TSK

TSK · ಅರಣ್ಯಕಾಂಡ 10:35

مراجع Treasury of Scripture Knowledge في ಕನ್ನಡ IRV.

العودة إلى المقطع

‘ಥಳಥಳಿಸುವ ನನ್ನ ಕತ್ತಿಯನ್ನು ನಾನು ಹದಮಾಡಿ, ನಾನು ಕೈ ಚಾಚಿ ನ್ಯಾಯವನ್ನು ಸ್ಥಾಪಿಸುವುದಕ್ಕೆ ಮುನ್ನುಗ್ಗಿ ನನ್ನ ಶತ್ರುಗಳಿಗೆ ಮುಯ್ಯಿತೀರಿಸುವೆನು, ನನ್ನನ್ನು ದ್ವೇಷಿಸಿದವರಿಗೆ ಪ್ರತಿದಂಡನೆ ಮಾಡುವೆನು;

ಜಯವು ಯೆಹೋವನಿಂದಲೇ ಉಂಟಾಗುವುದು. ಯೆಹೋವನೇ, ನಿನ್ನ ಆಶೀರ್ವಾದವು ನಿನ್ನ ಜನರ ಮೇಲೆ ಇರಲಿ. ಸೆಲಾ.

ಹೊಗೆಯು ಗಾಳಿಯಿಂದ ಹೇಗೋ, ಹಾಗೆ ಅವರು ಆತನಿಂದ ಹಾರಿಹೋಗಲಿ; ಬೆಂಕಿಯ ಮುಂದೆ ಮೇಣವು ಕರಗಿ ಲಯವಾಗಿ ಹೋಗುವಂತೆ, ದೇವರ ಎದುರಿನಲ್ಲಿ ದುಷ್ಟರು ನಾಶವಾಗಿ ಹೋಗಲಿ.

ಯೆಹೋವನೇ, ಎದ್ದು ನಿನ್ನ ಪ್ರತಾಪಯುಕ್ತವಾದ ಮಂಜೂಷದೊಡನೆ, ನಿನ್ನ ವಾಸಸ್ಥಾನಕ್ಕೆ ಬಂದು ನೆಲೆಸು.

ಯೆಹೋವನ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಂಡು, ಬಲವನ್ನು ತಂದುಕೋ! ಪೂರ್ವಕಾಲದಲ್ಲಿ, ತಲಾಂತರಗಳಲ್ಲಿ, ಎಚ್ಚರಗೊಂಡಂತೆ ಈಗಲೂ ಎಚ್ಚೆತ್ತುಕೋ, ರಹಬನ್ನು ಛೇದಿಸಿ ಘಟಸರ್ಪವನ್ನು ತಿವಿದುಬಿಟ್ಟವನು ನೀನಲ್ಲವೋ?