TSK

TSK · ಅರಣ್ಯಕಾಂಡ 31:6

مراجع Treasury of Scripture Knowledge في ಕನ್ನಡ IRV.

العودة إلى المقطع

¶ “ಆರೋನನ ವಂಶಸ್ಥರಾದ ಯಾಜಕರೇ ಆ ತುತ್ತೂರಿಗಳನ್ನು ಊದಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮವಾಗಿರಲಿ.

¶ ಆದರೂ ಅವರು ಹಟಮಾಡಿ ಆ ಬೆಟ್ಟವನ್ನು ಹತ್ತಿದರು. ಯೆಹೋವನ ಒಡಂಬಡಿಕೆಯ ಮಂಜೂಷವಾಗಲಿ ಮೋಶೆಯಾಗಲಿ ಪಾಳೆಯವನ್ನು ಬಿಟ್ಟು ಹೊರಡಲಿಲ್ಲ.

ರಿಮ್ಮೋನ್ ಪೆರೆಚಿನಿಂದ ಹೊರಟು ಲಿಬ್ನದಲ್ಲಿ ಇಳಿದುಕೊಂಡರು.

ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಮಂಜೂಷದ ಮುಂದೆ ನಡೆಯಲಿ. ಏಳನೆಯ ದಿನ ನೀವು ಪಟ್ಟಣವನ್ನು ಏಳು ಸಾರಿ ಸುತ್ತಬೇಕು; ಯಾಜಕರು ಕೊಂಬುಗಳನ್ನು ಊದಬೇಕು.

ಕೆರೂಬಿಗಳ ಮಧ್ಯದಲ್ಲಿ ಆಸೀನನಾಗಿರುವ ಸೇನಾಧೀಶ್ವರ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರಿಸಿದರು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿ, ಫೀನೆಹಾಸ್ ಎಂಬವರು ದೇವರ ಒಡಂಬಡಿಕೆಯ ಮಂಜೂಷದ ಸಂಗಡ ಇದ್ದರು.

ಅನಂತರ ಸೌಲನು ಅಹೀಯನಿಗೆ, “ಏಫೋದನ್ನು ತೆಗೆದುಕೊಂಡು ಬಾ” ಎಂದು ಆಜ್ಞಾಪಿಸಿದನು. ಆ ಕಾಲದಲ್ಲಿ ಇವನು ಇಸ್ರಾಯೇಲರೊಳಗೆ ಏಫೋದನ್ನು ಧರಿಸುತ್ತಿದ್ದನಷ್ಟೆ.

ಅದಕ್ಕೆ ಊರೀಯನು, “ಒಡಂಬಡಿಕೆಯ ಮಂಜೂಷವೂ, ಇಸ್ರಾಯೇಲ್ಯರೂ, ಯೆಹೂದ್ಯರೂ ಗುಡಾರಗಳಲ್ಲಿ ವಾಸವಾಗಿದ್ದಾರೆ. ನನ್ನ ಒಡೆಯನಾದ ಯೋವಾಬನೂ, ಅವನ ಸೇವಕರೂ ಬಯಲಿನಲ್ಲಿ ಪಾಳೆಯಮಾಡಿಕೊಂಡಿದ್ದಾರೆ. ಹೀಗಿರುವಾಗ ನಾನು ಮಾತ್ರ ನನ್ನ ಮನೆಗೆ ಹೋಗಿ ಊಟಮಾಡಿ, ಕುಡಿದು, ಹೆಂಡತಿಯೊಡನೆ ಮಲಗಿಕೊಳ್ಳುವುದು ಹೇಗೆ? ನಿನ್ನಾಣೆ, ನಿನ್ನ ಜೀವದ ಆಣೆ, ನಾನು ಇಂಥದ್ದನ್ನು ಮಾಡುವುದೇ ಇಲ್ಲ” ಎಂದು ಉತ್ತರಕೊಟ್ಟನು.

ಬುಕ್ಕೀಯನು ಅಬೀಷೂವನ ಮಗ; ಇವನು ಫೀನೆಹಾಸನ ಮಗ; ಇವನು ಎಲ್ಲಾಜಾರನ ಮಗ; ಇವನು ಪ್ರಧಾನಯಾಜಕನಾದ ಆರೋನನ ಮಗ.