TSK

TSK · ಅರಣ್ಯಕಾಂಡ 11:17

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಅಬ್ರಾಮನು ಅಡ್ಡಬೀಳಲು ದೇವರು ಅವನ ಸಂಗಡ ಮಾತನಾಡಿ,

¶ ಇದಲ್ಲದೆ ಯೆಹೋವನು, “ಸೊದೋಮ್ ಗೊಮೋರಗಳ ದೊಡ್ಡ ಮೊರೆ ನನಗೆ ಮುಟ್ಟಿತು; ಆ ಊರಿನವರ ಮೇಲೆ ಹೊರಿಸಿರುವ ಪಾಪವು ಎಷ್ಟೋ ಘೋರವಾದದ್ದು,

ಅವರೇ ಯಾವಾಗಲೂ ಜನರಿಗೆ ನ್ಯಾಯವನ್ನು ತೀರಿಸಲಿ. ಅವರು ದೊಡ್ಡ ವ್ಯಾಜ್ಯಗಳನ್ನು ನಿನ್ನ ಮುಂದೆ ತರಲಿ. ಸಣ್ಣ ವ್ಯಾಜ್ಯಗಳನ್ನೆಲ್ಲಾ ಅವರೇ ತೀರಿಸಲಿ. ಅವರು ನಿನ್ನೊಂದಿಗೆ ಈ ಭಾರವನ್ನು ಹೊರುವುದರಿಂದ ನಿನಗೆ ಸುಲಭವಾಗುವುದು.

ಯೆಹೋವನು ಸೀನಾಯಿ ಬೆಟ್ಟದ ಶಿಖರಕ್ಕೆ ಇಳಿದು ಬಂದನು. ಆತನು ಬೆಟ್ಟದ ತುದಿಗೆ ಬಾ ಎಂದು ಮೋಶೆಯನ್ನು ಕರೆಯಲು ಅವನು ಬೆಟ್ಟವನ್ನೇರಿದನು.

¶ ಮೋಶೆ ಯೆಹೋವನ ಸಂಗಡ ಮಾತನಾಡಬೇಕೆಂದು ದೇವದರ್ಶನದ ಗುಡಾರದೊಳಗೆ ಹೋದಾಗ ಆಜ್ಞಾಶಾಸನಗಳ ಮಂಜೂಷದ ಮೇಲಣ ಕೃಪಾಸನದ ಮೇಲಿನಿಂದ ಆ ಎರಡು ಕೆರೂಬಿಗಳ ನಡುವೆಯಿಂದ ತನ್ನ ಸಂಗಡ ಮಾತನಾಡುವ ಯೆಹೋವನ ಸ್ವರವು ಅವನಿಗೆ ಕೇಳಿಸಿತು. ಹೀಗೆ ಯೆಹೋವನು ಮೋಶೆಯ ಸಂಗಡ ಮಾತನಾಡಿದನು.

ಯೆಹೋವನು ಮೇಘಸ್ತಂಭದೊಳಗೆ ಇಳಿದು ಬಂದು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ನಿಂತು ಆರೋನನ್ನು ಮತ್ತು ಮಿರ್ಯಾಮಳನ್ನು ಹತ್ತಿರಕ್ಕೆ ಕರೆದನು. ಅವರು ಮುಂದೆ ಬಂದರು.

¶ ಅದಕ್ಕೆ ಯೆಹೋವನು ಮೋಶೆಗೆ, “ನೂನನ ಮಗನಾದ ಯೆಹೋಶುವನಲ್ಲಿ ನನ್ನ ಆತ್ಮವು ವಾಸಿಸುತ್ತಿದೆ,

¶ ಅವರು ಆಚೆ ದಡಕ್ಕೆ ಸೇರಿದ ಮೇಲೆ ಎಲೀಯನು ಎಲೀಷನನ್ನು, “ನಿನ್ನನ್ನು ಬಿಟ್ಟು ಹೋಗುವ ಮೊದಲು, ನಾನು ನಿನಗೋಸ್ಕರ ಏನು ಮಾಡಬೇಕೆನ್ನುತ್ತೀ ಹೇಳು” ಎಂದು ಕೇಳಿದನು. ಅದಕ್ಕೆ ಎಲೀಷನು, “ನಿನಗಿರುವ ಆತ್ಮದಲ್ಲಿ ನನಗೆ ಎರಡರಷ್ಟು ಪಾಲನ್ನು ಅನುಗ್ರಹಿಸು” ಎಂದು ಬೇಡಿಕೊಂಡನು.

