TSK

TSK · ನೆಹೆಮಿಯ 8:3

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಮೋಶೆ ಈ ಧರ್ಮಶಾಸ್ತ್ರವನ್ನು ಬರೆದು ಯೆಹೋವನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮತ್ತು ಇಸ್ರಾಯೇಲರ ಹಿರಿಯರ ವಶಕ್ಕೆ ಕೊಟ್ಟನು.

ಎಜ್ರನು ಮೊದಲನೆಯ ದಿನದಿಂದ ಕೊನೆಯ ದಿನದವರೆಗೆ ಪ್ರತಿದಿನವೂ ದೇವರ ಧರ್ಮನಿಯಮಗಳನ್ನು ಜನರಿಗೋಸ್ಕರ ಪಾರಾಯಣ ಮಾಡುತ್ತಿದ್ದನು. ಏಳು ದಿನಗಳವರೆಗೂ ಉತ್ಸವದ ಜಾತ್ರೆ ನಡೆಯಿತು. ನಿಯಮದ ಪ್ರಕಾರ ಎಂಟನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆ ಸೇರಿತು.

¶ ಅಂದು ಜನರ ಮುಂದೆ ಮೋಶೆಯ ಧರ್ಮನಿಯಮಗಳ ಪಾರಾಯಣವು ನಡೆಯುತ್ತಿರಲಾಗಿ, ಅದರಲ್ಲಿ ಅಮ್ಮೋನಿಯರಾಗಲಿ ಹಾಗು ಮೋವಾಬ್ಯರಾಗಲಿ ದೇವರ ಸಭೆಯಲ್ಲಿ ಎಂದಿಗೂ ಪ್ರವೇಶಮಾಡಬಾರದು.

‹ದಾವೀದನೇ ಆತನನ್ನು ‘ಕರ್ತನೆಂದು’ ಹೇಳಿರುವಲ್ಲಿ ಆತನು ಅವನಿಗೆ ಮಗನಾಗುವುದು ಹೇಗೆ?”› ಎಂದು ಪ್ರಶ್ನಿಸಿದನು. ಜನರ ದೊಡ್ಡ ಸಮೂಹವು ಆತನ ಮಾತನ್ನು ಸಂತೋಷದಿಂದ ಕೇಳುತ್ತಿತ್ತು.

‹ಆದುದರಿಂದ ನೀವು ಹೇಗೆ ಕಿವಿಗೊಡಬೇಕೋ ನೋಡಿಕೊಳ್ಳಿರಿ, ಏಕೆಂದರೆ ಇದ್ದವನಿಗೆ ಕೊಡಲ್ಪಡುವುದು; ಇಲ್ಲದವನ ಕಡೆಯಿಂದ ಅವನು ತನ್ನದೆಂದು ಎಣಿಸುವಂಥದೂ ತೆಗೆಯಲ್ಪಡುವುದು”› ಅಂದನು.

ಧರ್ಮಶಾಸ್ತ್ರ ಮತ್ತು ಪ್ರವಾದಿಗಳ ಗ್ರಂಥ ಇವುಗಳ ಪಾರಾಯಣವಾದ ಮೇಲೆ ಸಭಾಮಂದಿರದ ನಾಯಕರು; “ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ” ಎಂದು ಅವರಿಗೆ ಹೇಳಿ ಕಳುಹಿಸಿದರು.

ಏಕೆಂದರೆ ಪುರಾತನಕಾಲದಿಂದ ಎಲ್ಲಾ ಪಟ್ಟಣಗಳಲ್ಲಿ ಮೋಶೆಯ ಧರ್ಮಶಾಸ್ತ್ರವನ್ನು ಬೋಧಿಸುವವರು ಇದ್ದಾರೆ; ಅದು ಪ್ರತಿ ಸಬ್ಬತ್ ದಿನವೂ ಸಭಾಮಂದಿರಗಳಲ್ಲಿ ಪಾರಾಯಣವಾಗುತ್ತದಲ್ಲಾ” ಎಂದು ಹೇಳಿದನು.

ಆ ಸಭೆಯವರು ದೇವರ ವಾಕ್ಯವನ್ನು ಸಿದ್ಧ ಮನಸ್ಸಿನಿಂದ ಅಂಗೀಕರಿಸಿ ಇವರು ಹೇಳುವ ಮಾತು ಹೌದೋ ಅಲ್ಲವೋ ಎಂದು ಕಂಡುಕೊಳ್ಳಲು ಪ್ರತಿದಿನವೂ ಶಾಸ್ತ್ರಗ್ರಂಥಗಳನ್ನು ಶೋಧಿಸುತ್ತಿದ್ದದರಿಂದ ಅವರು ಥೆಸಲೋನಿಕದವರಿಗಿಂತ ಸದ್ಗುಣವುಳವರಾಗಿದ್ದರು.

ಆಗ ಅವನು ಮೇಲಕ್ಕೆ ಹೋಗಿ ರೊಟ್ಟಿ ಮುರಿದು ಊಟಮಾಡಿ ಬಹಳ ಹೊತ್ತು ಬೆಳಗಾಗುವ ತನಕ ಮಾತನಾಡಿ ಹೊರಟುಹೋದನು.

¶ ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ. ಅದು ಸತ್ಯವಾಗಿ ದೇವರ ವಾಕ್ಯವೇ. ಆ ವಾಕ್ಯವು, ನಂಬುವವರಾದ ನಿಮ್ಮೊಳಗೆ ಕೆಲಸ ಮಾಡುತ್ತದೆ.

‹ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.›