TSK

TSK · ನೆಹೆಮಿಯ 13:19

مراجع Treasury of Scripture Knowledge في ಕನ್ನಡ IRV.

العودة إلى المقطع

ಆದಕಾರಣ ನೀವು ಸಬ್ಬತ್ ದಿನವನ್ನು ಪರಿಶುದ್ಧವಾದ ದಿನವೆಂದು ಎಣಿಸಿ ಆಚರಿಸಬೇಕು. ಅದನ್ನು ಅಶುದ್ಧಪಡಿಸುವ ಪ್ರತಿಯೊಬ್ಬನಿಗೆ ಮರಣಶಿಕ್ಷೆಯಾಗಬೇಕು. ಆ ದಿನದಲ್ಲಿ ಯಾವನಾದರೂ ಕೆಲಸವನ್ನು ಮಾಡಿದರೆ ಅವನನ್ನು ಕುಲದಿಂದ ತೆಗೆದುಹಾಕಬೇಕು.

ಆ ಸಬ್ಬತ್ ದಿನವು ಸಂಪೂರ್ಣವಿರಾಮವುಳ್ಳ ದಿನವಾಗಿರಬೇಕು. ಆ ದಿನದಲ್ಲಿ ಉಪವಾಸದಿಂದಿರಬೇಕು. ಆ ತಿಂಗಳಿನ ಒಂಭತ್ತನೆಯ ದಿನದ ಸಾಯಂಕಾಲದಲ್ಲಿ ಪ್ರಾರಂಭಿಸಿ ಮರುದಿನದ ಸಾಯಂಕಾಲದ ವರೆಗೆ ನೀವು ಆ ವಿರಾಮದಿನವನ್ನು ಆಚರಿಸಬೇಕು” ಎಂದು ಹೇಳಿದನು.

¶ ಯೆಹೋವನು ನನಗೆ ಇಂತೆಂದನು, “ನೀನು ಹೊರಟು ಯೆಹೂದದ ಅರಸರು ಹೋಗಿ ಬರುವ ಸಾಮಾನ್ಯ ಜನರ ಬಾಗಿಲಿನಲ್ಲಿಯೂ, ಯೆರೂಸಲೇಮಿನ ಎಲ್ಲಾ ಬಾಗಿಲುಗಳಲ್ಲಿಯೂ ನಿಂತುಕೊಂಡು ಅವರಿಗೆ ಹೀಗೆ ಸಾರು,