TSK

TSK · ನೆಹೆಮಿಯ 5:3

مراجع Treasury of Scripture Knowledge في ಕನ್ನಡ IRV.

العودة إلى المقطع

ಐಗುಪ್ತ ದೇಶದಲ್ಲಿಯೂ, ಕಾನಾನ್‌ ದೇಶದಲ್ಲಿಯೂ ಇದ್ದ ಹಣವೆಲ್ಲಾ ಮುಗಿದುಹೋದ ನಂತರ ಐಗುಪ್ತರೆಲ್ಲರೂ ಯೋಸೇಫನ ಬಳಿಗೆ ಬಂದು, “ನಮ್ಮ ಹಣವೆಲ್ಲಾ ಮುಗಿದುಹೋಯಿತು; ನೀನು ನಮಗೆ ಆಹಾರವನ್ನು ಕೊಡಬೇಕು; ನಾವು ನಿನ್ನ ಮುಂದೆ ಸತ್ತರೆ ಪ್ರಯೋಜನವೇನು?” ಎಂದು ಹೇಳಿದರು.

ನೀವು ಅವನಿಂದ ಬಡ್ಡಿಯನ್ನಾಗಲಿ ಅಥವಾ ಲಾಭವನ್ನಾಗಲಿ ತೆಗೆದುಕೊಳ್ಳಬಾರದು; ಅವನು ನಿಮ್ಮ ಬಳಿಯಲ್ಲಿ ಬದುಕುವಂತೆ ನೀವು ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕು.

ಅವರ ಹೊಲ, ದ್ರಾಕ್ಷಿತೋಟ, ಎಣ್ಣೆಮರಗಳ ತೋಪು, ಮನೆ ಇವುಗಳನ್ನೂ ನೀವು ಕೊಟ್ಟ ಹಣ, ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಿಗೋಸ್ಕರ ನೂರಕ್ಕೆ ಒಂದರಂತೆ ನೀವು ತೆಗೆದುಕೊಂಡಿರುವ ಬಡ್ಡಿಯನ್ನೂ ದಯವಿಟ್ಟು ಈ ಹೊತ್ತೇ ಹಿಂದಕ್ಕೆ ಕೊಡಿರಿ” ಎಂದು ಹೇಳಿದೆನು.