ಅವರನ್ನು ಉಪದೇಶಿಸಲು ನೀನು ನಿನ್ನ ಒಳ್ಳೆಯ ಆತ್ಮನನ್ನು ಕೊಟ್ಟೆ. ಅವರ ಬಾಯಿಂದ ಮನ್ನವನ್ನು ಹಿಂದೆಗೆಯಲಿಲ್ಲ. ಬಾಯಾರಿದಾಗ ಅವರಿಗೆ ನೀರನ್ನು ಕೊಟ್ಟೆ.

“ಒಬ್ಬ ವಿಮೋಚಕನು ಚೀಯೋನಿಗೂ, ದ್ರೋಹವನ್ನು ಬಿಟ್ಟುಬಿಟ್ಟ ಯಾಕೋಬ್ಯರ ಬಳಿಗೂ ಬರುವನು”, ಯೆಹೋವನೇ ಇದನ್ನು ನುಡಿದಿದ್ದಾನೆ.

‹ಪರಲೋಕದಿಂದ ಇಳಿದು ಬಂದವನೇ, ಅಂದರೆ,›‹ಮನುಷ್ಯಕುಮಾರನೇ ಹೊರತು ಮತ್ತಾರು ಪರಲೋಕಕ್ಕೆ ಏರಿ ಹೋದವರಿಲ್ಲ.›

ಆದುದರಿಂದ ಸಹೋದರರೇ, ಪವಿತ್ರಾತ್ಮಭರಿತರೂ, ಜ್ಞಾನಸಂಪನ್ನರೂ ಮತ್ತು ಒಳ್ಳೆಯ ಸಾಕ್ಷಿಯನ್ನುಳಿಸಿಕೊಂಡಿರುವ ಏಳು ಮಂದಿಯನ್ನು ನಿಮ್ಮೊಳಗಿಂದ ನೋಡಿ ಆರಿಸಿಕೊಳ್ಳಿರಿ. ಅವರನ್ನು ಈ ಕೆಲಸಕ್ಕಾಗಿ ನೇಮಿಸುವೆವು.

ನಾವು ಇಹಲೋಕದ ಆತ್ಮವನ್ನು ಹೊಂದದೆ ದೇವರು ನಮಗೆ ಉಚಿತವಾಗಿ ದಯಪಾಲಿಸಿರುವ ವರಗಳನ್ನು ತಿಳಿದುಕೊಳ್ಳುವುದಕ್ಕಾಗಿ ದೇವರಿಂದ ಬಂದ ಆತ್ಮವನ್ನೇ ಹೊಂದಿದವರಾಗಿದ್ದೇವೆ.

ಹೀಗಿರಲು ಈ ಮಾತನ್ನು ತಿರಸ್ಕರಿಸುವವನು ಮನುಷ್ಯರನ್ನು ಮಾತ್ರವಲ್ಲದೆ, ನಿಮಗೆ ಪವಿತ್ರಾತ್ಮವರವನ್ನು ದಯಪಾಲಿಸುವ ದೇವರನ್ನೂ ತಿರಸ್ಕರಿಸುವವನಾಗಿದ್ದಾನೆ.

ಇವರು ತಮ್ಮನ್ನು ತಾವು ಪ್ರತ್ಯೇಕಿಸಿಕೊಳ್ಳುವವರೂ, ಪ್ರಾಕೃತ ಮನುಷ್ಯರೂ, ದೇವರಾತ್ಮ ಇಲ್ಲದವರೂ ಆಗಿದ್ದಾರೆ.