ಬಾಮೋತಿನಿಂದ ಮೋವಾಬ್ಯರ ಬಯಲಿನಲ್ಲಿರುವ ತಗ್ಗಿನಿಂದ ಪಿಸ್ಗಾ ಎಂಬ ಬೆಟ್ಟದ ತುದಿಗೆ ಬಂದರು. ಅಲ್ಲಿಂದ ಯೆಷೀಮೋನ್ ಮರಳುಗಾಡು ಕಾಣಿಸುತ್ತದೆ.
TSK
TSK · ಅರಣ್ಯಕಾಂಡ 22:1
مراجع Treasury of Scripture Knowledge في ಕನ್ನಡ IRV.
ಮತ್ತು ಅವರು ಸೆರೆಯವರನ್ನೂ, ಪಶುಗಳನ್ನೂ, ಆಸ್ತಿಯನ್ನೂ ತೆಗೆದುಕೊಂಡು ಯೆರಿಕೋ ಪಟ್ಟಣದ ಎದುರಾಗಿ ಯೊರ್ದನ್ ನದಿಯ ತೀರದಲ್ಲಿ ಮೋವಾಬ್ಯರ ಮೈದಾನದಲ್ಲಿದ್ದ ಪಾಳೆಯಕ್ಕೆ ಮೋಶೆ, ಮಹಾಯಾಜಕನಾದ ಎಲ್ಲಾಜಾರ್ ಮತ್ತು ಇಸ್ರಾಯೇಲರ ಸರ್ವಸಮೂಹದವರ ಬಳಿಗೆ ಬಂದರು.
ಅಬಾರೀಮ್ ಬೆಟ್ಟಗಳಿಂದ ಹೊರಟು ಯೆರಿಕೋ ಪಟ್ಟಣದ ಹತ್ತಿರ ಯೊರ್ದನ್ ನದಿಯ ತೀರದಲ್ಲಿ ಮೋವಾಬ್ಯರ ಮೈದಾನದಲ್ಲಿ ಇಳಿದುಕೊಂಡರು.
ಎರಡುವರೆ ಗೋತ್ರಗಳು ತಮ್ಮ ಸ್ವತ್ತನ್ನು ಯೊರ್ದನ್ ನದಿಯ ಆಚೆ ಯೆರಿಕೋ ಪಟ್ಟಣದ ಪೂರ್ವದಿಕ್ಕಿನಲ್ಲಿ ಪಡೆದುಕೊಂಡಿದ್ದಾರೆ.”
ಯೊರ್ದನ್ ನದಿಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಯೆಹೋವನು ಮೋಶೆಯ ಮೂಲಕ ಇಸ್ರಾಯೇಲರಿಗೆ ಕೊಟ್ಟ ಆಜ್ಞಾವಿಧಿಗಳು ಇವೇ.
¶ ಆ ಕಾಲದಲ್ಲಿ ನಾವು ಅರ್ನೋನ್ ನದಿ ಮೊದಲುಗೊಂಡು ಹೆರ್ಮೋನ್ ಪರ್ವತದವರೆಗೂ, ಯೊರ್ದನ್ ನದಿಯ ಈಚೆ ಇರುವ ದೇಶವನ್ನೆಲ್ಲಾ ಅಮೋರಿಯರ ಇಬ್ಬರು ಅರಸರಿಂದ ತೆಗೆದುಕೊಂಡೆವು.
ಮೋವಾಬ್ಯರ ಮೈದಾನದಲ್ಲಿ ಇಸ್ರಾಯೇಲರು ಮೋಶೆಗೋಸ್ಕರ ಮೂವತ್ತು ದಿನಗಳ ವರೆಗೆ ದುಃಖಿಸಿದರು. ಅಲ್ಲಿಗೆ ಮೋಶೆಯ ಪ್ರಲಾಪದ ದಿನಗಳು ಮುಗಿದವು.