¶ ಗುಡಾರಕ್ಕೆ ಬೇಕಾದ ಚೌಕಟ್ಟುಗಳನ್ನು ಜಾಲೀಮರದಿಂದ ಮಾಡಿಸಬೇಕು.
TSK
TSK · ಅರಣ್ಯಕಾಂಡ 3:36
مراجع Treasury of Scripture Knowledge في ಕನ್ನಡ IRV.
ಆ ಪರದೆ ತೂಗಿಸುವುದಕ್ಕಾಗಿ ಜಾಲೀಮರದಿಂದ ಐದು ಕಂಬಗಳನ್ನು ಮಾಡಿಸಿ ಚಿನ್ನದ ತಗಡುಗಳನ್ನು ಹೊದಿಸಬೇಕು. ಅವುಗಳ ಕೊಂಡಿಗಳನ್ನು ಚಿನ್ನದಿಂದ ಮಾಡಿಸಿ ಅವುಗಳಿಗಾಗಿ ಐದು ತಾಮ್ರದ ಗದ್ದಿಗೆ ಕಲ್ಲುಗಳನ್ನು ಮಾಡಿಸಬೇಕು.
ಅವರು ಮಾಡಬೇಕಾದವುಗಳು ಯಾವುವೆಂದರೆ; ದೇವದರ್ಶನದ ಗುಡಾರ, ಅದರ ಮೇಲ್ಹೊದಿಕೆಗಳು, ಕೊಂಡಿಗಳು, ಚೌಕಟ್ಟುಗಳು, ಅಗುಳಿಗಳು, ಕಂಬಗಳು, ಗದ್ದಿಗೆಕಲ್ಲುಗಳು,
¶ ಗುಡಾರಕ್ಕೆ ಜಾಲೀಮರದಿಂದ ನೆಟ್ಟಗೆ ನಿಂತಿರುವ ಹಲಗೆಗಳಿಂದ ಚೌಕಟ್ಟುಗಳನ್ನು ಮಾಡಿದರು.
ಕಂಬಗಳ ಗದ್ದಿಗೆಕಲ್ಲುಗಳು ತಾಮ್ರದವುಗಳು; ಕಂಬಗಳ ಕೊಂಡಿಗಳೂ, ಕಟ್ಟುಗಳೂ ಬೆಳ್ಳಿಯವು; ಅವುಗಳ ಬೋದಿಗೆಗಳು ಬೆಳ್ಳಿಯ ತಗಡುಗಳಿಂದ ಹೊದಿಸಲ್ಪಟ್ಟವು. ಅಂಗಳದ ಎಲ್ಲಾ ಕಂಬಗಳಿಗೂ ಬೆಳ್ಳಿಯ ಕಟ್ಟುಗಳಿದ್ದವು.
¶ “ನೀನು ಮೆರಾರೀಯರನ್ನು ಅವರ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಬೇಕು.
ಮೆರಾರೀ ಸಂತಾನದವರಿಗೆ ಅವರ ಕೆಲಸಕ್ಕೆ ತಕ್ಕ ಹಾಗೆ ನಾಲ್ಕು ಬಂಡಿಗಳನ್ನು ಮತ್ತು ನಾಲ್ಕು ಜೋಡಿ ಎತ್ತುಗಳನ್ನು ಮಹಾಯಾಜಕನಾದ ಆರೋನನ ಮಗನಾದ ಈತಾಮಾರನ ಕೈಗೆ ಒಪ್ಪಿಸಿದರು.