TSK

TSK · ಅರಣ್ಯಕಾಂಡ 27:20

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಮೋಶೆಯ ಶಿಷ್ಯನಾದ ನೂನನ ಮಗನಾದ ಯೆಹೋಶುವನು ಮೋಶೆಗೆ, “ಗುರುವೇ, ಅವರು ಪ್ರವಾದಿಸುವುದನ್ನು ನಿಲ್ಲಿಸಬೇಕು” ಎಂದು ಹೇಳಿದನು.

ನಾವು ಮೋಶೆಯ ಎಲ್ಲಾ ಮಾತುಗಳಿಗೆ ವಿಧೇಯರಾದ ಹಾಗೆ ನಿನ್ನ ಮಾತುಗಳಿಗೂ ವಿಧೇಯರಾಗುವೆವು. ನಿನ್ನ ದೇವರಾದ ಯೆಹೋವನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರಲಿ.

¶ ಸೌಲನು ಸಮುವೇಲನನ್ನು ಬಿಟ್ಟು ಹೊರಟ ಕೂಡಲೆ ದೇವರು ಅವನಿಗೆ ನೂತನ ಹೃದಯವನ್ನು ಕೊಟ್ಟನು. ಅದೇ ದಿನದಲ್ಲಿ ಆ ಎಲ್ಲಾ ಗುರುತುಗಳು ಸಂಭವಿಸಿದವು.

ದೂರದಲ್ಲಿ ನಿಂತಿದ್ದ ಯೆರಿಕೋವಿನ ಪ್ರವಾದಿ ಮಂಡಳಿಯವರು ಇದನ್ನು ಕಂಡು, “ಎಲೀಯನಿಗಿದ್ದ ಆತ್ಮವು ಎಲೀಷನ ಮೇಲೆ ಬಂದಿದೆ” ಎಂದು ತಿಳಿದುಕೊಂಡು ಅವನನ್ನು ಎದುರುಗೊಂಡು, ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು.

ಯೆಹೋವನು ಇಸ್ರಾಯೇಲರೆಲ್ಲರಿಗೆ ಗೊತ್ತಾಗುವಂತೆ ಸೊಲೊಮೋನನನ್ನು ಅಭಿವೃದ್ಧಿಪಡಿಸಿ ಅವನಿಗಿಂತ ಮೊದಲು ಇಸ್ರಾಯೇಲರನ್ನು ಆಳಿದ ಎಲ್ಲಾ ಅರಸರ ವೈಭವಕ್ಕಿಂತಲೂ ಹೆಚ್ಚಿನ ವೈಭವವನ್ನು ಅವನಿಗೆ ಅನುಗ್ರಹಿಸಿದನು.