TSK

TSK · ನೆಹೆಮಿಯ 2:17

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಪ್ರವಾದಿಗಳಾದ ಹಗ್ಗಾಯನೂ ಮತ್ತು ಇದ್ದೋವಿನ ಮಗನಾದ ಜೆಕರ್ಯನೂ ಇಸ್ರಾಯೇಲ್ ದೇವರಿಂದ ಪ್ರೇರಿತರಾಗಿ ಆತನ ಹೆಸರಿನಲ್ಲಿ ಯೆಹೂದದ ಮತ್ತು ಯೆರೂಸಲೇಮಿನ ಯೆಹೂದ್ಯರಿಗೆ ದೇವಾಲಯ ಕಟ್ಟಿಸುವ ಬಗ್ಗೆ ಪ್ರವಾದಿಸಿದರು.

ಆಗ ಏಲಾಮ್ ಸಂತಾನದ ಯೆಹೀಯೇಲನ ಮಗನಾದ ಶೆಕನ್ಯನು ಎಜ್ರನಿಗೆ, “ಇಸ್ರಾಯೇಲರಾದ ನಾವು ಅನ್ಯಜನರಾದ ಈ ದೇಶನಿವಾಸಿಗಳಿಂದ ಹೆಣ್ಣನ್ನು ತೆಗೆದುಕೊಂಡು ನಮ್ಮ ದೇವರಿಗೆ ವಿರುದ್ಧವಾಗಿ ದ್ರೋಹಮಾಡಿದರೂ ನಮ್ಮನ್ನು ನಾವು ತಿದ್ದಿಕೊಳ್ಳುವ ನಿರೀಕ್ಷೆಯು ಇನ್ನೂ ಉಂಟು.

ನಮ್ಮನ್ನು ನೆರೆಯವರ ನಿಂದೆಗೆ ಗುರಿಮಾಡಿದಿ; ಸುತ್ತಣ ಜನಾಂಗಗಳವರ ಪರಿಹಾಸ್ಯಕ್ಕೂ, ಕುಚೋದ್ಯಕ್ಕೂ ಒಳಪಡಿಸಿದಿ.

ನಾವು ನಮ್ಮ ನೆರೆಹೊರೆಯ ಜನಾಂಗಗಳಿಗೆ ನಿಂದಾಸ್ಪದರಾದೆವು; ಸುತ್ತಣ ಜನರ ಪರಿಹಾಸ್ಯ ಮತ್ತು ತಿರಸ್ಕಾರಕ್ಕೆ ಗುರಿಯಾದೆವು.

ಯೆಹೋವನೇ, ನಿನ್ನ ವೈರಿಗಳು ನಿಂದಿಸುತ್ತಾರೆ; ನಿನ್ನ ಅಭಿಷಿಕ್ತನನ್ನು ಹೆಜ್ಜೆ ಹೆಜ್ಜೆಗೂ ಅಪಮಾನ ಮಾಡುತ್ತಾರೆ.

ಜೋಲುಬಿದ್ದ ಕೈಗಳನ್ನೂ, ನಡುಗುವ ಮೊಣಕಾಲುಗಳನ್ನೂ ಬಲಗೊಳಿಸಿರಿ.

ಕರ್ತನು ಕನಿಕರಪಡದೆ ಯಾಕೋಬಿನ ಗೋಮಾಳಗಳನ್ನು ನಾಶಪಡಿಸಿ, ಯೆಹೂದದ ಕೋಟೆಗಳನ್ನು ರೌದ್ರದಿಂದ ಕೆಡವಿ ನೆಲಸಮಮಾಡಿ, ರಾಜ್ಯವನ್ನೂ ಮತ್ತು ಅಲ್ಲಿನ ಸರದಾರರನ್ನೂ ಹೀನಸ್ಥಿತಿಗೆ ತಂದಿದ್ದಾನೆ.

ನಮ್ಮನ್ನು ಜನಾಂಗಗಳ ಮಧ್ಯದಲ್ಲಿ ಕಸವನ್ನಾಗಿಯೂ ಮತ್ತು ಹೊಲಸನ್ನಾಗಿಯೂ ಹಾಕಿಬಿಟ್ಟಿದ್ದೀ.

ಹಾದುಹೋಗುವವರೆಲ್ಲರ ಕಣ್ಣೆದುರಿಗೆ ನಾನು ನಿನ್ನನ್ನು ಹಾಳುಮಾಡಿ, ಸುತ್ತಲಿನ ಜನಾಂಗಗಳ ನಿಂದೆಗೆ ಗುರಿ ಮಾಡುವೆನು.

ಆಹಾ, ನಿನ್ನ ಪೌಳಿಗೋಡೆಗಳನ್ನು ಕಟ್ಟುವ ದಿನವು ಬರುವುದು. ಆ ದಿನದಲ್ಲಿ ನಿನ್ನ ಮೇರೆಯು ದೂರದ ತನಕ ವಿಸ್ತರಿಸಿಕೊಂಡಿರುವುದು.