TSK

TSK · ಅರಣ್ಯಕಾಂಡ 18:8

مراجع Treasury of Scripture Knowledge في ಕನ್ನಡ IRV.

العودة إلى المقطع

ಅದಲ್ಲದೆ ನೀನು ಯಜ್ಞವೇದಿಯ ಮೇಲಿರುವ ರಕ್ತದಲ್ಲಿಯೂ, ಅಭಿಷೇಕ ತೈಲದಲ್ಲಿಯೂ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಮತ್ತು ಅವನ ವಸ್ತ್ರಗಳ ಮೇಲೆಯೂ ಅವನ ಮಕ್ಕಳ ಮತ್ತು ಅವರ ವಸ್ತ್ರಗಳ ಮೇಲೆಯೂ ಚಿಮುಕಿಸಬೇಕು. ಹೀಗೆ ಅವನೂ ಮತ್ತು ಅವನ ಮಕ್ಕಳೂ ಅವರ ವಸ್ತ್ರಗಳ ಸಹಿತವಾಗಿ ಪರಿಶುದ್ಧರಾಗುವರು.

¶ ಆರೋನನ ಪವಿತ್ರವಾದ ಯಾಜಕದೀಕ್ಷಾವಸ್ತ್ರಗಳು ಅವನ ತರುವಾಯ ಅವನ ವಂಶಸ್ಥರಿಗೂ ಉಪಯೋಗವಾಗಬೇಕು. ಅವರು ಅದರಲ್ಲಿಯೇ ನನಗಾಗಿ ಅಭಿಷೇಕಿಸಿ ಪ್ರತಿಷ್ಠಿಸಬೇಕು.

ಅವರಿಗೆ ಅಂಗಿಗಳನ್ನು ತೊಡಿಸಿ ಅವರು ನನಗೋಸ್ಕರ ಯಾಜಕರಾಗುವುದಕ್ಕಾಗಿ ನೀನು ಅವರ ತಂದೆಯನ್ನು ಅಭಿಷೇಕಿಸಿದಂತೆಯೇ ಅವರನ್ನೂ ಅಭಿಷೇಕಿಸಬೇಕು. ಈ ಅಭಿಷೇಕದಿಂದ ಯಾಜಕತ್ವವು ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾಗಿರುವುದು” ಎಂದು ಹೇಳಿದನು.

ಆರೋನನ ವಂಶದವರಾದ ಗಂಡಸರೆಲ್ಲರೂ ಅದನ್ನು ತಿನ್ನಬಹುದು. ಯೆಹೋವನಿಗೆ ಹೋಮವಾಗಿ ಅರ್ಪಿತವಾದ ದ್ರವ್ಯಗಳಲ್ಲಿ ಅದು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಸಲ್ಲತಕ್ಕದ್ದೆಂಬುದು ಶಾಶ್ವತನಿಯಮ. ಆ ದ್ರವ್ಯಗಳಿಗೆ ತಗಲಿದ್ದೆಲ್ಲಾ ಪರಿಶುದ್ಧವಾಗುವುದು’” ಎಂದು ಹೇಳಿದನು.

ಅದನ್ನು ಸಮರ್ಪಿಸುವ ಯಾಜಕನು ಅದರ ಮಾಂಸವನ್ನು ಊಟಮಾಡಬೇಕು. ಪವಿತ್ರಸ್ಥಳದೊಳಗೆ ಅಂದರೆ ದೇವದರ್ಶನದ ಗುಡಾರದ ಅಂಗಳದಲ್ಲಿ ಅದನ್ನು ಊಟಮಾಡಬೇಕು.

ಸಮರ್ಪಿಸಿದ ಪ್ರತಿಯೊಂದು ವಿಧವಾದ ಯಜ್ಞದ ಪದಾರ್ಥಗಳಲ್ಲಿಯೂ ಒಂದೊಂದನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಬೇಕು. ಅವು ಯಜ್ಞವೇದಿಗೆ ಯಜ್ಞಪಶುವಿನ ರಕ್ತವನ್ನು ಎರಚಿದ ಯಾಜಕನಿಗೆ ಅರ್ಪಿಸಬೇಕು.

ಯೆಹೋವನಿಗೆ ಹೋಮರೂಪವಾಗಿ ಅರ್ಪಿತವಾದ ದ್ರವ್ಯಗಳಲ್ಲಿ ಇವೇ ಆರೋನನಿಗೂ ಅವನ ವಂಶದವರಿಗೂ ಶಾಶ್ವತವಾಗಿ ಸಲ್ಲತಕ್ಕ ಭಾಗಗಳಾಗಿರುವವು. ಮೋಶೆ ಅವರನ್ನು ಯೆಹೋವನ ಸನ್ನಿಧಿಯಲ್ಲಿ ಯಾಜಕೋದ್ಯೋಗಕ್ಕಾಗಿ ಪ್ರತಿಷ್ಠಿಸಿದ ದಿನದಲ್ಲೇ ಇದು ನೇಮಕವಾಯಿತು.

ನೀವು ನೈವೇದ್ಯ ಮಾಡಿದ ಎದೆಯ ಭಾಗವನ್ನು, ಯಾಜಕರಿಗೋಸ್ಕರ ಪ್ರತ್ಯೇಕಿಸಿದ ತೊಡೆಯನ್ನು ಯಾವುದಾದರೂ ಒಂದು ಶುದ್ಧಸ್ಥಳದಲ್ಲಿ ಊಟಮಾಡಬಹುದು. ನೀನೂ, ನಿನ್ನ ಗಂಡುಮಕ್ಕಳೂ ಹಾಗು ಹೆಣ್ಣುಮಕ್ಕಳೂ ಅದನ್ನು ತಿನ್ನಬಹುದು. ಏಕೆಂದರೆ ಇಸ್ರಾಯೇಲರು ಸಮರ್ಪಿಸುವ ಸಮಾಧಾನಯಜ್ಞದ್ರವ್ಯಗಳಲ್ಲಿ ಇವೇ ನಿನಗೂ ಮತ್ತು ನಿನ್ನ ಮಕ್ಕಳಿಗೂ ಸಲ್ಲಬೇಕೆಂದು ನೇಮಕವಾಗಿದೆ.

