TSK

TSK · ಅರಣ್ಯಕಾಂಡ 26:28

مراجع Treasury of Scripture Knowledge في ಕನ್ನಡ IRV.

العودة إلى المقطع

ಎರಡನೆಯ ಮಗನು ಹುಟ್ಟಿದಾಗ, “ನನಗೆ ಸಂಕಟ ಬಂದ ದೇಶದಲ್ಲೇ ದೇವರು ಅಭಿವೃದ್ಧಿಯನ್ನು ದಯಪಾಲಿಸಿದ್ದಾನೆ” ಎಂದು ಹೇಳಿ ಆ ಮಗನಿಗೆ “ಎಫ್ರಾಯೀಮ್” ಎಂದು ಹೆಸರಿಟ್ಟನು.

¶ ಐಗುಪ್ತ ದೇಶಕ್ಕೆ ನಿನ್ನ ಬಳಿಗೆ ಬರುವುದಕ್ಕಿಂತ ಮೊದಲು ಇಲ್ಲಿ ಹುಟ್ಟಿದ ನಿನ್ನಿಬ್ಬರು ಮಕ್ಕಳು ನನಗೆ ಮಕ್ಕಳಾಗಿರಬೇಕು. ರೂಬೇನ್ ಸಿಮೆಯೋನರು ನನ್ನ ಮಕ್ಕಳಾಗಿರುವಂತೆಯೆ ಎಫ್ರಾಯೀಮ್ ಮನಸ್ಸೆಯರೂ ನನ್ನ ಮಕ್ಕಳಾಗಿರಲಿ.

¶ ಮನಸ್ಸೆ ಕುಲದ ಅರ್ಧಜನರು ಬಾಷಾನಿನಿಂದ ಬಾಳ್ ಹೆರ್ಮೋನ್, ಸೆನೀರ್, ಹೆರ್ಮೋನ್ ಗಿರಿ ಇವುಗಳ ವರೆಗೂ ವಿಸ್ತರಿಸಿಕೊಂಡಿರುವ ಪ್ರಾಂತ್ಯಗಳಲ್ಲಿ ವಾಸಿಸಿದರು.