TSK

TSK · ಅರಣ್ಯಕಾಂಡ 13:32

مراجع Treasury of Scripture Knowledge في ಕನ್ನಡ IRV.

العودة إلى المقطع

ಆದರೆ ಆ ದೇಶದ ನಿವಾಸಿಗಳು ಬಲಿಷ್ಠರು: ಅವರಿರುವ ಪಟ್ಟಣಗಳು ದೊಡ್ಡದಾಗಿಯೂ, ಕೋಟೆ ಕೊತ್ತಲುಗಳುಳ್ಳದ್ದಾಗಿಯೂ ಇದೆ. ಅದಲ್ಲದೆ ಅಲ್ಲಿ ಉನ್ನತ ಪುರುಷರನ್ನು ನೋಡಿದೆವು.

ನಾವು ಹೋಗಬೇಕಾದ ಆ ಸೀಮೆ ಎಂಥದೆಂದು ಆಲೋಚಿಸಿರಿ; ಅಲ್ಲಿ ಹೋಗಿದ್ದ ನಮ್ಮ ಸಹೋದರರು ನಮಗೆ, ‘ಆ ದೇಶದ ಜನರು ನಮಗಿಂತ ಬಲಿಷ್ಠರಾಗಿಯೂ ಮತ್ತು ಎತ್ತರವಾಗಿಯೂ ಇದ್ದಾರೆ. ಅವರಿರುವ ಪಟ್ಟಣಗಳು ದೊಡ್ಡದಾಗಿಯೂ ಮತ್ತು ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳಿಂದ ಇವೆ. ಅಲ್ಲಿ ನಾವು ಎತ್ತರವಾದ ಪುರುಷರನ್ನು ಅಂದರೆ ಅನಾಕೀಮ್ ವಂಶಸ್ಥರ ಮಕ್ಕಳನ್ನು ನೋಡಿದ್ದೇವೆ’ ಎಂದು ಹೇಳಿ ನಮ್ಮ ಧೈರ್ಯವನ್ನು ಕೆಡಿಸಿದ್ದಾರೆ” ಅಂದುಕೊಳ್ಳುತ್ತಿದ್ದಿರಿ.

¶ ಮತ್ತೊಂದು ಸಾರಿ ಗತ್ ಊರಿನಲ್ಲಿ ಯುದ್ಧನಡೆಯಿತು. ಅಲ್ಲಿ ಒಬ್ಬ ಎತ್ತರವಾದ ಪುರುಷನಿದ್ದನು ಅವನ ಕೈಕಾಲುಗಳಿಗೆ ಆರಾರು ಬೆರಳುಗಳಿದ್ದವು. ಅವನೂ ರೆಫಾಯನು.

ಬೆಟ್ಟದ ಸೀಮೆಯೇ, ನಾನು ನಿನ್ನಲ್ಲಿ ಜನ ಸಂಚಾರವನ್ನು ಉಂಟುಮಾಡುವೆನು; ನನ್ನ ಜನರಾದ ಇಸ್ರಾಯೇಲರೇ, ನಿನ್ನಲ್ಲಿ ಸಂಚರಿಸುತ್ತಾ ನಿನ್ನನ್ನು ಸ್ವತ್ತಾಗಿ ಅನುಭವಿಸುವರು; ನೀನು ಇನ್ನು ಅವರಿಗೆ ಪುತ್ರ ಶೋಕವನ್ನು ಕೊಡುವುದಿಲ್ಲ.’”

ಆಹಾ, ಅವರಿಗೆ ಎದುರಾಗಿ ನಿಂತ ಅಮೋರಿಯರನ್ನು ನಾನೇ ಧ್ವಂಸಮಾಡಿದೆನು, ಆ ಶತ್ರುವು ದೇವದಾರು ಮರದಷ್ಟು ಎತ್ತರವಾಗಿ, ಅಲ್ಲೋನ್ ಮರದ ಹಾಗೆ ಬಲಿಷ್ಠವಾಗಿಯೂ ಇದ್ದರು. ಆದರೂ ಮರದ ಮೇಲಿನ ಅದರ ಫಲವನ್ನು, ಕೆಳಗೆ ಅದರ ಬುಡವನ್ನು ನಾಶಪಡಿಸಿದೆನು.

¶ ‹“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ.›