TSK

TSK · ಅರಣ್ಯಕಾಂಡ 20:3

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಆದಕಾರಣ ಜನರು ಮೋಶೆಯ ಮೇಲೆ ಗುಣುಗುಟ್ಟುತ್ತಾ, “ನಮಗೆ ಕುಡಿಯುವುದಕ್ಕೆ ನೀರು ದೊರಕಿಸಿಕೊಡಬೇಕು” ಎಂದು ಗದ್ದಲವೆಬ್ಬಿಸಲು, ಮೋಶೆಯು ಅವರಿಗೆ, “ನನ್ನ ಸಂಗಡ ಏಕೆ ಜಗಳವಾಡುತ್ತೀರಿ? ಯೆಹೋವನನ್ನು ಏಕೆ ಪರೀಕ್ಷಿಸುತ್ತೀರಿ?” ಎಂದನು.

¶ ಆದರೆ ಮಾಂಸವು ಇನ್ನೂ ಅವರ ಹಲ್ಲುಗಳ ನಡುವೆ ಇದ್ದಾಗ ಅದನ್ನು ಅಗೆಯುವುದಕ್ಕಿಂತ ಮುಂಚೆ ಜನರ ಮೇಲೆ ಯೆಹೋವನ ಕೂಪವು ಉರಿದದ್ದರಿಂದ ಆತನು ಜನರನ್ನು ಘೋರವ್ಯಾಧಿಯಿಂದ ಸಾಯಿಸಿದನು.

¶ ಆ ದೇಶವನ್ನು ಸಂಚರಿಸಿ ನೋಡುವುದಕ್ಕೆ ಮೋಶೆಯಿಂದ ಕಳುಹಿಸಲ್ಪಟ್ಟ ಮನುಷ್ಯರು ಹಿಂದಿರುಗಿ ಬಂದು ಆ ದೇಶದ ವಿಷಯದಲ್ಲಿ ಅಶುಭ ಸಮಾಚಾರವನ್ನು ಹೇಳಿ ಸರ್ವಸಮೂಹದವರನ್ನು ಮೋಶೆಗೆ ವಿರುದ್ಧವಾಗಿ ಗುಣುಗುಟ್ಟುವಂತೆ ಮಾಡಿದರು.

ಮೋಶೆ ಈ ಮಾತುಗಳನ್ನು ಹೇಳಿ ಮುಗಿಸಿದ ಕೂಡಲೆ ಆ ಮನುಷ್ಯರ ಕೆಳಗಿದ್ದ ನೆಲವು ಸೀಳಿತು.

ಆ ರಾತ್ರಿಯು ನನ್ನ ತಾಯಿಯ ಗರ್ಭದ್ವಾರವನ್ನು ಮುಚ್ಚಿ, ನನ್ನ ಕಣ್ಣುಗಳಿಗೆ ಶ್ರಮೆಯನ್ನು ಮರೆಮಾಡಲಿಲ್ಲವಲ್ಲಾ.