TSK

TSK · ಅರಣ್ಯಕಾಂಡ 2:18

مراجع Treasury of Scripture Knowledge في ಕನ್ನಡ IRV.

العودة إلى المقطع

ಮನಸ್ಸೆಯು ಚೊಚ್ಚಲ ಮಗನಾಗಿದ್ದರೂ, ಇಸ್ರಾಯೇಲನು ತನ್ನ ಕೈಗಳನ್ನು ಅಡ್ಡವಾಗಿ ಚಾಚಿ ಕಿರಿಯವನಾದ ಎಫ್ರಾಯೀಮನ ತಲೆಯ ಮೇಲೆ ಬಲಗೈಯನ್ನೂ, ಮನಸ್ಸೆಯ ತಲೆಯ ಮೇಲೆ ಎಡಗೈಯನ್ನೂ ಇಟ್ಟನು.

¶ ಯೋಸೇಫನಿಂದ ಹುಟ್ಟಿದವರೊಳಗೆ ಎಫ್ರಾಯೀಮ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.

ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು. ಅಮ್ಮೀಹೂದನ ಮಗನಾದ ಎಲೀಷಾಮನು ಸಮರ್ಪಿಸಿದ ಕಾಣಿಕೆಗಳು ಇವೇ.

ಯೋಸೇಫನ ಜ್ಯೇಷ್ಠಸಂತತಿಯವರು ಗೂಳಿಯೋಪಾದಿಯಲ್ಲಿ ಗಾಂಭೀರ್ಯವುಳ್ಳವರು. ಅವರ ಕೊಂಬುಗಳು ಕಾಡುಕೋಣದ ಕೊಂಬುಗಳಷ್ಟು (ಬಲವುಳ್ಳವು); ಅವುಗಳಿಂದ ಭೂಮಂಡಲದ ಜನಾಂಗಗಳನ್ನೆಲ್ಲಾ ಇರಿದು ಓಡಿಸುವರು. ಎಫ್ರಾಯೀಮ್ ಕುಲದ ಕೊಟ್ಯಾಂತರ ಜನರೂ ಮನಸ್ಸೆ ಕುಲದ ಲಕ್ಷಾಂತರ ಮಂದಿಯೂ ಇಂಥವರೇ” ಎಂದು ಹೇಳಿದನು.

ಇಸ್ರಾಯೇಲರನ್ನು ಕಾಯುವ ಕುರುಬನೇ, ಕಿವಿಗೊಡು; ಯೋಸೇಫನ ವಂಶದವರನ್ನು ಕುರಿಹಿಂಡಿನಂತೆ ಕರೆತಂದವನೇ, ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನೇ, ಪ್ರಕಾಶಿಸು.