TSK

TSK · ಅರಣ್ಯಕಾಂಡ 35:30

مراجع Treasury of Scripture Knowledge في ಕನ್ನಡ IRV.

العودة إلى المقطع

¶ “‘ಯಾವನಾದರೂ ಕಬ್ಬಿಣದ ಆಯುಧದಿಂದ ಮತ್ತೊಬ್ಬನನ್ನು ಹೊಡೆದು ಕೊಂದರೆ ಅವನು ನರಹತ್ಯೆ ಮಾಡಿದವನೆಂದು ನೀವು ನಿರ್ಣಯಿಸಬೇಕು. ಅಂಥವನಿಗೆ ಮರಣಶಿಕ್ಷೆಯಾಗಬೇಕು.

¶ ಯಾವ ದೋಷದ ಅಥವಾ ಅಪರಾಧದ ವಿಷಯದಲ್ಲೂ ಒಬ್ಬನೇ ಒಬ್ಬನ ಸಾಕ್ಷಿಯನ್ನು ನೀವು ಅಂಗೀಕರಿಸಬಾರದು. ನಡೆದ ಸಂಗತಿ ರುಜುವಾತಾಗುವುದಕ್ಕೆ ಇಬ್ಬರ ಇಲ್ಲವೆ ಮೂವರ ಸಾಕ್ಷಿಗಳು ಬೇಕು.

ಅವನು ಅವರಿಗೆ “ನಮ್ಮ ಧರ್ಮಶಾಸ್ತ್ರವು ಮೊದಲು ಒಬ್ಬನನ್ನು ವಿಚಾರಿಸಿ ಅವನು ಮಾಡುವುದೇನೆಂದು ತಿಳಿದುಕೊಳ್ಳದೆ ಅವನ ವಿಷಯವಾಗಿ ಖಂಡನೆ ಮಾಡುವುದುಂಟೇ?” ಎಂದು ಹೇಳಿದ್ದಕ್ಕೆ,

¶ ನಾನು ನಿಮ್ಮ ಬಳಿಗೆ ಮೂರನೆಯ ಸಾರಿ ಬರುತ್ತಿದ್ದೇನೆ. “ಯಾವ ದೂರಿದ್ದರೂ ಅದಕ್ಕೆ ಇಬ್ಬರು ಮೂವರು ಸಾಕ್ಷಿಗಳ ಆಧಾರವಿರಬೇಕು,” ಎಂದು ಲಿಖಿತವಾಗಿದೆ.

ಮೋಶೆಯ ಧರ್ಮಶಾಸ್ತ್ರವನ್ನು ತಿರಸ್ಕಾರ ಮಾಡಿದವನಿಗೆ ಇಬ್ಬರ ಇಲ್ಲವೆ ಮೂವರ ಸಾಕ್ಷ್ಯಧಾರದ ಮೇಲೆ ಕರುಣೆಯಿಲ್ಲದೆ ಮರಣದಂಡನೆ ಆಗುತ್ತಿತಷ್ಟೆ.