TSK

TSK · ಅರಣ್ಯಕಾಂಡ 27:18

مراجع Treasury of Scripture Knowledge في ಕನ್ನಡ IRV.

العودة إلى المقطع

ಆಗ ಮೋಶೆಯು ಯೆಹೋಶುವನಿಗೆ, “ನೀನು ನಮ್ಮ ಜನರಲ್ಲಿ ಕೆಲವರನ್ನು ಆರಿಸಿಕೊಂಡು ಅಮಾಲೇಕ್ಯರೊಡನೆ ಯುದ್ಧಮಾಡಬೇಕು. ನಾನು ನಾಳೆ ದೇವರ ಕೋಲನ್ನು ಕೈಯಲ್ಲಿ ಹಿಡಿದುಕೊಂಡು ಗುಡ್ಡದ ಮೇಲೆ ನಿಂತುಕೊಳ್ಳುವೆನು” ಎಂದು ಹೇಳಿದನು.

ಯೆಹೋವನು ಆ ಮೇಘದಲ್ಲಿ ಇಳಿದು ಬಂದು ಅವನ ಸಂಗಡ ಮಾತನಾಡಿದನು. ಮೋಶೆಯ ಮೇಲಿರುವ ಆತ್ಮದಲ್ಲಿ ಸ್ವಲ್ಪವನ್ನು ಆ ಎಪ್ಪತ್ತು ಮಂದಿ ಹಿರಿಯರಿಗೂ ಪಾಲುಕೊಟ್ಟನು. ಆ ಆತ್ಮವು ಅವರಿಗೆ ದೊರಕಿದಾಗ ಅವರು ಪರವಶರಾಗಿ ಆ ಸಂದರ್ಭದಲ್ಲಿ ಮಾತ್ರ ಪ್ರವಾದಿಸಿದರು. ಆ ಮೇಲೆ ಅವರು ಎಂದಿಗೂ ಪ್ರವಾದಿಸಲೇ ಇಲ್ಲ.

¶ ದೇಶವನ್ನು ಸಂಚರಿಸಿ ನೋಡುವುದಕ್ಕೆ ಮೋಶೆ ಕಳುಹಿಸಿದ ಮನುಷ್ಯರ ಹೆಸರುಗಳು ಇವೇ. ಮೋಶೆ ನೂನನ ಮಗನಾದ ಹೋಶೇಯನಿಗೆ ಯೆಹೋಶುವನೆಂದು ಹೆಸರಿಟ್ಟನು.

¶ ಆ ಕಾಲದಲ್ಲಿ ನಾನು ಯೆಹೋಶುವನಿಗೆ, “ನಿಮ್ಮ ದೇವರಾದ ಯೆಹೋವನು ಆ ಇಬ್ಬರು ಅರಸರಿಗೆ ಮಾಡಿದ್ದನ್ನು ನೀನು ನೋಡೇ ಇದ್ದೀ. ನೀನು ನದಿ ದಾಟಿಹೋಗುವ ಎಲ್ಲಾ ರಾಜ್ಯಗಳನ್ನೂ ಆತನು ಹಾಗೆಯೇ ನಾಶಮಾಡುವನು.

¶ ಆಗ ಮೋಶೆ ಯೆಹೋಶುವನನ್ನು ಕರೆದು ಇಸ್ರಾಯೇಲರ ಮುಂದೆ ಅವನಿಗೆ, “ಯೆಹೋವನು ಇವರ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶಕ್ಕೆ ನೀನೇ ಇವರೊಡನೆ ಹೋಗಿ ಅದನ್ನು ಅವರಿಗೆ ಸ್ವಾಧೀನಪಡಿಸಬೇಕು. ಆದುದರಿಂದ ಶೂರನಾಗಿ ಧೈರ್ಯದಿಂದಿರು;

¶ ಆಗ ಯೆಹೋವನು ನೂನನ ಮಗನಾದ ಯೆಹೋಶುವನಿಗೆ, “ನಾನು ಇಸ್ರಾಯೇಲರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನೀನೇ ಅವರನ್ನು ಸೇರಿಸಬೇಕು; ಆದುದರಿಂದ ಶೂರನಾಗಿ ಧೈರ್ಯದಿಂದಿರು; ನಾನೇ ನಿನ್ನ ಸಂಗಡ ಇರುವೆನು” ಎಂದು ಆಜ್ಞಾಪಿಸಿದನು.

