TSK

TSK · ಅರಣ್ಯಕಾಂಡ 32:3

مراجع Treasury of Scripture Knowledge في ಕನ್ನಡ IRV.

العودة إلى المقطع

ಸೀಹೋನನ ಪಟ್ಟಣವಾದ ಹೆಷ್ಬೋನಿನಿಂದ ಅಗ್ನಿ ಜ್ವಾಲೆಹೊರಟು, ಮೋವಾಬ್ಯರ ರಾಜಧಾನಿಯಾದ ಆರ್ ಎಂಬ ಪಟ್ಟಣವನ್ನೂ ಅರ್ನೋನ್ ಬೆಟ್ಟದ ಮೇಲಿರುವ ಪ್ರಭುಗಳನ್ನು ದಹಿಸಿಬಿಟ್ಟಿತು.

ಅದಲ್ಲದೆ ಮೋಶೆ ಗೂಢಚಾರರ ಮೂಲಕ ಯಗ್ಜೇರನ್ನು ಪರೀಕ್ಷಿಸಿದ ಮೇಲೆ ಇಸ್ರಾಯೇಲರು ಅದರ ಗ್ರಾಮಗಳನ್ನು ವಶಪಡಿಸಿಕೊಂಡು, ಅಲ್ಲಿದ್ದ ಅಮೋರಿಯರನ್ನು ಹೊರಡಿಸಿಬಿಟ್ಟರು.

¶ ಗಾದ್ಯನ ಮಕ್ಕಳು ದೀಬೋನ್, ಅಟಾರೋತ್, ಅರೋಯೇರ್ ಊರುಗಳನ್ನು ಹೊಸದಾಗಿ ಕಟ್ಟಿಸಿದರು.

ಸಿಬ್ಮಾ ಎಂಬ ಊರುಗಳನ್ನೂ, ಬೇರೆ ಹೆಸರಿನಿಂದ ಉಚ್ಚರಿಸತಕ್ಕ ನೆಬೋ, ಬಾಳ್ಮೆಯೋನ್ ಎಂಬವುಗಳನ್ನೂ ಹೊಸದಾಗಿ ಕಟ್ಟಿ ಅವುಗಳಿಗೆ ಬೇರೆ ಹೆಸರುಗಳನ್ನು ಇಟ್ಟರು.

ಕಿರ್ಯಾತಯಿಮ್ ಸಿಬ್ಮಾ ಎಂಬ ಹೆಷ್ಬೋನಿನ ಉಪಗ್ರಾಮಗಳು, ಕಣಿವೆಯಲ್ಲಿರುವ ಬೆಟ್ಟದ ಮೇಲಿನ ಚೆರೆತ್ ಶಹರ್,

ಇಸ್ರಾಯೇಲರು ಮುನ್ನೂರು ವರ್ಷಗಳಿಂದ ಹೆಷ್ಬೋನ್, ಅರೋಯೇರ್ ಎಂಬ ಪಟ್ಟಣಗಳಲ್ಲಿಯೂ, ಅವುಗಳ ಗ್ರಾಮಗಳಲ್ಲಿಯೂ, ಅರ್ನೋನ್ ತೀರದ ಎಲ್ಲಾ ಪಟ್ಟಣಗಳಲ್ಲಿಯೂ ವಾಸಿಸುತ್ತಿದ್ದಾರಲ್ಲಾ. ಇಷ್ಟು ದಿನಗಳವರೆಗೆ ನೀನು ಅದನ್ನು ಬಿಡಿಸಿಕೊಳ್ಳದೆ ಇದ್ದದ್ದೇಕೆ?

ಬಯಿತ್ ಮತ್ತು ದೀಬೋನ್ ಊರಿನವರು ಆಳುವುದಕ್ಕಾಗಿ, ತಮ್ಮ ಎತ್ತರವಾದ ಪೂಜಾ ಸ್ಥಳಗಳಿಗೆ ಹೋಗುತ್ತಾರೆ. ನೆಬೋವಿನಲ್ಲಿಯೂ, ಮೇದೆಬದಲ್ಲಿಯೂ ಮೋವಾಬ್ಯರು ಗೋಳಾಡುತ್ತಾರೆ. ಎಲ್ಲರ ತಲೆಯು ಬೋಳಾಗಿರುವುದು, ಎಲ್ಲರ ಗಡ್ಡವು ವಿಕಾರವಾಗಿ ಕತ್ತರಿಸಲ್ಪಡುವುದು.

ನಿಮ್ರೀಮ್ ಹೊಳೆಯು ಹಾಳಾಯಿತು, ಹಸಿಹುಲ್ಲು ಬಾಡಿತು, ಮೇವು ತೀರಿತು, ಯಾವ ಹಸಿರೂ ಇಲ್ಲ.

¶ ಮೋವಾಬನನ್ನು ಕುರಿತು ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ಅಯ್ಯೋ ನೆಬೋ ಊರಿನ ಗತಿಯನ್ನು ಏನು ಹೇಳಲಿ! ಅದು ಹಾಳಾಯಿತು; ಕಿರ್ಯಾತಯಿಮು ಶತ್ರುವಿನ ಕೈಗೆ ಸಿಕ್ಕಿ ಮಾನಭಂಗ ಹೊಂದಿದೆ, ಮಿಸ್ಗಾಬ್ ಕೆಡವಲ್ಪಟ್ಟು ಅವಮಾನಕ್ಕೆ ಗುರಿಯಾಗಿದೆ.

ಹೆಷ್ಬೋನಿನಿಂದ ಎಲೆಯಾಲೆಯ ಮತ್ತು ಯಹಚಿನವರೆಗೆ ಜನರು ಅರಚಿಕೊಳ್ಳುತ್ತಾರೆ, ಚೋಯರಿನಿಂದ ಹೊರೊನಯಿಮಿನ ಮತ್ತು ಎಗ್ಲತ್ ಶೆಲಿಶೀಯದವರೆಗೆ ಕಿರಿಚಿಕೊಳ್ಳುತ್ತಾರೆ; ನಿಮ್ರೀಮ್ ಹಳ್ಳವೂ ಹಾಳಾಗಿದೆ.