ಪ್ರವಾದಿಯಾದ ನಾತಾನನು ಯೆಹೋವನು ತನಗೆ ಆಜ್ಞಾಪಿಸಿದಂತೆ ಯೆಹೋವನ ಪ್ರೀತಿಯ ನಿಮಿತ್ತ ಆ ಹುಡುಗನಿಗೆ “ಯೆದೀದ್ಯ” ಎಂದು ಹೆಸರಿಟ್ಟನು.
TSK
TSK · ನೆಹೆಮಿಯ 13:26
مراجع Treasury of Scripture Knowledge في ಕನ್ನಡ IRV.
ಇದಲ್ಲದೆ ನೀನು ಕೇಳಿದಂಥದ್ದನ್ನೂ ನಿನಗೆ ಅನುಗ್ರಹಿಸಿದ್ದೇನೆ. ನಿನ್ನ ಜೀವಮಾನದಲ್ಲೆಲ್ಲಾ ಐಶ್ವರ್ಯದಲ್ಲಿಯೂ, ಗೌರವ ಘನತೆಗಳಲ್ಲಿಯೂ ನಿನಗೆ ಸಮಾನನಾದ ಅರಸನು ಇನ್ನೊಬ್ಬನಿರುವುದಿಲ್ಲ.
¶ ಅರಸನಾದ ಸೊಲೊಮೋನನು ಫರೋಹನ ಮಗಳನ್ನಲ್ಲದೆ ಮೋವಾಬ್ಯರು, ಅಮ್ಮೋನಿಯರು, ಎದೋಮ್ಯರು, ಚೀದೋನ್ಯರು ಮತ್ತು ಹಿತ್ತಿಯರು ಎಂಬ ಜನಾಂಗಗಳ ಸ್ತ್ರೀಯರನ್ನು ಮೋಹಿಸಿದನು.
ಹೆಂಡತಿಯಾದ ಈಜೆಬೆಲಳಿಂದ ಪ್ರೇರೇಪಿತನಾಗಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದನ್ನು ಮಾಡುವುದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ.
ಈ ಪ್ರಕಾರ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ ಜ್ಞಾನದಲ್ಲಿಯೂ ಭೂಲೋಕದ ಎಲ್ಲಾ ಅರಸರಿಗಿಂತ ಮಿಗಿಲಾಗಿದ್ದನು.
ಆಗ ಮರಣಕ್ಕಿಂತ ಹೆಚ್ಚು ವಿಷವೊಂದು ಕಂಡುಬಂತು. ಯಾವುದೆಂದರೆ ಕೆಟ್ಟ ಹೆಂಗಸೇ. ಅವಳ ಹೃದಯವು ಉರುಲುಗಳೂ, ಬಲೆಗಳೂ, ಅವಳ ತೋಳುಗಳು ಸಂಕೋಲೆಗಳು. ದೇವರು ಒಲಿದವನು ಅವಳಿಂದ ತಪ್ಪಿಸಿಕೊಳ್ಳುವನು. ಆದರೆ ಪಾಪಿಯು ಅವಳ ಕೈಗೆ ಸಿಕ್ಕಿಬೀಳುವನು.