TSK

TSK · ಅರಣ್ಯಕಾಂಡ 21:33

مراجع Treasury of Scripture Knowledge في ಕನ್ನಡ IRV.

العودة إلى المقطع

ಯೆಹೋವನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನನ್ನೂ, ಅಷ್ಟಾರೋತ್, ಎದ್ರೈ ಎಂಬ ಪಟ್ಟಣಗಳಲ್ಲಿದ್ದ ಬಾಷಾನಿನ ಅರಸನಾದ ಓಗನನ್ನೂ ಜಯಿಸಿದ ತರುವಾಯವೇ ಮೋಶೆಯು ಇದನ್ನೆಲ್ಲಾ ತಿಳಿಸಿದನು.

¶ ತರುವಾಯ ನಾವು ಹಿಂದಿರುಗಿ ಬಾಷಾನಿನ ಮಾರ್ಗವನ್ನು ಹಿಡಿದು ಮೇಲಕ್ಕೆ ಹೋದಾಗ ಬಾಷಾನಿನ ಅರಸನಾದ ಓಗನು ತನ್ನ ಜನರೆಲ್ಲರ ಸಮೇತ ನಮಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೆ ಎದ್ರೈ ಊರಿಗೆ ಹೊರಟುಬಂದನು.

ನೀವು ಈ ಸ್ಥಳಕ್ಕೆ ಬಂದಾಗ ಹೆಷ್ಬೋನಿನ ಅರಸನಾದ ಸೀಹೋನನೂ, ಬಾಷಾನಿನ ಅರಸನಾದ ಓಗನೂ ನಮ್ಮೊಡನೆ ಯುದ್ಧಮಾಡುವುದಕ್ಕೆ ಬರಲಾಗಿ ನಾವು ಅವರನ್ನು ಸೋಲಿಸಿದೆವು.

ಹೆಷ್ಬೋನಿನ ಅರಸನಾದ ಸೀಹೋನ್, ಅಷ್ಟರೋತಿನಲ್ಲಿ ವಾಸವಾಗಿದ್ದ ಬಾಷಾನಿನ ಅರಸನಾದ ಓಗ್ ಎಂಬ ಈ ಇಬ್ಬರು ಅಮೋರಿಯರ ಅರಸರಿಗೆ ಯೆಹೋವನು ಮಾಡಿದ್ದೆಲ್ಲವನ್ನೂ ಕೇಳಿದ್ದಾರೆ.

ಅಷ್ಟರೋತ್ ಎದ್ರೈ ಎಂಬ ಊರುಗಳಲ್ಲಿ ಆಳುತ್ತಿದ್ದ ರೆಫಾಯರ ವಂಶಸ್ಥನಾದ ಓಗನ ರಾಜ್ಯವಾಗಿದ್ದ ಸಲ್ಕಾ ಪಟ್ಟಣದ ವರೆಗೆ ವಿಸ್ತರಿಸಿಕೊಂಡಿದ್ದ ಬಾಷಾನಿನ ಎಲ್ಲಾ ಪ್ರಾಂತ್ಯಗಳೂ. ಮೋಶೆ ಅವರನ್ನು ಗೆದ್ದು ಅವರ ದೇಶಗಳನ್ನು ಸ್ವಾಧೀನಮಾಡಿಕೊಂಡಿದ್ದನು.

ಬಹಳ ಗೂಳಿಗಳು ನನ್ನನ್ನು ಸುತ್ತಿಕೊಂಡಿವೆ; ಬಾಷಾನಿನ ಬಲವುಳ್ಳ ಹೋರಿಗಳು ನನ್ನನ್ನು ಮುತ್ತಿಕೊಂಡಿವೆ.

ದೇಶವು ಪ್ರಲಾಪಿಸಿ ಕುಗ್ಗುತ್ತದೆ, ಲೆಬನೋನ್ ನಾಚಿಕೊಂಡು ಒಣಗುತ್ತದೆ, ಶಾರೋನ್ ಬೆಂಗಾಡಾಗಿದೆ, ಬಾಷಾನ್ ಮತ್ತು ಕರ್ಮೆಲ್ ಎಲೆಗಳನ್ನು ಉದುರಿಸಿಬಿಟ್ಟಿವೆ.

ಟಗರುಗಳ, ಕುರಿಗಳ, ಹೋತಗಳ, ಹೋರಿಗಳ ಅಂತು ಬಾಷಾನಿನ ಕೊಬ್ಬಿದ ಪಶುಗಳ ರಕ್ತವನ್ನು ಕುಡಿಯುವಿರಿ. ನೀವು ಬಲಿಷ್ಠರ ಮತ್ತು ಭೂಪತಿಗಳ ಮಾಂಸವನ್ನು ತಿನ್ನುವಿರಿ.