TSK

TSK · ಅರಣ್ಯಕಾಂಡ 10:11

مراجع Treasury of Scripture Knowledge في ಕನ್ನಡ IRV.

العودة إلى المقطع

“ಮೊದಲನೆಯ ತಿಂಗಳಿನ ಪ್ರಥಮ ದಿನದಲ್ಲಿ ದೇವದರ್ಶನದ ಗುಡಾರವನ್ನು ತೆರೆಯಬೇಕು.

¶ ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟ ಎರಡನೆಯ ವರ್ಷದ ಎರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸೀನಾಯಿ ಅರಣ್ಯದಲ್ಲಿ ದೇವದರ್ಶನದ ಗುಡಾರದೊಳಗೆ ಯೆಹೋವನು ಮೋಶೆಯ ಸಂಗಡ ಹೀಗೆ ಮಾತನಾಡಿದನು,

ಹಾಗೆಯೇ ಅವರು ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯ ವೇಳೆಯಲ್ಲಿ ಸೀನಾಯಿ ಅರಣ್ಯದಲ್ಲಿ ಪಸ್ಕಹಬ್ಬವನ್ನು ಆಚರಿಸಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಎಲ್ಲವನ್ನು ಇಸ್ರಾಯೇಲರು ಮಾಡಿದರು.

ಆ ಮೇಘವು ಗುಡಾರದಿಂದ ಮೇಲಕ್ಕೆ ಎದ್ದಾಗ ಇಸ್ರಾಯೇಲರು ಮುಂದಕ್ಕೆ ಪ್ರಯಾಣಮಾಡುತ್ತಿದ್ದರು. ಆ ಮೇಘವು ಎಲ್ಲಿ ನಿಲ್ಲುವುದೋ ಅಲ್ಲಿ ಇಸ್ರಾಯೇಲರು ತಮ್ಮ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು.