TSK

TSK · ಅರಣ್ಯಕಾಂಡ 1:5

مراجع Treasury of Scripture Knowledge في ಕನ್ನಡ IRV.

العودة إلى المقطع

ಲೇಯಳು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ಯೆಹೋವನು ನನ್ನ ವ್ಯಥೆಯನ್ನು ನೋಡಿದ್ದಾನೆ, ಇನ್ನು ಮುಂದೆ ನನ್ನ ಗಂಡನು ನನ್ನನ್ನು ಪ್ರೀತಿಸುವನು ಎಂದು ಹೇಳಿ ಅದಕ್ಕೆ ‘ರೂಬೇನ್ ಎಂದು’ ಹೆಸರಿಟ್ಟಳು.”

ಆಕೆಯು ಹೆರಿಗೆಯ ನೋವಿನಿಂದ ಬಹು ಕಷ್ಟಪಡುತ್ತಿರುವಾಗ ಸೂಲಗಿತ್ತಿಯು ಆಕೆಗೆ, “ಅಂಜಬೇಡ ಇನ್ನೊಂದು ಗಂಡು ಮಗುವು ಹುಟ್ಟುವುದು” ಎಂದು ಹೇಳಿದಳು.

¶ ಯಾಕೋಬನಿಗೆ ಲೇಯಳಲ್ಲಿ ಹುಟ್ಟಿದವರು ಯಾರೆಂದರೆ: ಯಾಕೋಬನ ಚೊಚ್ಚಲ ಮಗನಾದ ರೂಬೇನ್ ಮತ್ತು ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೆಬುಲೂನ್.

¶ ಯಾಕೋಬನು ತನ್ನ ಮಕ್ಕಳನ್ನು ಕರೆಯಿಸಿ ಅವರಿಗೆ, ನೀವೆಲ್ಲರೂ ಕೂಡಿ ಬನ್ನಿರಿ. ಮುಂದಿನ ದಿನಗಳಲ್ಲಿ ನಿಮಗೆ ಸಂಭವಿಸುವುದನ್ನು ನಿಮಗೆ ತಿಳಿಸುತ್ತೇನೆ.

¶ ದೇವದರ್ಶನ ಗುಡಾರದ ಪೂರ್ವದಿಕ್ಕಿನಲ್ಲಿ ಸೂರ್ಯೋದಯವಾಗುವ ಕಡೆಗೆ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ತಮ್ಮ ದಂಡಿನ ಧ್ವಜದ ಹತ್ತಿರ ಡೇರೆಗಳನ್ನು ಹಾಕಿಕೊಳ್ಳಬೇಕು. ಯೆಹೂದ ಕುಲದ ಸೈನ್ಯಾಧಿಪತಿಯು ಅಮ್ಮೀನಾದಾಬನ ಮಗನಾದ ನಹಶೋನನು.

¶ ಮೊದಲನೆಯ ದಿನದಲ್ಲಿ ಕಾಣಿಕೆಯನ್ನು ಅರ್ಪಿಸಿದವನು ಯೆಹೂದ ಕುಲಾಧಿಪತಿಯಾದ ಅಮ್ಮೀನಾದಾಬನ ಮಗನಾದ ನಹಶೋನ.

¶ ಮುಂಭಾಗದಲ್ಲಿ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕನಾಗಿ ಇದ್ದವನು ಅಮ್ಮೀನಾದಾಬನ ಮಗನಾದ ನಹಶೋನನು.

¶ ದೇವಪುರುಷನಾದ ಮೋಶೆ ದೇಹವನ್ನು ಬಿಡುವುದಕ್ಕಿಂತ ಮುಂಚೆ ಇಸ್ರಾಯೇಲರ ವಿಷಯವಾಗಿ ಹೇಳಿದ ಆಶೀರ್ವಾದವು:

ಮುದ್ರೆ ಒತ್ತಿಸಿಕೊಂಡವರ ಸಂಖ್ಯೆಯು ಪ್ರಸಿದ್ಧವಾದಾಗ ಅದನ್ನು ನಾನು ಕೇಳಿಸಿಕೊಂಡೆನು. ಇಸ್ರಾಯೇಲ್ಯರ ಪ್ರತಿಯೊಂದು ಕುಲಕ್ಕೆ ಸೇರಿದವರು ಮುದ್ರೆಯೊತ್ತಿಸಿಕೊಂಡವರ ಸಂಖ್ಯೆ ಒಂದು ಲಕ್ಷದ ನಲವತ್ತನಾಲ್ಕು ಸಾವಿರ.