ಕೆಂಪುಸಮುದ್ರದಿಂದ ಫಿಲಿಷ್ಟಿಯರ ದೇಶದ ಬಳಿಯಲ್ಲಿರುವ ಸಮುದ್ರದವರೆಗೂ ಮತ್ತು ಈ ಅರಣ್ಯದಿಂದ ಯೂಫ್ರೆಟಿಸ್ ಮಹಾನದಿಯವರೆಗೂ ಇರುವ ದೇಶವನ್ನೆಲ್ಲಾ ನಿಮಗಾಗಿ ನೇಮಿಸಿ ಅದರಲ್ಲಿರುವ ನಿವಾಸಿಗಳನ್ನು ನಿಮಗೆ ಅಧೀನಪಡಿಸುವೆನು. ನೀವು ಅವರನ್ನು ಹೊರಡಿಸುವಿರಿ.
TSK
TSK · ಅರಣ್ಯಕಾಂಡ 33:52
مراجع Treasury of Scripture Knowledge في ಕನ್ನಡ IRV.
ಆದರೆ ನೀವು ಅವರ ಯಜ್ಞವೇದಿಗಳನ್ನು ಕೆಡವಿ ಅವರ ಕಲ್ಲುಕಂಬಗಳನ್ನು ಒಡೆದು ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಹಾಕಬೇಕು.
ಯೆಹೋವನು ಅವರನ್ನು ನಿಮಗೆ ಒಪ್ಪಿಸಲು ನೀವು ಅವರನ್ನು ಸಂಪೂರ್ಣವಾಗಿ ಸಂಹರಿಸಬೇಕು. ಅವರ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು ಹಾಗು ಅವರಿಗೆ ಕನಿಕರ ತೋರಬಾರದು.
¶ ನೀವು ಸ್ವಾಧೀನಮಾಡಿಕೊಳ್ಳುವ ದೇಶದ ಜನಾಂಗಗಳು ದೊಡ್ಡ ಬೆಟ್ಟಗಳ ಮೇಲೆಯೂ, ದಿಣ್ಣೆಗಳ ಮೇಲೆಯೂ ಹರಡಿಕೊಂಡು, ಮರಗಳ ಕೆಳಗೂ ತಮ್ಮ ದೇವರುಗಳನ್ನು ಆರಾಧಿಸುತ್ತಾರಷ್ಟೆ; ಆ ಸ್ಥಳಗಳನ್ನೆಲ್ಲಾ ನೀವು ತಪ್ಪದೆ ನಾಶಮಾಡಬೇಕು.
ಆದರೆ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವಂತಕ್ಕಾಗಿ ಕೊಡುವ ಈ ಜನಾಂಗಗಳ ಪಟ್ಟಣಗಳ ವಿಷಯದಲ್ಲಿ ಹಾಗೆ ಮಾಡದೆ ಉಸಿರಾಡುವ ಒಬ್ಬರನ್ನಾದರೂ ಉಳಿಸಬಾರದು.
ಆಗ ಇಸ್ರಾಯೇಲ್ಯರು ಹಿವ್ವಿಯರಾದ ಅವರಿಗೆ “ಬಹುಶಃ ನೀವು ನಮ್ಮ ದೇಶದ ನಿವಾಸಿಗಳೇ ಆಗಿರಬಹುದು. ಹೀಗಿರುವುದರಿಂದ ನಾವು ನಿಮ್ಮ ಸಂಗಡ ಒಪ್ಪಂದ ಮಾಡಿಕೊಳ್ಳುವುದು ಹೇಗೆ?” ಎಂದು ಉತ್ತರಕೊಟ್ಟರು.
ಯೆಹೋವನ ಸೇವಕನಾದ ಮೋಶೆಯು ದೇವರು ತನಗೆ ಹೇಳಿದ್ದನ್ನೆಲ್ಲಾ ಯೆಹೋಶುವನಿಗೆ ಹೇಳಿದ್ದನು. ಯೆಹೋಶುವನು ಅದರಂತೆಯೇ ಮಾಡಿದನು, ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಮೀರಲಿಲ್ಲ.
ನೀವು ಈ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು; ಅವರ ಯಜ್ಞವೇದಿಗಳನ್ನು ಕೆಡವಿಬಿಡಬೇಕು’ ಎಂದು ಆಜ್ಞಾಪಿಸಿದೆನು. ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ. ಹೀಗೆ ಯಾಕೆ ಮಾಡಿದಿರಿ?
ಅನ್ಯ ಜನಾಂಗದವರನ್ನು ಸಂಹರಿಸಬೇಕೆಂಬ, ಯೆಹೋವನ ಆಜ್ಞೆಗೆ ಅವಿಧೇಯರಾಗಿ,