¶ ರೂಬೇನ್ ಕುಲದವರಿಗೂ, ಗಾದ್ ಕುಲದವರಿಗೂ ಬಹಳ ದನಕುರಿಗಳಿದ್ದವು. ಯಗ್ಜೇರ್, ಗಿಲ್ಯಾದ್ ಎಂಬ ಪ್ರದೇಶವನ್ನು ನೋಡಿದಾಗ ಅವು ದನಕುರಿಗಳ ಮೇವಿಗೆ ತಕ್ಕ ಸ್ಥಳವೆಂದು ತಿಳಿದುಕೊಂಡರು.
TSK
TSK · ಅರಣ್ಯಕಾಂಡ 32:33
مراجع Treasury of Scripture Knowledge في ಕನ್ನಡ IRV.
ಎರಡುವರೆ ಗೋತ್ರಗಳು ತಮ್ಮ ಸ್ವತ್ತನ್ನು ಯೊರ್ದನ್ ನದಿಯ ಆಚೆ ಯೆರಿಕೋ ಪಟ್ಟಣದ ಪೂರ್ವದಿಕ್ಕಿನಲ್ಲಿ ಪಡೆದುಕೊಂಡಿದ್ದಾರೆ.”
¶ ತರುವಾಯ ನಾವು ಹಿಂದಿರುಗಿ ಬಾಷಾನಿನ ಮಾರ್ಗವನ್ನು ಹಿಡಿದು ಮೇಲಕ್ಕೆ ಹೋದಾಗ ಬಾಷಾನಿನ ಅರಸನಾದ ಓಗನು ತನ್ನ ಜನರೆಲ್ಲರ ಸಮೇತ ನಮಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೆ ಎದ್ರೈ ಊರಿಗೆ ಹೊರಟುಬಂದನು.
¶ ಆ ಕಾಲದಲ್ಲಿ ನಾವು ಆ ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡೆವು. ಅರ್ನೋನ್ ಹಳ್ಳದ ಬಳಿಯಲ್ಲಿರುವ ಅರೋಯೇರ್ ಮೊದಲುಗೊಂಡು ಗಿಲ್ಯಾದ್ ಸೀಮೆಯ ಮಧ್ಯದ ವರೆಗೂ ಇರುವ ಪ್ರದೇಶವನ್ನೆಲ್ಲಾ ಅದರ ಪಟ್ಟಣಗಳ ಸಹಿತವಾಗಿ ನಾನು ರೂಬೇನ್ಯರಿಗೂ ಮತ್ತು ಗಾದ್ಯರಿಗೂ ಕೊಟ್ಟೆನು.
ಯೆಹೋವನ ಸೇವಕನಾದ ಮೋಶೆಯೂ, ಇಸ್ರಾಯೇಲ್ಯರ ಸಹಿತವಾಗಿ ಆ ಇಬ್ಬರನ್ನು ಸೋಲಿಸಿ ಅವರ ರಾಜ್ಯಗಳನ್ನು ರೂಬೇನ್ಯರಿಗೂ, ಗಾದ್ಯರಿಗೂ, ಮನಸ್ಸೆಯ ಅರ್ಧ ಗೋತ್ರದವರಿಗೂ ಸ್ವತ್ತಾಗಿ ಕೊಟ್ಟನು.
ಈಗ ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನಕ್ಕನುಸಾರವಾಗಿ ನಿಮ್ಮ ಸಹೋದರರಿಗೆ ವಿಶ್ರಾಂತಿಯನ್ನು ದಯಪಾಲಿಸಿರುವುದರಿಂದ, ಆತನ ಸೇವಕನಾದ ಮೋಶೆಯು ಯೊರ್ದನಿನ ಆಚೆಯಲ್ಲಿ ನಿಮಗೆ ಕೊಟ್ಟಿರುವ ಸ್ವತ್ತಿನಲ್ಲಿರುವ ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಬಹುದು.
¶ ರೂಬೇನ್ಯರು, ಗಾದ್ಯರು, ಮನಸ್ಸೆ ಕುಲದ ಅರ್ಧ ಜನರು ಇವರಲ್ಲಿ ರಣವೀರರೂ ಗುರಾಣಿ ಖಡ್ಗಗಳನ್ನು ಹಿಡಿಯುವವರೂ, ಬಿಲ್ಲನ್ನು ಬೊಗ್ಗಿಸುವವರೂ, ಯುದ್ಧ ನಿಪುಣರೂ ಆಗಿರುವ ನಲ್ವತ್ತನಾಲ್ಕು ಸಾವಿರದ ಏಳು ನೂರ ಅರವತ್ತು ಸೈನಿಕರಿದ್ದರು.
ಶ್ರೀಮಂತರೂ ಕುಟುಂಬ ಪ್ರಧಾನರೂ ಆದ ಅವನ ಗೋತ್ರಬಂಧುಗಳು ಎರಡು ಸಾವಿರದ ಏಳುನೂರು ಜನರು. ಅರಸನಾದ ದಾವೀದನು ರೂಬೇನ್, ಗಾದ್ ಅರ್ಧಮನಸ್ಸೆ ಕುಲಗಳವರ ಮೇಲೆ ಇವರನ್ನೇ ದೈವಿಕ ಕಾರ್ಯಗಳಲ್ಲಿಯೂ, ರಾಜಕೀಯ ಕಾರ್ಯಗಳಲ್ಲಿಯೂ ಅಧಿಕಾರಿಗಳನ್ನಾಗಿ ನೇಮಿಸಿದನು.
ಶ್ರೇಷ್ಠ ರಾಜರನ್ನು ಸಂಹರಿಸಿದನು, ಆತನ ಪ್ರೀತಿಯು ಶಾಶ್ವತವಾದದ್ದು.