ಆ ಮೇಲೆ ಅವರು ಹಿಂದಿರುಗಿಕೊಂಡು ಕಾದೇಶ್ ಎನ್ನುವ ಎನ್ಮಿಷ್ಟಾಟಿಗೆ ಬಂದು ಅಮಾಲೇಕ್ಯರ ಸಮಸ್ತ ನಾಡನ್ನೂ ಹಚಚೋನ್ ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಗೆದ್ದರು.
TSK
TSK · ಅರಣ್ಯಕಾಂಡ 13:29
مراجع Treasury of Scripture Knowledge في ಕನ್ನಡ IRV.
ಹಿತ್ತಿಯರೂ, ಪೆರಿಜೀಯರೂ, ರೆಫಾಯರೂ,
ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ಬಿಡಿಸುವುದಕ್ಕೂ ಆ ದೇಶದಿಂದ ಅವರನ್ನು ಹಾಲೂ ಮತ್ತು ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.
¶ ಅಮಾಲೇಕ್ಯರು ರೆಫೀದೀಮಿನಲ್ಲಿ ಇಸ್ರಾಯೇಲರ ಸಂಗಡ ಯುದ್ಧಮಾಡಿದರು.
ಅಲ್ಲಿ ಅಮಾಲೇಕ್ಯರೂ, ಕಾನಾನ್ಯರೂ ನಿಮ್ಮ ಎದುರಿನಲ್ಲಿ ಇರುವುದರಿಂದ ನೀವು ಅವರ ಕತ್ತಿಯಿಂದ ಸತ್ತುಹೋಗುವಿರಿ. ನೀವು ಯೆಹೋವನ ಮಾತನ್ನು ಅನುಸರಿಸದೆ ತಿರುಗಿಬಿದ್ದ ಕಾರಣ ಆತನು ನಿಮ್ಮೊಂದಿಗೆ ಇರುವುದಿಲ್ಲ” ಎಂದು ಹೇಳಿದನು.
ತರುವಾಯ ಅಮಾಲೇಕ್ಯರನ್ನು ನೋಡಿ ಅವರ ವಿಷಯದಲ್ಲಿ ಪ್ರವಾದಿಸಿದ್ದೇನೆಂದರೆ, “ಅಮಾಲೇಕ್ಯರು ಜನಾಂಗಗಳಲ್ಲಿ ಪ್ರಮುಖರಲ್ಲವೇ, ಆದರೂ ನಾಶನವೇ ಅವರ ಗತಿ.”
ನಿಮ್ಮ ದೇವರಾದ ಯೆಹೋವನು ನಿಮಗೆ ಅಪ್ಪಣೆಕೊಟ್ಟಂತೆ ಇವರನ್ನು ಅಂದರೆ ಹಿತ್ತಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು, ಯೆಬೂಸಿಯರು, ಇವರೆಲ್ಲರನ್ನೂ ನಾಶಮಾಡಿಬಿಡಬೇಕು.
¶ ಯೊರ್ದನಿನ ಪಶ್ಚಿಮದಲ್ಲಿದ್ದ ಅಮೋರಿಯರ ಎಲ್ಲಾ ಅರಸರು ಮತ್ತು ಸಮುದ್ರದ ಬಳಿಯಲ್ಲಿದ್ದ ಎಲ್ಲಾ ಕಾನಾನ್ಯರ ರಾಜರು, ಯೆಹೋವನು ಇಸ್ರಾಯೇಲ್ಯರ ಮುಂದೆ ಯೊರ್ದನಿನ ಹೊಳೆಯನ್ನು ಬತ್ತಿಸಿ, ಅವರನ್ನು ದಾಟಿಸಿದನೆಂಬ ವಾರ್ತೆ ಕೇಳಲು ಅವರ ಎದೆಯೊಡೆದು ಹೋಯಿತು. ಇಸ್ರಾಯೇಲ್ಯರ ನಿಮಿತ್ತವಾಗಿ ಅವರು ಬಲಗುಂದಿ ಹೋದರು.
ಇಸ್ರಾಯೇಲರು ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜ್ಜೀಯರು, ಹಿವ್ವಿಯರು, ಯೆಬೂಸಿಯರು ಎಂಬೀ ಜನಾಂಗಗಳ ಮಧ್ಯದಲ್ಲಿ ವಾಸಮಾಡುತ್ತಾ,
ಇದಲ್ಲದೆ ಅವನು ಅಮಾಲೇಕ್ಯರಿಗೆ ವಿರೋಧವಾಗಿ ದಂಡೆತ್ತಿ ಹೋಗಿ ಪರಾಕ್ರಮದಿಂದ ಅವರನ್ನು ಸದೆಬಡಿದನು. ಇಸ್ರಾಯೇಲ್ಯರನ್ನು ಸುಲಿಗೆಮಾಡುವವರ ಕೈಗೆ ಸಿಕ್ಕದಂತೆ ತಪ್ಪಿಸಿದನು.
ಆ ಕಾಲದಲ್ಲಿ ಅವನೂ, ಅವನ ಜನರೂ ತೇಲಾಮಿನಿಂದ ಶೂರಿನವರೆಗೂ, ಐಗುಪ್ತ ದೇಶದವರೆಗೂ ವಿಸ್ತರಿಸಿಕೊಂಡಿರುವ ಪ್ರಾಂತ್ಯಗಳಲ್ಲಿ ವಾಸಿಸುತ್ತಿರುವ ಗೆಷೂರ್ಯರು, ಗಿಜ್ರೀಯರು, ಅಮಾಲೇಕ್ಯರು ಇವರ ಮೇಲೆ ಆಕ್ರಮಣ ಮಾಡಿ ಸುಲಿದುಕೊಳ್ಳುತ್ತಿದ್ದರು.
ಅವನು ಯಥಾರ್ಥಚಿತ್ತನೆಂದು ಕಂಡು ಅವನಿಗೆ, ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜ್ಜೀಯರು, ಯೆಬೂಸಿಯರು, ಗಿರ್ಗಾಷಿಯರು ಇವರ ದೇಶವನ್ನು ನಿನ್ನ ಸಂತಾನದವರಿಗೆ ಕೊಡುತ್ತೇನೆಂದು ವಾಗ್ದಾನಮಾಡಿ ಅದನ್ನು ನೆರವೇರಿಸಿದ್ದರಿಂದ ನೀನು ನೀತಿಸ್ವರೂಪನು.