ನಾವು ಮೋಶೆಯ ಎಲ್ಲಾ ಮಾತುಗಳಿಗೆ ವಿಧೇಯರಾದ ಹಾಗೆ ನಿನ್ನ ಮಾತುಗಳಿಗೂ ವಿಧೇಯರಾಗುವೆವು. ನಿನ್ನ ದೇವರಾದ ಯೆಹೋವನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರಲಿ.

¶ ಆಗ ಯೆಹೋವನ ಆತ್ಮವು ಯೆಪ್ತಾಹನ ಮೇಲೆ ಬಂದಿತು. ಅವನು ಗಿಲ್ಯಾದ್ ಪ್ರಾಂತ್ಯ, ಮನಸ್ಸೆಯ ದೇಶ ಇವುಗಳಲ್ಲಿ ಸಂಚರಿಸಿ ತಿರುಗಿ ಗಿಲ್ಯಾದಿನ ಮಿಚ್ಪೆಗೆ ಬಂದು, ಅಲ್ಲಿಂದ ಅಮ್ಮೋನಿಯರ ಮೇಲೆ ಯುದ್ಧಕ್ಕೆ ಹೋದನು.

ಸೇವಕರಲ್ಲೊಬ್ಬನು ಅವನಿಗೆ, “ಬೇತ್ಲೆಹೇಮಿನವನಾದ ಇಷಯನ ಮಗನನ್ನು ನೋಡಿದ್ದೇನೆ; ಅವನು ಚೆನ್ನಾಗಿ ಕಿನ್ನರಿ ನುಡಿಸಬಲ್ಲವನೂ, ಪರಾಕ್ರಮಶಾಲಿಯೂ, ಯುದ್ಧ ನಿಪುಣನೂ, ವಾಕ್ಚತುರನೂ, ಸುಂದರನೂ, ಯೆಹೋವನ ಅನುಗ್ರಹವನ್ನು ಹೊಂದಿದವನೂ ಆಗಿದ್ದಾನೆ” ಎಂದು ತಿಳಿಸಿದನು.

ದೇವರುಗಳ ಆತ್ಮವು ನಿನ್ನಲ್ಲಿ ನೆಲಸಿ ಪರಮಜ್ಞಾನವೂ, ವಿವೇಕವೂ, ಬುದ್ಧಿಪ್ರಕಾಶವೂ ನಿನಗುಂಟೆಂದು ಕೇಳಿದ್ದೇನೆ.

ಆದುದರಿಂದ ಸಹೋದರರೇ, ಪವಿತ್ರಾತ್ಮಭರಿತರೂ, ಜ್ಞಾನಸಂಪನ್ನರೂ ಮತ್ತು ಒಳ್ಳೆಯ ಸಾಕ್ಷಿಯನ್ನುಳಿಸಿಕೊಂಡಿರುವ ಏಳು ಮಂದಿಯನ್ನು ನಿಮ್ಮೊಳಗಿಂದ ನೋಡಿ ಆರಿಸಿಕೊಳ್ಳಿರಿ. ಅವರನ್ನು ಈ ಕೆಲಸಕ್ಕಾಗಿ ನೇಮಿಸುವೆವು.

ಇವರು ಅಲ್ಲಿಗೆ ಬಂದು ಆ ಜನರಿಗೆ ಪವಿತ್ರಾತ್ಮವರವು ದೊರೆಯಬೇಕೆಂದು ಅವರಿಗೋಸ್ಕರ ಪ್ರಾರ್ಥನೆಮಾಡಿದರು.

ಪೌಲನು ಅವರ ಮೇಲೆ ಕೈಗಳನ್ನಿಡಲು ಪವಿತ್ರಾತ್ಮನು ಅವರ ಮೇಲೆ ಇಳಿದುಬಂದನು; ಅವರು ನಾನಾ ಭಾಷೆಗಳನ್ನಾಡಿದರು, ಪ್ರವಾದಿಸಿದರು.

ನಿನ್ನಲ್ಲಿರುವ ಕೃಪಾವರವನ್ನು ಅಲಕ್ಷ್ಯಮಾಡಬೇಡ, ಆ ವರವು ಸಭೆಯ ಹಿರಿಯರು ಪ್ರವಾದನೆಯ ಸಹಿತವಾಗಿ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ, ಅದು ನಿನಗೆ ಕೊಡಲ್ಪಟ್ಟಿತಲ್ಲಾ.