TSK

TSK · ಅರಣ್ಯಕಾಂಡ 3:47

مراجع Treasury of Scripture Knowledge في ಕನ್ನಡ IRV.

العودة إلى المقطع

ಲೆಕ್ಕಿತರಾದವರಲ್ಲಿ ಪ್ರತಿಯೊಬ್ಬನೂ ದೇವರ ಸೇವೆಗೆ ನೇಮಕವಾದ ಇಪ್ಪತ್ತು ಗೇರಾ ತೂಕದ ರೂಪಾಯಿಯ ಮೇರೆಗೆ ಅರ್ಧ ಶೆಕೆಲ್ ಕಾಣಿಕೆಯನ್ನು ಕೊಡಬೇಕು. ಈ ಅರ್ಧ ಶೆಕೆಲ್ ಯೆಹೋವನಿಗೆ ಪವಿತ್ರವಾದ ಕಾಣಿಕೆಯಾಗಿರುತ್ತದೆ.

ದೇವರ ಸೇವೆಯಲ್ಲಿ ನೇಮಕವಾದ ಎಲ್ಲಾ ತೂಕವು ದೇವಾಲಯದ ಶೆಕೆಲ್ ಮೇರೆಗೆ ಇರಬೇಕು. ಇಪ್ಪತ್ತು ಗೇರಾ ತೂಕವು ಒಂದು ಶೆಕೆಲಿಗೆ ಸಮವಾಗಿರಬೇಕೆಂದು ಯಾವಾಗಲೂ ನಿರ್ಣಯಿಸಬೇಕು.

ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ತಟ್ಟೆ. ಎಪ್ಪತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.

ತೊಲೆಯು ಇಪ್ಪತ್ತು ಗೇರಾ ತೂಕವಾಗಿರಬೇಕು; ನಿಮ್ಮಲ್ಲಿ ಸಲ್ಲುವ ಮಾನೆಯು ಇಪ್ಪತ್ತು, ಇಪ್ಪತ್ತೈದು ಅಥವಾ ಹದಿನೈದು ತೊಲಾ ತೂಕದ್ದಾಗಿರಲಿ.”