TSK

TSK · ಅರಣ್ಯಕಾಂಡ 15:5

مراجع Treasury of Scripture Knowledge في ಕನ್ನಡ IRV.

العودة إلى المقطع

ಒಂದೂವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನೂ ಮೂರು ಸೇರು ಗೋದಿಹಿಟ್ಟನ್ನೂ ಬೆರಸಿ ಧಾನ್ಯಸಮರ್ಪಣೆಗಾಗಿ ಆ ಮೊದಲನೆಯ ಕುರಿಯ ಸಂಗಡ ಅರ್ಪಿಸಬೇಕು. ಪಾನದ್ರವ್ಯಾರ್ಪಣೆಗಾಗಿ ಒಂದು ಪಾವು ದ್ರಾಕ್ಷಾರಸವನ್ನು ಅದರೊಂದಿಗೆ ಅರ್ಪಿಸಬೇಕು.

ಒಂದು ಕುರಿಮರಿಯೊಂದಿಗೆ ಪರಿಶುದ್ಧ ಸ್ಥಳದಲ್ಲಿ ಒಂದುವರೆ ಸೇರು ಅಮಲೇರುವ ದ್ರಾಕ್ಷಾರಸದ ಪಾನದ್ರವ್ಯ ಅರ್ಪಣೆಗಾಗಿ, ಯೆಹೋವನಿಗೋಸ್ಕರ ಹೊಯ್ದುಬಿಡಬೇಕು.

ಅದು ಅವುಗಳಿಗೆ, ‘ನಾನು ನನ್ನ ರಸದಿಂದ ದೇವತೆಗಳಿಗೂ ಮನುಷ್ಯರಿಗೂ ಆನಂದಕೊಡುವುದನ್ನು ಬಿಟ್ಟು ಮರಗಳ ಮೇಲೆ ಓಲಾಡುವುದಕ್ಕೆ ಬರಬೇಕೋ?’ ಎಂದಿತು.

ನೀನು ಈ ಹಣದಿಂದ ಹೋರಿ, ಟಗರು, ಕುರಿ ಇವುಗಳನ್ನೂ ಮತ್ತು ಇವುಗಳೊಡನೆ ಸಮರ್ಪಣೆಯಾಗತಕ್ಕ ಧಾನ್ಯದ್ರವ್ಯ, ಪಾನದ್ರವ್ಯಗಳನ್ನೂ ಕೊಂಡುಕೊಂಡು ಅವುಗಳನ್ನು ಯೆರೂಸಲೇಮಿನಲ್ಲಿರುವ ನಿಮ್ಮ ದೇವರ ಆಲಯದ ಯಜ್ಞವೇದಿಯ ಮೇಲೆ ಸಮರ್ಪಿಸಬೇಕು.

ನನ್ನನ್ನು ನಿನ್ನಡೆಗೆ ಸೆಳೆದುಕೋ; ನಿನ್ನ ಹಿಂದೆ ಓಡಿ ಬರುವೆನು; ರಾಜನು ನನ್ನನ್ನು ಅಂತಃಪುರಕ್ಕೆ ಬರಮಾಡಿದ್ದಾನೆ; ನಿನ್ನಲ್ಲಿ ಹರ್ಷಿಸಿ ಉಲ್ಲಾಸಿಸುವೆವು, ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತಲೂ ಉತ್ತಮವಾದುದು; ಸ್ತ್ರೀಯರು ನಿನ್ನನ್ನು ಯಥಾರ್ಥವಾಗಿ ಪ್ರೀತಿಸುವರು.

‹ಇದು ಬಹು ಜನರ ಪಾಪಗಳ ಕ್ಷಮಾಪಣೆಗಾಗಿ ಸುರಿಸಲ್ಪಡುವ ಹೊಸ ›‹ಒಡಂಬಡಿಕೆಯ ರಕ್ತ.›

ಯಾಕೆಂದರೆ ನಾನಂತೂ ಈಗಲೇ ಪಾನದ್ರವ್ಯವಾಗಿ ಅರ್ಪಿತನಾಗುತ್ತಾ ಇದ್ದೇನೆ. ನನ್ನ ನಿರ್ಗಮನದ ಸಮಯವು ಸಮೀಪವಾಗುತ್ತಾ ಬಂದಿದೆ.