TSK

TSK · ಅರಣ್ಯಕಾಂಡ 21:25

مراجع Treasury of Scripture Knowledge في ಕನ್ನಡ IRV.

العودة إلى المقطع

“ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್,

ಹೋರಿಯರು ಸಹ ಪೂರ್ವಕಾಲದಲ್ಲಿ ಸೇಯೀರಿನಲ್ಲಿ ವಾಸವಾಗಿದ್ದರು. ತರುವಾಯ ಇಸ್ರಾಯೇಲರು ತಮಗೆ ಯೆಹೋವನು ಕೊಟ್ಟ ದೇಶವನ್ನು ಹೇಗೆ ಸ್ವಾಧೀನಮಾಡಿಕೊಂಡರೋ ಹಾಗೆಯೇ ಏಸಾವ್ಯರು ಬಂದು ಹೋರಿಯರನ್ನು ಸಂಹರಿಸಿ ಅವರ ದೇಶದಲ್ಲಿ ವಾಸಮಾಡಿದರು.

ನಿನ್ನ ಕೊರಳು ದಂತದ ಗೋಪುರ, ನಿನ್ನ ನೇತ್ರಗಳು ಹೆಷ್ಬೋನಿನಲ್ಲಿನ ಬತ್ ರಬ್ಬೀಮ್ ಬಾಗಿಲ ಬಳಿಯ ಕೊಳಗಳಂತಿವೆ. ನಿನ್ನ ಮೂಗು ದಮಸ್ಕದ ಕಡೆಗಿರುವ ಲೆಬನೋನಿನ ಬುರುಜಿನಂತಿದೆ.

ಹೆಷ್ಬೋನಿನ ಭೂಮಿಯು, ಸಿಬ್ಮದ ದ್ರಾಕ್ಷಾಲತೆಯು ಒಣಗಿ ಹೋಗಿದೆ. ಯಜ್ಜೇರಿನವರೆಗೆ ವ್ಯಾಪಿಸಿ ಅರಣ್ಯದಲ್ಲಿ ಹಬ್ಬಿ, ಸಮುದ್ರದಾಚೆಗೆ ಸೇರುವಷ್ಟು ವಿಶಾಲವಾಗಿ ತನ್ನ ಶಾಖೆಗಳನ್ನು ಹರಡಿಕೊಂಡಿದ್ದ ಮೋವಾಬಿನ ರಾಜ ದ್ರಾಕ್ಷಿಗಳನ್ನು, ಜನಾಂಗಗಳ ಒಡೆಯರನ್ನು ತುಳಿದುಬಿಟ್ಟಿದ್ದಾನೆ.

ಹೆಷ್ಬೋನಿನಿಂದ ಎಲೆಯಾಲೆಯ ಮತ್ತು ಯಹಚಿನವರೆಗೆ ಜನರು ಅರಚಿಕೊಳ್ಳುತ್ತಾರೆ, ಚೋಯರಿನಿಂದ ಹೊರೊನಯಿಮಿನ ಮತ್ತು ಎಗ್ಲತ್ ಶೆಲಿಶೀಯದವರೆಗೆ ಕಿರಿಚಿಕೊಳ್ಳುತ್ತಾರೆ; ನಿಮ್ರೀಮ್ ಹಳ್ಳವೂ ಹಾಳಾಗಿದೆ.

ನಿನ್ನ ಉತ್ತರಕ್ಕೆ ತನ್ನ ಕುಮಾರ್ತೆಯರೊಂದಿಗೆ ವಾಸಿಸುವ ಸಮಾರ್ಯ ನಿನ್ನ ಅಕ್ಕ, ನಿನ್ನ ದಕ್ಷಿಣಕ್ಕೆ ನಿನ್ನ ಕುಮಾರ್ತೆಯರೊಂದಿಗೆ ವಾಸಿಸುವ ಸೊದೋಮ್ ನಿನ್ನ ತಂಗಿ.

¶ “ಸೊದೋಮ್ ಮತ್ತು ಆಕೆಯ ಕುಮಾರ್ತೆಯರು, ಸಮಾರ್ಯ ಮತ್ತು ಆಕೆಯ ಕುಮಾರ್ತೆಯರು, ಇವರ ದುರಾವಸ್ಥೆಯನ್ನು ನಾನು ತಪ್ಪಿಸುವೆನು, ಅದರೊಂದಿಗೆ ನಿನ್ನ ದುರಾವಸ್ಥೆಯನ್ನೂ ತಪ್ಪಿಸುವೆನು.