TSK

TSK · ಅರಣ್ಯಕಾಂಡ 13:17

مراجع Treasury of Scripture Knowledge في ಕನ್ನಡ IRV.

العودة إلى المقطع

ತರುವಾಯ ಅಬ್ರಾಮನು ಅಲ್ಲಿಂದ ಹೊರಟು ಕಾನಾನ್ ದೇಶದ ದಕ್ಷಿಣ ಸೀಮೆಗೆ ಪ್ರಯಾಣ ಮಾಡುತ್ತಾ ಹೋದನು.

ಆದರೆ ಸಿದ್ದೀಮ್ ತಗ್ಗು ಪ್ರದೇಶ ಕಲ್ಲರಗಿನ ಕೆಸರುಗುಣಿಗಳಿಂದ ತುಂಬಿತ್ತು. ಸೊದೋಮ್ ಗೊಮೋರಗಳ ರಾಜರ ಕಡೆಯವರು ಓಡಿಹೋಗುವಾಗ ಆ ಗುಣಿಗಳಲ್ಲಿ ಬಿದ್ದು ಸತ್ತರು; ಉಳಿದವರು ಬೆಟ್ಟಗಳಿಗೆ ಓಡಿಹೋದರು.

ದಕ್ಷಿಣ ಸೀಮೆಯಲ್ಲಿ ಅಮಾಲೇಕ್ಯರು, ಬೆಟ್ಟದ ಸೀಮೆಯಲ್ಲಿ ಹಿತ್ತಿಯರು, ಯೆಬೂಸಿಯರು, ಅಮೋರಿಯರು ಸಮುದ್ರತೀರದಲ್ಲಿ ಮತ್ತು ಯೊರ್ದನ್ ಹೊಳೆಯ ಬಳಿಯಲ್ಲಿ ಕಾನಾನ್ಯರೂ ವಾಸವಾಗಿದ್ದಾರೆ” ಎಂದು ತಿಳಿಸಿದರು.

ಆಗ ಬೆಟ್ಟದಲ್ಲಿದ್ದ ಅಮೋರಿಯರು ನಿಮಗೆ ವಿರುದ್ಧವಾಗಿ ಹೊರಟು ಜೇನುಹುಳಗಳಂತೆ ನಿಮ್ಮನ್ನು ಮುತ್ತಿ ಸೇಯೀರಿನಲ್ಲಿ ಹೊರ್ಮದ ವರೆಗೂ ಬೆನ್ನಟ್ಟಿ ಸಂಹರಿಸಿದರು.

¶ ಹೀಗೆ ಯೆಹೋಶುವನು ಬೆಟ್ಟದ ಮೇಲಣ ಪ್ರದೇಶ, ದಕ್ಷಿಣಪ್ರಾಂತ್ಯ, ಇಳುಕಲ್ಲಿನ ಪ್ರದೇಶ, ಬೆಟ್ಟಗಳ ತಗ್ಗು ಪ್ರದೇಶ ಇವುಗಳನ್ನು ಸ್ವಾಧೀನಪಡಿಸಿಕೊಂಡು ಇವುಗಳ ರಾಜಪ್ರಜೆಗಳನ್ನು ಸಂಹರಿಸಿಬಿಟ್ಟನು. ಒಬ್ಬನನ್ನೂ ಉಳಿಸಲಿಲ್ಲ. ಇಸ್ರಾಯೇಲ್‍ ದೇವರಾದ ಯೆಹೋವನ ಆಜ್ಞೆಯಂತೆ ಜೀವವಿರುವುದೆಲ್ಲವನ್ನು ಸಂಹರಿಸಿದನು.

ತರುವಾಯ ಯೆಹೂದ್ಯರು ಹೋಗಿ ಪರ್ವತಪ್ರದೇಶ, ದಕ್ಷಿಣಸೀಮೆ ಹಾಗೂ ಕಣಿವೆ ಪ್ರದೇಶಗಳಲ್ಲಿದ್ದ ಕಾನಾನ್ಯರೊಡನೆ ಯುದ್ಧಮಾಡಿದರು.

ಯೆಹೋವನು ಯೆಹೂದ್ಯರ ಸಂಗಡ ಇದ್ದುದರಿಂದ ಅವರು ಪರ್ವತಪ್ರದೇಶಗಳನ್ನೆಲ್ಲಾ ಸ್ವಾಧೀನಪಡಿಸಿಕೊಂಡರು. ಆದರೆ ತಗ್ಗಿನ ಪ್ರದೇಶಗಳಲ್ಲಿ ವಾಸಿಸುವವರಿಗೆ ಕಬ್ಬಿಣದ ರಥಗಳಿದ್ದುದರಿಂದ ಅವರನ್ನು ಹೊರಡಿಸುವುದಕ್ಕೆ ಆಗಲಿಲ್ಲ.