TSK

TSK · ಅರಣ್ಯಕಾಂಡ 3:9

مراجع Treasury of Scripture Knowledge في ಕನ್ನಡ IRV.

العودة إلى المقطع

ಇಸ್ರಾಯೇಲರಲ್ಲಿ ಇವರು ನನಗೆ ಸಂಪೂರ್ಣವಾಗಿ ಸಮರ್ಪಿತರಾದವರು. ಇಸ್ರಾಯೇಲರಲ್ಲಿ ಚೊಚ್ಚಲ ಮಕ್ಕಳಿಗೆ ಬದಲಾಗಿ ನಾನು ಲೇವಿಯರನ್ನು ನನ್ನ ಸ್ವಂತಕ್ಕಾಗಿ ತೆಗೆದುಕೊಂಡಿದ್ದೇನೆ.

ಇಸ್ರಾಯೇಲರಿಗಾಗಿ ದೇವದರ್ಶನ ಗುಡಾರದ ಸೇವಾಕಾರ್ಯವನ್ನು ನಡಿಸುವುದಕ್ಕೂ ದೋಷಪರಿಹಾರವನ್ನು ಮಾಡುವುದಕ್ಕೂ ಲೇವಿಯರನ್ನು ಆರೋನನ ಮತ್ತು ಅವನ ಮಕ್ಕಳ ವಶಕ್ಕೆ ಕೊಟ್ಟಿದ್ದೇನೆ. ಹೀಗಿರುವುದರಿಂದ ಇಸ್ರಾಯೇಲರು ದೇವಾಲಯದ ಹತ್ತಿರಕ್ಕೆ ಬಂದಾಗ ಅವರಿಗೆ ಅಪಾಯವು ಸಂಭವಿಸುವುದಿಲ್ಲ.”

ಇಗೋ, ನಾನು ಇಸ್ರಾಯೇಲರೊಳಗಿಂದ ನಿನ್ನ ಕುಲದವರಾದ ಲೇವಿಯರನ್ನು ಆರಿಸಿಕೊಂಡಿದ್ದೇನೆ. ಅವರು ಯೆಹೋವನಿಗೆ ಸಮರ್ಪಿಸಲ್ಪಟ್ಟ ಕಾಣಿಕೆಯಂತೆ ನಿನ್ನ ವಶದಲ್ಲಿಯೇ ಇದ್ದಾರೆ. ಅವರೇ ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಬೇಕು.

ಆ ಕಾಲದಲ್ಲಿ ದಾವೀದನು, “ಲೇವಿಯರ ಹೊರತಾಗಿ ಯಾರೂ ಮಂಜೂಷವನ್ನು ಹೊರಬಾರದು, ಅದನ್ನು ಹೊರುವುದಕ್ಕೂ, ಸದಾಕಾಲ ತನ್ನ ಸೇವೆಮಾಡುವುದಕ್ಕೂ ಯೆಹೋವನು ಅವರನ್ನೇ ಆರಿಸಿಕೊಂಡಿದ್ದಾನೆ” ಎಂದು ಹೇಳಿದನು.

ಆ ಮೇಲೆ ಯಾಜಕರ ಮತ್ತು ಲೇವಿಯರ ಆಯಾ ಮಾರ್ಗಗಳನ್ನು ಮೋಶೆಯ ಧರ್ಮಶಾಸ್ತ್ರ ನಿಯಮದ ಪ್ರಕಾರ ಯೆರೂಸಲೇಮಿನ ದೇವರ ಸೇವೆಗೆ ನೇಮಿಸಿದರು.

ಆದ್ದರಿಂದ ದೇವರವಾಕ್ಯದಲ್ಲಿ ಹೀಗೆ ಹೇಳಿದೆ, “ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ತಾನು ಸೆರೆಯಾಳುಗಳನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ವರಗಳನ್ನು ಕೊಟ್ಟನು.”