TSK

TSK · ಅರಣ್ಯಕಾಂಡ 26:55

مراجع Treasury of Scripture Knowledge في ಕನ್ನಡ IRV.

العودة إلى المقطع

ನೀವು ಚೀಟುಹಾಕಿ ಆ ದೇಶವನ್ನು ನಿಮ್ಮನಿಮ್ಮ ಕುಟುಂಬಗಳಿಗೆ ಹಂಚಿಕೊಳ್ಳಬೇಕು. ಹೆಚ್ಚು ಮಂದಿಯುಳ್ಳ ಕುಟುಂಬಕ್ಕೆ ಹೆಚ್ಚಾಗಿಯೂ, ಕಡಿಮೆಯಾದ ಕುಟುಂಬಕ್ಕೆ ಕಡಿಮೆಯಾಗಿಯೂ ಸ್ವತ್ತು ದೊರಕಬೇಕು. ಒಂದೊಂದು ಕುಟುಂಬದ ಚೀಟು ಯಾವ ಯಾವ ಸ್ಥಳವನ್ನು ಸೂಚಿಸುವುದೋ ಆ ಸ್ಥಳದಲ್ಲಿಯೇ ಆ ಕುಟುಂಬದ ಸ್ವಾಸ್ತ್ಯವಿರಬೇಕು. ಒಂದೊಂದು ಕುಲದ ಕುಟುಂಬಗಳು ಒಂದೇ ಪ್ರದೇಶದಲ್ಲಿರಬೇಕು.

“ದೇಶವನ್ನು ಚೀಟುಹಾಕಿ ಇಸ್ರಾಯೇಲರಿಗೆ ಹಂಚಿಕೊಡಬೇಕೆಂದು ಯೆಹೋವನು ಒಡೆಯನಿಗೆ ಆಜ್ಞಾಪಿಸಿ ತರುವಾಯ ನಮ್ಮ ಸ್ವಕುಲದವನಾದ ಚಲ್ಪಹಾದನಿಗೆ ಬರತಕ್ಕ ಸ್ವತ್ತನ್ನು ಅವನ ಹೆಣ್ಣುಮಕ್ಕಳಿಗೆ ಕೊಡಬೇಕು ಎಂದು ಅಪ್ಪಣೆಮಾಡಿದನು.

ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದಂತೆ ಯೊರ್ದನಿನ ಪಶ್ಚಿಮದ ಕಾನಾನ ದೇಶವನ್ನು ಚೀಟು ಹಾಕಿ ಇಸ್ರಾಯೇಲರ ಒಂಭತ್ತುವರೆ ಕುಲದವರಿಗೆ ಸ್ವತ್ತಾಗಿ ಕೊಟ್ಟನು

ಅವರು ಪಟ್ಟಿಯಲ್ಲಿ ದೇಶವನ್ನು ಏಳು ಪಾಲು ಮಾಡಿ ನನ್ನ ಬಳಿಗೆ ತೆಗೆದುಕೊಂಡು ಬರಬೇಕು. ನಾನು ನಿಮಗೋಸ್ಕರ ನಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಚೀಟು ಹಾಕುವೆನು.

¶ ಚೀಟು ಎರಡನೆಯ ಸಾರಿ ಸಿಮೆಯೋನನ ಕುಲದವರಿಗೆ ಬಿದ್ದಿತು. ಸಿಮೆಯೋನನ ಕುಲದ ಗೋತ್ರಗಳ ಸ್ವತ್ತು ಯೆಹೂದ ಕುಲದವರ ಸ್ವತ್ತಿನ ಮಧ್ಯದಲ್ಲಿತ್ತು.

¶ ಚೀಟು ನಾಲ್ಕನೆಯ ಸಾರಿ ಇಸ್ಸಾಕಾರ್ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸಿಕ್ಕಿದ ಪಟ್ಟಣಗಳು ಯಾವುವೆಂದರೆ:

¶ ಚೀಟು ಆರನೆಯ ಸಾರಿ ನಫ್ತಾಲಿಯ ಕುಲದವರಿಗೆ ಬಿದ್ದಿತು. ಆ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ವತ್ತಿನ ಮೇರೆಯು

ಆನಂತರ ಅವರಿಗೋಸ್ಕರ ಚೀಟುಹಾಕಿದರು; ಚೀಟು ಮತ್ತೀಯನ ಪರವಾಗಿ ಬಿದ್ದುದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಸೇರಿಕೊಂಡನು.

ಮುದ್ರೆ ಒತ್ತಿಸಿಕೊಂಡವರ ಸಂಖ್ಯೆಯು ಪ್ರಸಿದ್ಧವಾದಾಗ ಅದನ್ನು ನಾನು ಕೇಳಿಸಿಕೊಂಡೆನು. ಇಸ್ರಾಯೇಲ್ಯರ ಪ್ರತಿಯೊಂದು ಕುಲಕ್ಕೆ ಸೇರಿದವರು ಮುದ್ರೆಯೊತ್ತಿಸಿಕೊಂಡವರ ಸಂಖ್ಯೆ ಒಂದು ಲಕ್ಷದ ನಲವತ್ತನಾಲ್ಕು ಸಾವಿರ.