TSK

TSK · ಅರಣ್ಯಕಾಂಡ 1:47

مراجع Treasury of Scripture Knowledge في ಕನ್ನಡ IRV.

العودة إلى المقطع

ಇಸ್ರಾಯೇಲರಲ್ಲಿ ಸೈನಿಕರಾಗಿ ಹೊರಡತಕ್ಕವರನ್ನು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರೆಲ್ಲರನ್ನು ಸೈನ್ಯಸೈನ್ಯವಾಗಿ ನೀನೂ ಆರೋನನೂ ಲೆಕ್ಕಹಾಕಬೇಕು.

ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಲೇವಿಯರು ಇಸ್ರಾಯೇಲರ ಸಂಗಡ ಲೆಕ್ಕಹಾಕಲಿಲ್ಲ.

¶ ಯೆಹೋವನು ಮೋಶೆಯ ಸಂಗಡ ಮಾತನಾಡಿ, ಹೇಳಿದ್ದೇನೆಂದರೆ:

ಬೇರೆ ಇಸ್ರಾಯೇಲರಿಗೆ ಸ್ವತ್ತು ದೊರಕಿದಂತೆ ಲೇವಿಯರಿಗೆ ಸ್ವತ್ತು ದೊರೆಯದೆ ಹೋದುದರಿಂದ ಅವರು ಇಸ್ರಾಯೇಲರೊಡನೆ ಲೆಕ್ಕಿಸಲ್ಪಡಲಿಲ್ಲ ಲೇವಿಯರೊಳಗೆ ಒಂದು ತಿಂಗಳು ಮೊದಲುಗೊಂಡು ಹೆಚ್ಚು ವಯಸ್ಸುಳ್ಳ ಗಂಡಸರನ್ನು ಲೆಕ್ಕಿಸಲಾಗಿ ಅವರ ಸಂಖ್ಯೆ - 23,000 ಮಂದಿ.

ಅರಸನ ಅಪ್ಪಣೆಯು ಯೋವಾಬನಿಗೆ ಅಸಹ್ಯವಾಗಿದ್ದುದರಿಂದ ಅವನು ಲೇವಿ ಮತ್ತು ಬೆನ್ಯಾಮೀನ್ ಕುಲಗಳವರ ಜನಗಣತಿಯನ್ನು ಮಾಡಲಿಲ್ಲ.