TSK

TSK · ಅರಣ್ಯಕಾಂಡ 23:19

مراجع Treasury of Scripture Knowledge في ಕನ್ನಡ IRV.

العودة إلى المقطع

ಇದು ಯೆಹೋವನೆಂಬ ನಾನೇ ಹೇಳಿದ ಮಾತು. ನನಗೆ ವಿರುದ್ಧವಾಗಿ ಸೇರಿರುವ ಈ ದುಷ್ಟ ಸಮೂಹದವರೆಲ್ಲರಿಗೆ ಈ ಮಾತಿನ ಪ್ರಕಾರವೇ ಮಾಡುತ್ತೇನೆ. ಈ ಅರಣ್ಯದಲ್ಲಿಯೇ ಇವರೆಲ್ಲರೂ ಸಾಯಬೇಕು’” ಎಂದು ಹೇಳಿದನು.

ಏಲಿಯ ಮನೆಯನ್ನು ಕುರಿತು ತಿಳಿಸಿದ್ದೆಲ್ಲವನ್ನೂ ಆ ದಿನದಲ್ಲಿ ತಪ್ಪದೆ ನೆರವೇರಿಸುವೆನು.

ಅವರು ನಿರ್ನಾಮವಾಗುವರು. ಅವರಲ್ಲಿ ಪಟ್ಟಣದೊಳಗೆ ಸಾಯುವಂಥವರನ್ನು ನಾಯಿಗಳೂ ಮತ್ತು ಅಡವಿಯಲ್ಲಿ ಸಾಯುವಂಥವರನ್ನು ಪಕ್ಷಿಗಳೂ ತಿಂದುಬಿಡುವವು ಎಂದು ಹೇಳುತ್ತಾನೆ’. ಇದು ಯೆಹೋವನಾದ ನನ್ನ ಮಾತು. ನೀನು ಎದ್ದು ನಿನ್ನ ಮನೆಗೆ ಹೋಗು.

“ನಿನ್ನ ಸಂತಾನದವರು ನಾಲ್ಕನೆಯ ತಲೆಮಾರಿನವರೆಗೂ ಇಸ್ರಾಯೇಲರ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು” ಎಂಬುದಾಗಿ ಯೆಹೋವನು ಯೇಹುವಿಗೆ ಮುಂತಿಳಿಸಿದ ಮಾತು ನೆರವೇರಿತು.

ದೇವರು ದಯೆ ತೋರಿಸಲಿಕ್ಕೆ ಮರೆತುಬಿಟ್ಟನೋ? ಕೋಪದಿಂದ ತನ್ನ ಕರಳುಗಳನ್ನು ಬಿಗಿಹಿಡಿದಿದ್ದಾನೋ?” ಎಂದು ಅಂದುಕೊಂಡೆನು ಸೆಲಾ

ಯೆಹೋವನು ದಾವೀದನಿಗೆ ಮಾಡಿದ ಪ್ರಮಾಣವು ಸ್ಥಿರವಾಗಿದೆ; ಆತನು ಅದನ್ನು ಬದಲಿಸುವುದಿಲ್ಲ. “ನಿನ್ನ ಸಂತಾನದವರನ್ನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು;

ಇದಕ್ಕಾಗಿ ಭೂಲೋಕವು ಪ್ರಲಾಪಿಸುವುದು, ಮೇಲೆ ಆಕಾಶವು ಕಪ್ಪಾಗುವುದು; ನಾನು ನುಡಿದಿದ್ದೇನೆ, ಪಶ್ಚಾತ್ತಾಪಪಡೆನು; ಇದರಿಂದ, ಹಿಂದೆಗೆಯನು” ಎಂದು ನುಡಿಯುತ್ತಾನೆ.

ನನ್ನ ಉಗ್ರಕೋಪವನ್ನು ತೀರಿಸೆನು, ಎಫ್ರಾಯೀಮನ್ನು ನಾಶಮಾಡಲು ತಿರಿಗಿಕೊಳ್ಳೆನು. ನಾನು ಮನುಷ್ಯನಲ್ಲ, ದೇವರೇ; ನಾನು ನಿಮ್ಮಲ್ಲಿ ನೆಲೆಯಾಗಿರುವ ಸದಮಲಸ್ವಾಮಿ, ನಾನು ನಿನ್ನ ಬಳಿಗೆ ರೋಷದಿಂದ ಬಾರೆನು.

ಸೂಕ್ತ ಹಾಗು ನಿಯಮಿತ ಕಾಲದಲ್ಲಿ ಆ ದರ್ಶನದಲ್ಲಿ ಕಂಡದ್ದು ನೆರವೇರುವುದು, ಅದರ ಅಂತಿಮ ಪರಿಣಾಮ ಶೀಘ್ರದಲ್ಲೇ ಗೊತ್ತಾಗುವುದು. ತಡವಾದರೂ ಅದಕ್ಕೆ ಕಾದಿರು; ಅದು ಖಂಡಿತವಾಗಿ ಕೈಗೂಡುವುದು.

‹ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ಮಾತುಗಳು ಅಳಿದುಹೋಗುವುದೇ ಇಲ್ಲ.›

ತಂದೆಯಾದ ದೇವರಿಂದ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನಿಂದ ನಿನಗೆ ಕೃಪೆ, ಕರುಣೆ ಮತ್ತು ಶಾಂತಿ ದೊರಕಲಿ.

ಎಲ್ಲಾ ಒಳ್ಳೆಯ ವರಗಳು ಮತ್ತು ಪರಿಪೂರ್ಣವಾದ ವರಗಳು ಮೇಲಿನಿಂದ ಬಂದವುಗಳೇ, ಅವು ಸಕಲ ವಿಧವಾದ ಬೆಳಕಿಗೆ ಮೂಲಕರ್ತನಾದ ದೇವರಿಂದ ಇಳಿದು ಬರುತ್ತವೆ; ಆತನು ನೆರಳಿನಂತೆ ಬದಲಾಗುವವನಲ್ಲ, ಚಂಚಲಚಿತ್ತನೂ ಅಲ್ಲ.