TSK

TSK · ಅರಣ್ಯಕಾಂಡ 32:29

مراجع Treasury of Scripture Knowledge في ಕನ್ನಡ IRV.

العودة إلى المقطع

ನಾವಾದರೋ ಇಸ್ರಾಯೇಲರನ್ನು ಅವರವರ ಸ್ಥಳಗಳಿಗೆ ಸೇರಿಸುವವರೆಗೂ ಯುದ್ಧಕ್ಕೆ ಸನ್ನದ್ಧರಾಗಿ ಅವರ ಮುಂದೆ ನಡೆಯುವೆವು. ಅಷ್ಟರಲ್ಲಿ ನಮ್ಮ ಕುಟುಂಬಗಳವರು ಈ ದೇಶದ ನಿವಾಸಿಗಳ ಭಯದ ದೆಸೆಯಿಂದ ಕೋಟೆಕೋತ್ತಲುಗಳುಳ್ಳ ಊರುಗಳಲ್ಲಿ ವಾಸಿಸಲಿ.

ಉಳಿದ ಎರಡುವರೆ ಕುಲಗಳ ಜನರಿಗೆ ಯೊರ್ದನಿನ ಆಚೆಯಲ್ಲಿ ಮೋಶೆಯೇ ಸ್ವತ್ತನ್ನು ಕೊಟ್ಟಿದ್ದನು. ಲೇವಿಯರಿಗೆ ಮಾತ್ರ ಕೊಟ್ಟಿರಲಿಲ್ಲ.

ಆಗ ರೂಬೇನ್ಯರೂ ಗಾದ್ಯರೂ ಮನಸ್ಸೆ ಕುಲದ ಅರ್ಧ ಜನರೂ ಕಾನಾನ್ ದೇಶದ ಶೀಲೋವಿನಲ್ಲಿದ್ದ ಇಸ್ರಾಯೇಲರನ್ನು ಬಿಟ್ಟು ಯೆಹೋವನ ಆಜ್ಞೆಗನುಸಾರವಾಗಿ ಮೋಶೆಯಿಂದ ತಮಗೆ ಸಿಕ್ಕಿದ ಸ್ವತ್ತಾದ ಗಿಲ್ಯಾದ್ ದೇಶಕ್ಕೆ ಹೊರಟು ಹೋದರು.

¶ ಒಂದು ದಿನ ಸೌಲನು, ಇವನು ನನ್ನ ಕೈಯಿಂದಲ್ಲ ಫಿಲಿಷ್ಟಿಯರ ಕೈಯಿಂದ ಸಾಯಲಿ ಎಂದು ಆಲೋಚಿಸಿಕೊಂಡು ದಾವೀದನಿಗೆ, “ನನ್ನ ವೀರನಾಗಿ ಹೋಗಿ ಯೆಹೋವನ ಯುದ್ಧಗಳನ್ನು ನಡಿಸು. ನಾನು ನನ್ನ ಹಿರೀ ಮಗಳಾದ ಮೇರಬಳನ್ನು ನಿನಗೆ ಮದುವೆ ಮಾಡಿಕೊಡುತ್ತೇನೆ” ಅಂದನು.