TSK

TSK · ಅರಣ್ಯಕಾಂಡ 19:9

مراجع Treasury of Scripture Knowledge في ಕನ್ನಡ IRV.

العودة إلى المقطع

ಅವನು ಎಷ್ಟು ದಿನಗಳವರೆಗೆ ತನ್ನನ್ನು ಪ್ರತಿಷ್ಠಿಸಿಕೊಂಡಿದ್ದಾನೋ, ಅಷ್ಟು ದಿನಗಳವರೆಗೆ ಹೊಸದಾಗಿ ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಳ್ಳಬೇಕು ಮತ್ತು ಪ್ರಾಯಶ್ಚಿತ್ತಯಜ್ಞವಾಗಿ ಒಂದು ವರ್ಷದ ಕುರಿಮರಿಯನ್ನು ಸಮರ್ಪಿಸಬೇಕು. ಮೊದಲು ಮಾಡಿದ್ದ ಹರಕೆಗೆ ವಿಘ್ನಪ್ರಾಪ್ತವಾದುದರಿಂದ ಕಳೆದುಹೋದ ದಿನಗಳು ವ್ಯರ್ಥವಾದುದೆಂದು ಪರಿಗಣಿಸಬೇಕು.

ಆದರೆ ಯಾವನಾದರೂ ಶುದ್ಧನಾಗದೆ, ಪ್ರಯಾಣಮಾಡದೆ ಇದ್ದು ಪಸ್ಕಹಬ್ಬವನ್ನು ಆಚರಿಸಲು ತಪ್ಪಿದರೆ ಅವನನ್ನು ಕುಲದಿಂದ ಹೊರಗೆ ಹಾಕಬೇಕು. ಅವನು ಯೆಹೋವನಿಂದ ನೇಮಿತವಾದ ಯಜ್ಞವನ್ನು ನೇಮಕವಾದ ಕಾಲದಲ್ಲಿ ಸಮರ್ಪಿಸದೆ ಹೋದುದರಿಂದ ತನ್ನ ದೋಷಫಲವನ್ನು ಅನುಭವಿಸಬೇಕು.

ಆಗ ಶುದ್ಧನಾದವನೊಬ್ಬನು ಆ ನೀರನ್ನು ಹಿಸ್ಸೋಪ್ ಗಿಡದ ಬರಲಿಂದ ಮನುಷ್ಯನು ಸತ್ತ ಆ ಡೇರೆಯ ಮೇಲೆಯೂ, ಅದರಲ್ಲಿದ್ದ ಸಾಮಾನುಗಳ ಮತ್ತು ಮನುಷ್ಯರ ಮೇಲೆಯೂ ಚಿಮಿಕಿಸಬೇಕು. ಹಾಗೆಯೇ ಎಲುಬಾಗಲಿ, ಹತವಾದವನ ಅಥವಾ ಬೇರೆ ಮನುಷ್ಯನ ಶವವಾಗಲಿ, ಸಮಾಧಿಯಾಗಲಿ ಯಾವನಿಗೆ ಸೋಂಕುವುದೋ ಅವನ ಮೇಲೆಯೂ ನೀರನ್ನು ಚಿಮಿಕಿಸಬೇಕು.

ಅವುಗಳನ್ನು ಹೊಲೆ ಹೋಗಲಾಡಿಸುವ ನೀರಿನಿಂದಲೂ ಶುದ್ಧಮಾಡಬೇಕು. ಬೆಂಕಿಯಿಂದ ಸುಡಲಾರದ ವಸ್ತುಗಳನ್ನು ನೀರಿನಿಂದ ತೊಳೆದು ಶುದ್ಧಮಾಡಬೇಕು.

ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತ ಯೇಸುವಿನಲ್ಲಿ ನಾವು ನೀತಿವಂತರಾಗಬೇಕೆಂದು ದೇವರು ಹೀಗೆ ಮಾಡಿದರು.

¶ ಇಂಥವನೇ ನಮಗೆ ಬೇಕಾಗಿರುವ ಮಹಾಯಾಜಕನು, ಈತನು ಪರಿಶುದ್ಧನೂ, ನಿರ್ದೋಷಿಯೂ, ನಿಷ್ಕಳಂಕನೂ, ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನು, ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು.