TSK

TSK · ಅರಣ್ಯಕಾಂಡ 1:54

مراجع Treasury of Scripture Knowledge في ಕನ್ನಡ IRV.

العودة إلى المقطع

ನೀವು ಆತನಲ್ಲಿ ಲಕ್ಷ್ಯವಿಟ್ಟು ಆತನ ಮಾತಿಗೆ ವಿಧೇಯರಾಗಿರಬೇಕು. ಆತನನ್ನು ಧಿಕ್ಕರಿಸಿದರೆ ನಿಮ್ಮ ಅಪರಾಧವನ್ನು ಕ್ಷಮಿಸಲಾರನು. ನನ್ನ ನಾಮಮಹಿಮೆ ಆತನಲ್ಲಿ ಇರುವುದು.

ಅವರು ಮಾಡಿದ್ದ ಕೆಲಸವನ್ನು ಮೋಶೆಯು ಪರೀಕ್ಷಿಸಿ ನೋಡಲಾಗಿ ಯೆಹೋವನ ಅಪ್ಪಣೆಯಂತೆಯೇ ಅವರು ಎಲ್ಲವನ್ನು ಮಾಡಿದ್ದರಿಂದ ಮೋಶೆಯು ಅವರನ್ನು ಆಶೀರ್ವದಿಸಿದನು.

ಅವರು ದೇವದರ್ಶನದ ಗುಡಾರದೊಳಗೆ ಹೋಗುವಾಗಲೂ, ಯಜ್ಞವೇದಿಯ ಹತ್ತಿರ ಬರುವಾಗಲೂ ಯೆಹೋವನು ಆಜ್ಞಾಪಿಸಿದಂತೆ ಕೈಕಾಲುಗಳನ್ನು ತೊಳೆದುಕೊಳ್ಳುತ್ತಿದ್ದರು.

¶ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಮಾಡಿದರು. ಹಾಗೆಯೇ ದಂಡು ದಂಡಾಗಿ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು ಮತ್ತು ಗೋತ್ರಕುಟುಂಬಗಳ ಪ್ರಕಾರವೇ ಹೊರಡುತ್ತಿದ್ದರು.

ಹಾಗೆಯೇ ಅವರು ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯ ವೇಳೆಯಲ್ಲಿ ಸೀನಾಯಿ ಅರಣ್ಯದಲ್ಲಿ ಪಸ್ಕಹಬ್ಬವನ್ನು ಆಚರಿಸಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಎಲ್ಲವನ್ನು ಇಸ್ರಾಯೇಲರು ಮಾಡಿದರು.

ಚಲ್ಪಹಾದನ ಹೆಣ್ಣುಮಕ್ಕಳು ಯೆಹೋವನ ಆಜ್ಞಾನುಸಾರವೇ ನಡೆದುಕೊಂಡರು.

ಅದಕ್ಕೆ ಸಮುವೇಲನು, “ಯೆಹೋವನು ವಿಧೇಯತ್ವವನ್ನು ಮೆಚ್ಚುವಷ್ಟು ಯಜ್ಞಹೋಮಗಳಿಗೆ ಮೆಚ್ಚುತ್ತಾನೋ? ಯಜ್ಞವನ್ನರ್ಪಿಸುವುದಕ್ಕಿಂತ ಆತನ ಆಜ್ಞಾಪಾಲನೆ ಉತ್ತಮವಾಗಿದೆ; ಟಗರುಗಳ ಕೊಬ್ಬಿಗಿಂತ ವಿಧೇಯತೆ ವಿಶಿಷ್ಟವಾದುದು.