ಯಾಜಕನು ಇವುಗಳನ್ನು, ಪ್ರಥಮಫಲದ ರೊಟ್ಟಿಗಳನ್ನು ಮತ್ತು ಎರಡು ಕುರಿಗಳನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು. ಅವು ಯೆಹೋವನಿಗೆ ಮೀಸಲಾಗಿ ಯಾಜಕನಿಗೆ ಸಲ್ಲಬೇಕು.

ಬೆಂಕಿಯಲ್ಲಿ ಹೋಮಮಾಡದೆ ಉಳಿದಿರುವ ಮಹಾ ಪರಿಶುದ್ಧ ವಸ್ತುಗಳು ನಿನಗೆ ಕಾಣಿಕೆಯಾಗಿ ಸಲ್ಲಬೇಕು. ಇಸ್ರಾಯೇಲರು ನನಗೆ ಸಮರ್ಪಿಸುವ ಎಲ್ಲಾ ಧಾನ್ಯದ್ರವ್ಯ, ದೋಷಪರಿಹಾರಕ ಯಜ್ಞ, ಪ್ರಾಯಶ್ಚಿತ್ತಯಜ್ಞ ಇವುಗಳಲ್ಲಿ ಹೋಮಶೇಷವು ಮಹಾಪರಿಶುದ್ಧವಾದುದರಿಂದ ನಿನಗೂ ನಿನ್ನ ಸಂತತಿಯವರಿಗೂ ಸಲ್ಲಬೇಕು.

ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ ಸರ್ವಾಂಗಹೋಮಗಳೇ ಮುಂತಾದ ಯಜ್ಞಪಶುಗಳನ್ನೂ, ಬೆಳೆಯ ದಶಮಾಂಶಗಳನ್ನೂ, ಯೆಹೋವನಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ, ಹರಕೆಮಾಡಿದ ವಿಶೇಷವಾದ ಕಾಣಿಕೆಗಳನ್ನೂ ಇವುಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳಕ್ಕೇ ತರಬೇಕು.

ಆಗ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ, “ನಾವು ಪ್ರತ್ಯೇಕಿಸಿದ ವಸ್ತುಗಳನ್ನು ಮನೆಯಿಂದ ತೆಗೆದುಕೊಂಡು ಬಂದಿದ್ದೇವೆ. ನೀನು ಆಜ್ಞಾಪಿಸಿದ ಮೇರೆಗೆ ಅವುಗಳನ್ನು ಲೇವಿಯರು, ಪರದೇಶಿಗಳು, ಅನಾಥರು, ವಿಧವೆಯರು ಇಂಥವರಿಗೆ ಕೊಟ್ಟಿದ್ದೇವೆ ನಿನ್ನ ಆಜ್ಞೆಗಳಲ್ಲಿ ಒಂದನ್ನೂ ಮೀರಲಿಲ್ಲ ಮತ್ತು ಮರೆಯಲೂ ಇಲ್ಲ.

ಈ ರಾಜಾಜ್ಞೆಯು ಪ್ರಕಟವಾದ ಕೂಡಲೆ ಇಸ್ರಾಯೇಲರು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು ಮುಂತಾದ ಎಲ್ಲಾ ಹುಟ್ಟುವಳಿಗಳಲ್ಲಿಯೂ ಪ್ರಥಮಫಲವನ್ನು ರಾಶಿರಾಶಿಯಾಗಿ ತಂದುಕೊಟ್ಟರು ಮತ್ತು ತಮ್ಮ ಎಲ್ಲಾ ಆದಾಯದ ದಶಮಾಂಶವನ್ನೂ ಉದಾರವಾಗಿ ಸಲ್ಲಿಸಿದರು.

ನೀನು ನೀತಿಯನ್ನು ಪ್ರೀತಿಸಿದ್ದೀ ಮತ್ತು ಅನ್ಯಾಯವನ್ನು ದ್ವೇಷಿಸಿದ್ದೀ. ಆದುದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ ಅಧಿಕವಾಗಿ ಪರಮಾನಂದ ತೈಲದಿಂದ ಅಭಿಷೇಕಿಸಿದ್ದಾನೆ” ಎಂದು ಹೇಳಿದ್ದಾನೆ.

ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದ ಯಾರೂ ನಿಮಗೆ ಬೋಧನೆ ಮಾಡುವುದು ಅಗತ್ಯವಿಲ್ಲ. ಆತನು ನಿಮಗೆ ಮಾಡಿರುವ ಅಭಿಷೇಕವೇ ನಿಮ್ಮನ್ನು ಎಲ್ಲಾ ವಿಷಯಗಳಲ್ಲಿ ಬೋಧನೆ ಮಾಡುವಂಥದ್ದಾಗಿದೆ ಅದು ಸುಳ್ಳಲ್ಲ ಸತ್ಯವಾಗಿದೆ. ಅದು ನಿಮಗೆ ಬೋಧನೆ ಮಾಡಿದ ಪ್ರಕಾರವೇ ಆತನಲ್ಲಿ ನೆಲೆಗೊಂಡಿರುವಿರಿ.