TSK

TSK · ಅರಣ್ಯಕಾಂಡ 23:5

مراجع Treasury of Scripture Knowledge في ಕನ್ನಡ IRV.

العودة إلى المقطع

ನೀನು ಅವನ ಸಂಗಡ ಮಾತನಾಡಿ ಹೇಳಬೇಕಾದ ಮಾತುಗಳನ್ನು ಅವನಿಗೆ ತಿಳಿಸಿಕೊಡು. ನಿನ್ನ ಬಾಯಿಗೂ ಅವನ ಬಾಯಿಗೂ ಸಹಾಯವಾಗಿದ್ದು ನೀವು ಮಾಡಬೇಕಾದದ್ದನ್ನು ಬೋಧಿಸುವೆನು.

ಯೆಹೋವನ ದೂತನು ಬಿಳಾಮನಿಗೆ, “ಈ ಮನುಷ್ಯರ ಜೊತೆಯಲ್ಲಿ ಹೋಗು. ಆದರೆ ನಾನು ನಿನಗೆ ಹೇಳುವ ಮಾತನ್ನೇ ಹೊರತು ಬೇರೆ ಯಾವುದನ್ನೂ ಹೇಳಬಾರದು” ಎಂದು ಹೇಳಿದನು. ಬಿಳಾಮನು ಬಾಲಾಕನ ಪ್ರಧಾನರ ಜೊತೆಯಲ್ಲಿ ಹೊರಟುಹೋದನು.

ಇವರ ಸ್ವದೇಶದವರಲ್ಲಿ ನಿನ್ನಂಥ ಪ್ರವಾದಿಯನ್ನು ಅವರಿಗೋಸ್ಕರ ಏರ್ಪಡಿಸುವೆನು; ಅವನ ಬಾಯಿಂದ ನನ್ನ ಮಾತುಗಳನ್ನು ನುಡಿಸುವೆನು; ನಾನು ಅವನಿಗೆ ಆಜ್ಞಾಪಿಸಿದ್ದನ್ನೆಲ್ಲಾ ಅವನು ಅವರಿಗೆ ತಿಳಿಸುವನು.

ಮನುಷ್ಯನು ತನ್ನ ಮನದಂತೆ ದಾರಿಯನ್ನು ಆರಿಸಿಕೊಂಡರೂ, ಯೆಹೋವನೇ ಅವನಿಗೆ ಗತಿಯನ್ನು ಏರ್ಪಡಿಸುವನು.

¶ ನಾನಂತೂ ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು, ನೋಡಿರಿ; “ನಿಮ್ಮಲ್ಲಿ ಪ್ರವೇಶಿಸಿರುವ ನನ್ನ ಆತ್ಮವೂ, ನಿಮ್ಮ ಬಾಯಿಗೆ ನಾನು ಕೊಟ್ಟಿರುವ ಮಾತುಗಳೂ, ನಿಮ್ಮ ಬಾಯಿಂದಾಗಲಿ, ನಿಮ್ಮ ಸಂತತಿಯ ಬಾಯಿಂದಾಗಲಿ ಅಥವಾ ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ ಇಂದಿನಿಂದ ಎಂದಿಗೂ ತೊಲಗುವುದಿಲ್ಲ” ಎಂದು ಯೆಹೋವನು ಹೇಳುತ್ತಾನೆ.

‹ಏಕೆಂದರೆ ನೀವು ಹೇಳತಕ್ಕದ್ದನ್ನು ಪವಿತ್ರಾತ್ಮನು ಆ ಗಳಿಗೆಯಲ್ಲಿಯೇ ನಿಮಗೆ ಕಲಿಸಿಕೊಡುವನು”› ಅಂದನು.