TSK

TSK · ಅರಣ್ಯಕಾಂಡ 16:22

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಆಗ ಅಬ್ರಹಾಮನು ಹತ್ತಿರಕ್ಕೆ ಬಂದು, “ನೀನು ದುಷ್ಟರ ಸಂಗಡ ನೀತಿವಂತರನ್ನೂ ನಾಶಮಾಡುವಿಯಾ?

¶ ಅಬ್ರಹಾಮನು, “ಕರ್ತನೇ, ಸಿಟ್ಟಾಗಬಾರದು; ಇನ್ನು ಒಂದೇ ಸಾರಿ ಮಾತನಾಡುತ್ತೇನೆ; ಒಂದು ವೇಳೆ ಹತ್ತು ಮಂದಿ ಸಿಕ್ಕಾರು” ಎನ್ನಲು ಆತನು, “ಹತ್ತು ಮಂದಿಯ ನಿಮಿತ್ತವೂ ಅದನ್ನು ಉಳಿಸುವೆನು, ನಾಶ ಮಾಡುವುದಿಲ್ಲ.” ಎಂದನು.

¶ ಆಗ ಮೋಶೆ ಮತ್ತು ಆರೋನರು ಇಸ್ರಾಯೇಲರ ಸರ್ವಸಮೂಹದವರ ಮುಂದೆ ಅಡ್ಡಬಿದ್ದರು.

“ನೀವಿಬ್ಬರೂ ಸಮೂಹದವರಲ್ಲಿ ಇರದೆ ಬೇರೆ ನಿಲ್ಲಬೇಕು. ನಾನು ಒಂದು ಕ್ಷಣಮಾತ್ರದಲ್ಲಿ ಅವರನ್ನು ದಹಿಸಿಬಿಡುತ್ತೇನೆ” ಎಂದು ಹೇಳಿದನು. ಆಗ ಮೋಶೆ ಮತ್ತು ಆರೋನರು ಬೋರಲುಬಿದ್ದರು.

¶ ಯೆಹೂದ ಕುಲದವನೂ ಜೆರಹನ ಗೋತ್ರದವನೂ, ಜಬ್ದೀಯ ಕುಟುಂಬದವನೂ, ಕರ್ಮೀಯ ಮಗನೂ ಆದ ಆಕಾನನು ಯೆಹೋವನಿಗೆ ಮೀಸಲಾಗಿಟ್ಟ ವಸ್ತುಗಳಲ್ಲಿ ಕೆಲವನ್ನು ಕದ್ದುಕೊಂಡದ್ದರಿಂದ ಇಸ್ರಾಯೇಲ್ಯರೆಲ್ಲರು ದ್ರೋಹಿಗಳಾದರು. ಯೆಹೋವನ ಕೋಪವು ಅವರ ಮೇಲೆ ಹೆಚ್ಚಾಯಿತು.

¶ ಯೆಹೋವನು ಪುನಃ ಇಸ್ರಾಯೇಲರ ಮೇಲೆ ಕೋಪಗೊಂಡು ದಾವೀದನನ್ನು ಇಸ್ರಾಯೇಲ್ ಮತ್ತು ಯೆಹೂದ ಕುಲಗಳವರ ಜನಗಣತಿ ಮಾಡುವುದಕ್ಕೆ ಪ್ರೇರೇಪಿಸಿದನು.

ಪ್ರತಿ ಪ್ರಾಣಿಯ ಪ್ರಾಣವು, ಸಮಸ್ತ ಮನುಷ್ಯರ ಆತ್ಮಗಳೂ ಯೆಹೋವನ ಕೈಯಲ್ಲಿರುವವು.

ಮಣ್ಣು ಭೂಮಿಗೆ ಸೇರಿ ಇದ್ದ ಹಾಗಾಗುವುದು, ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು. ಇಷ್ಟರೊಳಗಾಗಿ ನಿನ್ನ ಸೃಷ್ಟಿ ಕರ್ತನನ್ನು ಸ್ಮರಿಸದಿರಬೇಡ.

“ಇಗೋ, ನಾನು ಯೆಹೋವನು, ನರಪ್ರಾಣಿಗೆಲ್ಲಾ ದೇವರು; ನನಗೆ ಅಸಾಧ್ಯವಾದದ್ದುಂಟೋ?

¶ ಹೀಗಿರಲಾಗಿ ಆದಾಮನ ಒಂದೇ ಅಪರಾಧದ ಮೂಲಕ ಎಲ್ಲಾ ಮನುಷ್ಯರಿಗೆ ಮರಣವೆಂಬ ನಿರ್ಣಯವು ಹೇಗೆ ಉಂಟಾಯಿತೋ ಹಾಗೆಯೇ ಕ್ರಿಸ್ತನ ಒಂದೇ ಸತ್ಕಾರ್ಯದಿಂದ ಎಲ್ಲಾ ಮನುಷ್ಯರಿಗೆ ನೀತಿವಂತರೆಂಬ ನಿರ್ಣಯವು ಉಂಟಾಗಿ ಜೀವವು ಫಲಿಸಿತು.

ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದ ಲೌಕಿಕ ತಂದೆಗಳನ್ನು ನಾವು ಸನ್ಮಾನಿಸಿತ್ತೇವಲ್ಲ. ನಮ್ಮ ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಹೆಚ್ಚಾಗಿ ಅಧೀನರಾಗಿ ಜೀವಿಸಬೇಕಲ್ಲವೇ?