TSK

TSK · ನೆಹೆಮಿಯ 9:7

مراجع Treasury of Scripture Knowledge في ಕನ್ನಡ IRV.

العودة إلى المقطع

¶ ತೆರಹನು ತನ್ನ ಮಗನಾದ ಅಬ್ರಾಮನನ್ನೂ, ತನಗೆ ಮೊಮ್ಮಗನೂ, ಹಾರಾನನಿಗೆ ಮಗನೂ ಆಗಿರುವ ಲೋಟನನ್ನೂ, ತನಗೆ ಸೊಸೆಯೂ ಅಬ್ರಾಮನಿಗೆ ಹೆಂಡತಿಯೂ ಆಗಿರುವ ಸಾರಯಳನ್ನೂ ಕರೆದುಕೊಂಡು ಕಾನಾನ್ ದೇಶಕ್ಕೆ ಹೋಗಬೇಕೆಂದು ಕಲ್ದೀಯರ ಊರ್ ಎಂಬ ಪಟ್ಟಣವನ್ನು ಬಿಟ್ಟು ಅವರು ಹಾರಾನ ಪಟ್ಟಣಕ್ಕೆ ಬಂದು ಅಲ್ಲೇ ವಾಸಮಾಡಿಕೊಂಡರು.

¶ ನಂತರ ಆತನು ಅಬ್ರಾಮನಿಗೆ, “ಈ ದೇಶವನ್ನು ನಿನಗೆ ಬಾಧ್ಯಸ್ಥವಾಗಿ ಕೊಡುವುದಕ್ಕೋಸ್ಕರ ನಿನ್ನನ್ನು ಊರ್ ಎಂಬ ಕಲ್ದೀಯರ ಪಟ್ಟಣದಿಂದ ಬರಮಾಡಿದ ಯೆಹೋವನು ನಾನೇ” ಎಂದು ಹೇಳಿದನು.

ಆದರೂ ಆತನು ನಿಮ್ಮ ಪೂರ್ವಿಕರಲ್ಲಿ ಇಷ್ಟವುಳ್ಳವನಾಗಿ ಅವರನ್ನು ಪ್ರೀತಿಸಿದ್ದರಿಂದ ಈಗ ನಿಮ್ಮ ಅನುಭವಕ್ಕೆ ಬಂದಂತೆ ಅವರ ತರುವಾಯ ಅವರ ಸಂತತಿಯವರಾದ ನಿಮ್ಮನ್ನೇ ಎಲ್ಲಾ ಜನಾಂಗಗಳೊಳಗಿಂದ ಆರಿಸಿಕೊಂಡನು.

ನಾನು ಭೂಮಿಯ ಕಟ್ಟಕಡೆಯಲ್ಲಿ ಹಿಡಿದು ದಿಗಂತಗಳಿಂದ ಕರೆದ ಜನವೇ, “ನೀನು ನನ್ನ ಸೇವಕನು, ನಾನು ನಿನ್ನನ್ನು ಆರಿಸಿಕೊಂಡೆನು, ತಳ್ಳಲಿಲ್ಲ” ಎಂದು ನಾನು ಹೇಳಿ ಸಂಬೋಧಿಸಿದ ಪ್ರಜೆಯೇ,

ನಮ್ಮ ಮೂಲಪುರುಷನಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಅವನಿಗೆ ಕಾಣಿಸಿಕೊಂಡು;