TSK

TSK · ಅರಣ್ಯಕಾಂಡ 5:9

مراجع Treasury of Scripture Knowledge في ಕನ್ನಡ IRV.

العودة إلى المقطع

ಅದಕ್ಕೆ ಹುಳಿಹಿಟ್ಟು ಸೇರಿಸಿ ಸುಡಬಾರದು. ನನಗೆ ಹೋಮರೂಪವಾಗಿ ಸಮರ್ಪಿಸಿದ ದ್ರವ್ಯಗಳಲ್ಲಿ ಅದನ್ನು ಅವರ ಪಾಲಿಗೆ ಬಿಟ್ಟಿದ್ದೇನೆ. ದೋಷಪರಿಹಾರಕ ಯಜ್ಞದ್ರವ್ಯದಂತೆಯೂ ಮತ್ತು ಪ್ರಾಯಶ್ಚಿತ್ತ ಯಜ್ಞದ್ರವ್ಯದಂತೆಯೂ ಅದು ಮಹಾಪರಿಶುದ್ಧವಾದದ್ದು.

ಹೋಮಶೇಷವನ್ನು ಯಾಜಕರಲ್ಲಿ ಗಂಡಸರೆಲ್ಲರೂ ತಿನ್ನಬಹುದು; ಅದು ಮಹಾಪರಿಶುದ್ಧವಾದುದರಿಂದ ಪವಿತ್ರಸ್ಥಳದೊಳಗೆ ಅದನ್ನು ತಿನ್ನಬೇಕು.

“ಆರೋನನೂ ಮತ್ತು ಅವನ ಮಕ್ಕಳೂ ತಾವು ಅಶುದ್ಧರಾಗಿರುವಾಗ ಇಸ್ರಾಯೇಲರಿಂದ ನನಗೆ ಸಮರ್ಪಿಸಲ್ಪಟ್ಟ ಪರಿಶುದ್ಧ ದ್ರವ್ಯಗಳನ್ನು ಮುಟ್ಟಬಾರದೆಂದು ಅವರಿಗೆ ಆಜ್ಞಾಪಿಸು. ಅವರು ನನ್ನ ಪರಿಶುದ್ಧ ನಾಮದ ಘನತೆಗೆ ಕುಂದನ್ನು ತರಬಾರದು; ನಾನು ಯೆಹೋವನು.

ಇಸ್ರಾಯೇಲರು ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸುವ ದೇವರ ವಸ್ತುಗಳೆಲ್ಲಾ ನಿನಗೂ, ನಿನ್ನ ಸಂತತಿಯವರಾದ ಸ್ತ್ರೀಪುರುಷರೆಲ್ಲರಿಗೂ ಸದಾಕಾಲವೂ ಸಲ್ಲಬೇಕೆಂದು ನಾನು ಅನುಗ್ರಹಮಾಡಿದ್ದೇನೆ. ಇದು ಯೆಹೋವನ ಸನ್ನಿಧಿಯಲ್ಲಿ ನಿನ್ನೊಡನೆಯೂ, ನಿನ್ನ ಸಂತತಿಯೊಡನೆಯೂ ಮಾಡಲ್ಪಟ್ಟ ಶಾಶ್ವತವಾದ ಉಪ್ಪಿನ ಒಡಂಬಡಿಕೆಯಾಗಬೇಕು” ಎಂದು ಹೇಳಿದನು.

¶ ಜನರ ಕಡೆಯಿಂದ ಯಾಜಕರು ಹೊಂದಬೇಕಾದವುಗಳು ಯಾವುವೆಂದರೆ: ದನಗಳಲ್ಲಿಯಾಗಲಿ, ಆಡು ಮತ್ತು ಕುರಿಗಳಲ್ಲಿಯಾಗಲಿ ಪಶುವನ್ನು ಕೊಯಿದು ಯಜ್ಞಮಾಡುವವರೆಲ್ಲರೂ ಅದರ ಮುಂದೊಡೆಯನ್ನೂ, ಎರಡು ದವಡೆಗಳನ್ನೂ, ಕೋಷ್ಠವನ್ನೂ (ಒಳಭಾಗವನ್ನು) ಯಾಜಕರಿಗೆ ಕೊಡಬೇಕು.

“ನರಮನುಷ್ಯನು ದೇವರಿಂದ ಕದ್ದುಕೊಳ್ಳಬಹುದೇ? ನೀವೋ ನನ್ನಿಂದ ಕದ್ದುಕೊಳ್ಳುತ್ತಿದ್ದೀರಿ. ‘ನಿನ್ನಿಂದ ಏನು ಕದ್ದುಕೊಂಡಿದ್ದೇವೆ?’ ಎಂದು ಕೇಳುತ್ತೀರೋ. ದಶಮಾಂಶವನ್ನು, ನನಗೋಸ್ಕರ ಪ್ರತ್ಯೇಕಿಸಬೇಕಾದ ಪದಾರ್ಥ, ಇವುಗಳನ್ನೇ.