ಯಾಜಕ ಉದ್ಯೋಗವನ್ನು ನಡೆಸುವುದಕ್ಕಾಗಿ ಆರೋನನನ್ನು ಮತ್ತು ಅವನ ಮಕ್ಕಳನ್ನು ನೇಮಿಸಬೇಕು. ಇತರರು ಆ ಕೆಲಸಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು” ಎಂದು ಹೇಳಿದನು.
TSK
TSK · ಅರಣ್ಯಕಾಂಡ 1:51
مراجع Treasury of Scripture Knowledge في ಕನ್ನಡ IRV.
¶ ಯೆಹೋವನು ಮೋಶೆ ಮತ್ತು ಆರೋನರಿಗೆ ಆಜ್ಞಾಪಿಸಿದ್ದೇನೆಂದರೆ,
ಅವರು ಮಹಾಪರಿಶುದ್ಧ ವಸ್ತುಗಳ ಹತ್ತಿರಕ್ಕೆ ಬಂದು ಸಾಯದಂತೆ ನೀವು ಅವರ ವಿಷಯದಲ್ಲಿ ಎಚ್ಚರಿಕೆ ವಹಿಸಬೇಕು.
¶ ಎರಡನೆಯ ವರ್ಷದ ಎರಡನೆಯ ತಿಂಗಳಿನ ಇಪ್ಪತ್ತನೆಯ ದಿನದಲ್ಲಿ ದೇವದರ್ಶನದ ಗುಡಾರದ ಮೇಲಿದ್ದ ಮೇಘವು ಮೇಲಕ್ಕೆ ಎದ್ದಿತು.
¶ ಅವರ ಹಿಂದೆ ಕೆಹಾತ್ಯರು ದೇವಾಲಯದ ಸಾಮಾನುಗಳನ್ನು ಹೊತ್ತುಕೊಂಡು ಹೊರಟರು. ಅವರು ಬರುವಷ್ಟರೊಳಗೆ ಉಳಿದ ಲೇವಿಯರು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.
ನಾನು ಯಾರನ್ನು ಆಯ್ದುಕೊಳ್ಳುತ್ತೇನೋ ಅವನ ಕೋಲು ಚಿಗುರುವುದು. ಇಸ್ರಾಯೇಲರು ನಿಮ್ಮಿಬ್ಬರ ವಿರುದ್ಧವಾಗಿ ಗುಣುಗುಟ್ಟುವುದನ್ನು ನಾನು ನಿಲ್ಲಿಸಿ ಬಿಡುವೆನು’” ಎಂದನು.
ನೀನೂ, ನಿನ್ನ ಸಂತತಿಯವರೂ ಯಾಜಕೋದ್ಯೋಗವನ್ನು ಕೈಕೊಂಡವರಾಗಿ ಯಜ್ಞವೇದಿಯ ಮತ್ತು ತೆರೆಯ ಒಳಗಿನ ಕಾರ್ಯಗಳನ್ನು ನಡೆಸಬೇಕು. ಅವುಗಳ ಸೇವಾಕಾರ್ಯವನ್ನು ನೀವೇ ಮಾಡಬೇಕು. ನಾನು ಯಾಜಕತ್ವವನ್ನು ನಿಮಗೆ ದಾನವಾಗಿ ಅನುಗ್ರಹಿಸಿದ್ದೇನೆ. ಇತರರು ಅದಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು” ಎಂದನು.
ಬೇತ್ ಷೆಮೆಷಿನವರು ಯೆಹೋವನ ಮಂಜೂಷದಲ್ಲಿ ಇಣಕಿ ನೋಡಿದ್ದರಿಂದ ಯೆಹೋವನು ಅವರಲ್ಲಿ ಎಪ್ಪತ್ತು ಮಂದಿಯನ್ನು ಸಾಯಿಸಿದನು. ಯೆಹೋವನು ತಮ್ಮಲ್ಲಿ ಮಹಾನಾಶನವನ್ನು ಉಂಟುಮಾಡಿದ್ದರಿಂದ ಬೇತ್ ಷೆಮೆಷಿನವರು ಗೋಳಾಡಿದರು.