TSK

TSK · ನೆಹೆಮಿಯ 3:7

مراجع Treasury of Scripture Knowledge في ಕನ್ನಡ IRV.

العودة إلى المقطع

ಗಿಬ್ಯೋನ್ಯರು ಇಸ್ರಾಯೇಲ್ಯರ ಕುಲಕ್ಕೆ ಸೇರಿದವರಲ್ಲ. ಸಂಹೃತರಾಗದೆ ಉಳಿದ ಅಮೋರಿಯರಷ್ಟೆ. ಇಸ್ರಾಯೇಲ್ಯರು ತಾವು ಇವರನ್ನು ಕೊಲ್ಲುವುದಿಲ್ಲವೆಂದು ಪ್ರಮಾಣಮಾಡಿದ್ದರು. ಆದರೂ ಸೌಲನು ಇಸ್ರಾಯೇಲ್ ಮತ್ತು ಯೆಹೂದ ಕುಲಗಳ ಮೇಲೆ ತನಗಿದ್ದ ಅಭಿಮಾನದ ನಿಮಿತ್ತ ಇವರನ್ನು ನಿರ್ನಾಮಗೊಳಿಸಬೇಕೆಂದಿದ್ದನು.

ಅನಂತರ ಅರಸನಾದ ಆಸನು ಎಲ್ಲಾ ಯೆಹೂದ್ಯರನ್ನು ಕರೆಯಿಸಿ ರಾಮ ಕೋಟೆಗಾಗಿ ಬಾಷನು ತರಿಸಿದ್ದ ಕಲ್ಲುಮರಗಳನ್ನು ಅವರ ಮುಖಾಂತರವಾಗಿ ತೆಗೆದುಕೊಂಡು ಹೋಗಿ ಗೆಬ, ಮಿಚ್ಪ ಎಂಬ ಪಟ್ಟಣಗಳನ್ನು ಭದ್ರಪಡಿಸಿದನು.

ಇವನ ಸಮೀಪದಲ್ಲಿ ಗೋಡೆಯ ಇನ್ನೊಂದು ಭಾಗವನ್ನು ಅಂದರೆ ಗೋಡೆಯ ಮೂಲೆಯಲ್ಲಿರುವ ಆಯುಧಶಾಲೆಗೆ ಹೋಗುವ ಮೆಟ್ಟಿಲುಗಳ ಎದುರಿಗಿರುವ ಭಾಗವನ್ನು ಮಿಚ್ಪದ ಅಧಿಕಾರಿಯೂ ಯೇಷೂವನ ಮಗ ಏಜೆರನು ಜೀರ್ಣೋದ್ಧಾರ ಮಾಡಿದನು.