TSK

TSK · ನೆಹೆಮಿಯ 6:7

مراجع Treasury of Scripture Knowledge في ಕನ್ನಡ IRV.

العودة إلى المقطع

ಅವನು ಚೆರೂಯಳ ಮಗನಾದ ಯೋವಾಬನನ್ನು ಮತ್ತು ಯಾಜಕನಾದ ಎಬ್ಯಾತಾರನನ್ನೂ ತನ್ನ ಕಡೆಗೆ ಒಲಿಸಿಕೊಂಡನು. ಇವರು ಅವನನ್ನು ಹಿಂಬಾಲಿಸಿ ಅವನಿಗೆ ಸಹಾಯಕರಾದರು.

ಅವನು ಗಟ್ಟಾ ಇಳಿದು ಹೋಗಿ ಹೋರಿ, ಕುರಿ ಮುಂತಾದ ಹಲವು ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ, ಎಲ್ಲಾ ರಾಜಪುತ್ರರನ್ನೂ, ಸೇನಾಧಿಪತಿಗಳನ್ನೂ, ಯಾಜಕನಾದ ಎಬ್ಯಾತಾರನನ್ನೂ ಔತಣಕ್ಕೆ ಕರೆದಿದ್ದಾನೆ. ಅವರು ಅವನ ಪಂಕ್ತಿಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡು, ‘ಅರಸನಾದ‍ ಅದೋನೀಯನು ಚಿರಂಜೀವಿಯಾಗಿರಲಿ’ ಎಂದು ಕೂಗುತ್ತಿದ್ದಾರೆ.

ನಾನು ಸೂಕ್ಷ್ಮವಾಗಿ ವಿಚಾರ ಮಾಡಿದಾಗ ನನ್ನ ವಿಷಯವಾಗಿ ಆ ಕಾಲ, ಜ್ಞಾನ, ವಚನವನ್ನು ಉಚ್ಚರಿಸುವುದಕ್ಕೂ ಪ್ರವಾದನೆ ನುಡಿಯುವುದಕ್ಕೂ ಇವನನ್ನು ಪ್ರೇರೇಪಿಸಿದವನು ದೇವರಲ್ಲ, ಟೋಬೀಯನೂ, ಸನ್ಬಲ್ಲಟನೂ ಇವನಿಗೆ ಲಂಚ ಕೊಟ್ಟು ಹಾಗೆ ಹೇಳಿದ್ದಾರೆ ಎಂದು ನನಗೆ ಗೊತ್ತಾಯಿತು.

ಆದುದರಿಂದ ನೀವು ಸಭೆಯವರ ಸಹಿತ ಸಹಸ್ರಾಧಿಪತಿಯ ಬಳಿಗೆ ಹೋಗಿ, ಪೌಲನ ಸಂಗತಿಯನ್ನು ಇನ್ನೂ ಸೂಕ್ಷ್ಮವಾಗಿ ಪರಿಶೀಲಿಸಬೇಕೆಂದು ನೆವಹೇಳಿ ಅವನನ್ನು ಕೋಟೆಯೊಳಗೆ ನಿಮ್ಮ ಬಳಿಗೆ ಕರೆದುಕೊಂಡು ಬರುವ ಹಾಗೆ ಕೇಳಿಕೊಳ್ಳಬೇಕು. ನಾವಾದರೋ, ಅವನು ಹತ್ತಿರ ಬರುವುದಕ್ಕಿಂತ ಮೊದಲೇ ಅವನನ್ನು ಕೊಲ್ಲುವುದಕ್ಕೆ ಸಿದ್ಧವಾಗಿದ್ದೇವೆ” ಅಂದರು.