂ ತಪ್ಪಿಸಿಕೊಂಡು ಉಳಿಯದಂತೆ ನಮ್ಮನ್ನು ಮುಗಿಸಿಬಿಡುವಿಯಲ್ಲವೋ?

ಮನಮುಟ್ಟಿ ಗಮನಿಸಿರಿ, ಸಬ್ಬತ್ ದಿನದಲ್ಲಿ ಯಾವ ಹೊರೆಯನ್ನೂ ಹೊರಬೇಡಿರಿ, ಅದನ್ನು ಯೆರೂಸಲೇಮಿನ ಬಾಗಿಲುಗಳಲ್ಲಿ ತರಲೇಬೇಡಿರಿ.

ನಿಮ್ಮ ಪೂರ್ವಿಕರು, ಯೆಹೂದದ ಅರಸರು, ಅವರ ಹೆಂಡತಿಯರು, ನೀವು ಮತ್ತು ನಿಮ್ಮ ಹೆಂಡತಿಯರು ಇವರೆಲ್ಲರೂ ಯೆಹೂದ ದೇಶದಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ನಡೆಸಿದ ದುರಾಚಾರಗಳನ್ನು ಮರೆತುಬಿಟ್ಟಿರೋ?

ಅವಳು ಐಗುಪ್ತದಲ್ಲಿ ವಾಸಿಸುವ ದಿನದವರೆಗೂ ತನ್ನ ವ್ಯಭಿಚಾರವನ್ನು ಬಿಡಲಿಲ್ಲ; ಅವಳ ಬಾಲ್ಯದಲ್ಲಿಯೇ ಅಲ್ಲಿನವರು ಅವಳೊಂದಿಗೆ ಮಲಗಿ, ಅವಳ ಎಳೆಯ ತೊಟ್ಟುಗಳನ್ನು ಒತ್ತಿ, ಅವಳ ಸಂಗಡ ವ್ಯಭಿಚಾರಿಕೆಯನ್ನು ಹೆಚ್ಚೆಚ್ಚಾಗಿ ನಡೆಸಿದರು.

ಬಡವರನ್ನು ಬೆಳ್ಳಿಗೂ, ದಿಕ್ಕಿಲ್ಲದವರನ್ನು ಒಂದು ಜೊತೆ ಕೆರಗಳ ಜೋಡಿಗೂ ಕೊಂಡುಕೊಳ್ಳೋಣ; ಗೋದಿಯ ನುಚ್ಚುನ್ನು ಮಾರಿಬಿಡೋಣ” ಎಂದು ಹೇಳುತ್ತೀರಿ ಅಲ್ಲವೇ?