TSK

TSK · ಅರಣ್ಯಕಾಂಡ 13:20

مراجع Treasury of Scripture Knowledge في ಕನ್ನಡ IRV.

العودة إلى المقطع

ಅವರು ಎಷ್ಕೋಲ್ ಎಂಬ ತಗ್ಗಿಗೆ ಬಂದು ಅಲ್ಲಿ ದ್ರಾಕ್ಷಾಲತೆಯಿಂದ ಒಂದೇ ಗೊಂಚಲುಳ್ಳ ಕೊಂಬೆಯನ್ನು ಕೊಯ್ದರು; ಇಬ್ಬರು ಅದನ್ನು ಅಡ್ಡಕೋಲಿನಿಂದ ಹೊತ್ತುಕೊಂಡು ಬಂದರು. ಕೆಲವು ದಾಳಿಂಬೆ ಮತ್ತು ಅಂಜೂರದ ಹಣ್ಣುಗಳನ್ನೂ ತಂದರು.

ಅವರು ಅಲ್ಲಿನ ಹಣ್ಣುಗಳಲ್ಲಿ ಕೆಲವನ್ನು ತಂದು ತೋರಿಸಿ, “ನಮ್ಮ ದೇವರಾದ ಯೆಹೋವನು ನಮಗೆ ಕೊಡುವ ಆ ದೇಶವು ಒಳ್ಳೆಯ ದೇಶ” ಎಂದು ನಮಗೆ ತಿಳಿಸಿದರು.

¶ ಆಗ ಮೋಶೆ ಯೆಹೋಶುವನನ್ನು ಕರೆದು ಇಸ್ರಾಯೇಲರ ಮುಂದೆ ಅವನಿಗೆ, “ಯೆಹೋವನು ಇವರ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶಕ್ಕೆ ನೀನೇ ಇವರೊಡನೆ ಹೋಗಿ ಅದನ್ನು ಅವರಿಗೆ ಸ್ವಾಧೀನಪಡಿಸಬೇಕು. ಆದುದರಿಂದ ಶೂರನಾಗಿ ಧೈರ್ಯದಿಂದಿರು;

ನಿನ್ನನ್ನು ಕೈಬಿಡುವುದಿಲ್ಲ, ತೊರೆಯುವುದಿಲ್ಲ, ಸ್ಥಿರಚಿತ್ತನಾಗಿರು, ಧೈರ್ಯದಿಂದಿರು. ಏಕೆಂದರೆ ನಾನು ಈ ಜನರ ಪೂರ್ವಿಕರಿಗೆ ವಾಗ್ದಾನಮಾಡಿದ ದೇಶವನ್ನು ಇವರಿಗಾಗಿ ನೀನೇ ಸ್ವಾಧೀನಮಾಡಿಕೊಡಬೇಕು.

¶ ನೂನನ ಮಗನಾದ ಯೆಹೋಶುವನು ಇಬ್ಬರು ಗೂಢಚಾರರನ್ನು ಗುಪ್ತವಾಗಿ ಯೆರಿಕೋ ಪಟ್ಟಣವನ್ನೂ ನೋಡುವುದಕ್ಕೋಸ್ಕರ ಶಿಟ್ಟೀಮಿನಿಂದ ಕಳುಹಿಸಿದನು. ಅವರಿಗೆ “ನೀವು ಹೊರಟು ಹೋಗಿ ಕಾನಾನ್ ದೇಶದ ಯೆರಿಕೋ ಪಟ್ಟಣವನ್ನು ನೋಡಿರಿ” ಎಂದನು. ಆಗ ಅವರು ಹೊರಟು ಹೋಗಿ ರಾಹಾಬಳೆಂಬ ವೇಶ್ಯೆಯ ಮನೆಯಲ್ಲಿ ಇಳಿದುಕೊಂಡರು.

¶ ಗೂಢಚಾರರು ಹೊರಟು ಹೋಗಿ ಆ ಬೆಟ್ಟವನ್ನು ಸೇರಿ ಬೆನ್ನಟ್ಟುವವರು ಹಿಂದಿರುಗುವ ತನಕ ಮೂರು ದಿನಗಳ ಕಾಲ ಅಲ್ಲೇ ತಂಗಿದ್ದರು. ಬೆನ್ನಟ್ಟುವವರು ಅವರನ್ನು ದಾರಿಯುದ್ದಕ್ಕೂ ಹುಡುಕಿ ಕಾಣದೆ ಹಿಂದಿರುಗಿದರು.

ಅವರು ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ, ಸಾರವುಳ್ಳ ಭೂಮಿಯನ್ನೂ, ಸಮಸ್ತ ವಿಧವಾದ ಉತ್ತಮ ವಸ್ತುಗಳಿಂದ ತುಂಬಿದ ಮನೆಗಳನ್ನೂ, ತೋಡಿದ ಬಾವಿಗಳನ್ನೂ, ದ್ರಾಕ್ಷಿತೋಟಗಳನ್ನೂ, ಎಣ್ಣೇಮರಗಳ ತೋಪುಗಳನ್ನೂ, ಹೆಚ್ಚಾದ ಹಣ್ಣಿನ ಮರ ಇವುಗಳನ್ನೂ ವಶಮಾಡಿಕೊಂಡು ಚೆನ್ನಾಗಿ ತಿಂದು, ಕುಡಿದು ತೃಪ್ತರಾಗಿ ಕೊಬ್ಬಿ, ನೀನು ಕೊಟ್ಟ ಸಮೃದ್ಧಿಯಲ್ಲಿ ಆನಂದಿಸುತ್ತಿದ್ದರು.

ಅವುಗಳನ್ನು ಒಳ್ಳೆಯ ಮೇವಿನಿಂದ ಮೇಯಿಸುವೆನು; ಅವುಗಳ ಹುಲ್ಲುಗಾವಲು ಇಸ್ರಾಯೇಲಿನ ಎತ್ತರವಾದ ಬೆಟ್ಟಗಳಲ್ಲಿರುವುದು; ಅವು ಒಳ್ಳೆಯ ಮಂದೆಯಲ್ಲಿ ಮಲಗಿ; ಇಸ್ರಾಯೇಲಿನ ಪರ್ವತಗಳಲ್ಲಿ ಪುಷ್ಟಿಯುಳ್ಳ ಮೇವನ್ನು ಮೇಯುವವು.

ಆದ್ದರಿಂದ, “ಕರ್ತನು ನನ್ನ ಸಹಾಯಕನು ನಾನು ಭಯಪಡುವುದಿಲ್ಲ, ಮನುಷ್ಯನು ನನಗೆ ಏನು ಮಾಡಿಯಾನು?” ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.